ಜಿಲ್ಲಾಡಳಿತದಿಂದ ಮತದಾನಕ್ಕೆ ಸಕಲ ಸಿದ್ಧತೆ


Team Udayavani, Apr 17, 2019, 3:00 AM IST

jilladalita

ಚಾಮರಾಜನಗರ: ಗುರುವಾರ ನಡೆಯಲಿರುವ ಲೋಕಸಭಾ ಚುನಾವಣೆಯ ಮತದಾನಕ್ಕೆ ಜಿಲ್ಲಾಡಳಿತ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಶಾಂತಿಯುತ, ಸುಗಮ ಮತದಾನಕ್ಕೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 16,86,023 ಮತದಾರರಿದ್ದಾರೆ. ಇವರಲ್ಲಿ 8,42,742 ಮಂದಿ ಪುರುಷರು ಹಾಗೂ 8,43,167 ಮಂದಿ ಮಹಿಳೆಯರು. ಇತರರು 114 ಮಂದಿ ಇದ್ದಾರೆ. ಕ್ಷೇತ್ರದಲ್ಲಿ ಒಟ್ಟು 2005 ಮತಗಟ್ಟೆಗಳನ್ನು ತೆರೆಯಲಾಗಿದೆ. ಇವುಗಳಲ್ಲಿ 261 ನಗರ ಪ್ರದೇಶದಲ್ಲಿದ್ದು, 1744 ಮತಗಟ್ಟೆಗಳು ಗ್ರಾಮೀಣ ಪ್ರದೇಶದಲ್ಲಿವೆ ಎಂದರು.

ಎರಡು ಹಂತದಲ್ಲಿ ತರಬೇತಿ: ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸಲು 2205 ಮತಗಟ್ಟೆ ಅಧಿಕಾರಿಗಳು, 2205 ಸಹಾಯಕ ಮತಗಟ್ಟೆ ಅಧಿಕಾರಿಗಳು ಹಾಗೂ 4410 ಮಂದಿ 2ನೇ ಮತ್ತು 3ನೇ ಮತಗಟ್ಟೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಈ ಎಲ್ಲಾ ಅಧಿಕಾರಿಗಳಿಗೆ ಎರಡು ಹಂತದಲ್ಲಿ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.

ಬಳಕೆಗೆ ಯೋಗ್ಯವಾಗಿವೆ: ಒಟ್ಟು 2005 ಮತಗಟ್ಟೆಗಳಲ್ಲಿ 2370 ಬ್ಯಾಲೆಟ್‌ ಯೂನಿಟ್‌ಗಳನ್ನು, 2321 ಕಂಟ್ರೊಲ್‌ ಯೂನಿಟ್‌ಗಳನ್ನು ಹಾಗೂ 2511 ವಿವಿ ಪ್ಯಾಟ್‌ಗಳನ್ನು ಬಳಸಿಕೊಳ್ಳಲಾಗುತ್ತಿದೆ. ಇವುಗಳನ್ನು ಬಿಇಎಲ್‌ ಸಂಸ್ಥೆಯ ಎಂಜಿನಿಯರ್‌ಗಳಿಂದ ಪರಿಶೀಲಿಸಲಾಗಿದೆ. ಇವುಗಳು ಬಳಕೆಗೆ ಯೋಗ್ಯವಾಗಿದೆ ಎಂದು ದೃಢೀಕರಿಸಲಾಗಿದೆ ಎಂದರು.

ಛಾಯಾಚಿತ್ರ ನಿಷೇಧ: ಮತದಾನದಂದು ಮತಗಟ್ಟೆಯೊಳಗೆ ಮೊಬೈಲ್‌, ಕ್ಯಾಮೆರಾಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ಮತದಾನದ ಛಾಯಾಚಿತ್ರಗಳನ್ನು ತೆಗೆಯುವುದು ನಿಯಮವನ್ನು ಉಲ್ಲಂಘಿಸಿದಂತಾಗುತ್ತದೆ. ಮತಗಟ್ಟೆ ಸ್ಥಳದಿಂದ ಕನಿಷ್ಠ 100 ಮೀಟರ್‌ ದೂರದಲ್ಲಿ ಅಭ್ಯರ್ಥಿಗಳಿಗೆ ತಮ್ಮ ಟೇಬಲ್‌ ಸ್ಥಾಪಿಸಲು ಅವಕಾಶ ನೀಡಲಾಗಿದೆ.

ಎಲ್ಲಾ ಅಭ್ಯರ್ಥಿಗಳು ಮತಗಟ್ಟೆಗೆ ಒಬ್ಬರಂತೆ ಏಜೆಂಟರನ್ನು ನೇಮಿಸಬಹುದಾಗಿದೆ. ಒಂದು ವೇಳೆ ಮತದಾರರ ಗುರುತಿನ ಚೀಟಿ ಇಲ್ಲದಿದ್ದಲ್ಲಿ ಚುನಾವಣಾ ಆಯೋಗ ತಿಳಿಸಿದ ಯಾವುದಾದರು 11 ದಾಖಲಾತಿಗಳಲ್ಲಿ ಒಂದನ್ನು ತೋರಿಸಿ ಮತಚಲಾಯಿಸಬಹುದಾಗಿದೆ ಎಂದು ತಿಳಿಸಿದರು.

ಪ್ರಸಾರ ನಿಷೇಧ: ದೇಶದಲ್ಲಿ ವಿವಿಧ ಹಂತಗಳಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಏ.11 ರಿಂದ ಮೇ 19ರವರೆಗೆ ಯಾವುದೇ ರೀತಿಯ ಮತಗಟ್ಟೆ ನಿರ್ಗಮನ ಸಮೀಕ್ಷೆ ನಡೆಸುವುದು ಹಾಗೂ ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ ಎಂದರು.

ಮದ್ಯ ಮಾರಾಟ ನಿಷೇಧ: ಏ.16ರ ಸಂಜೆ 6 ಗಂಟೆಯಿಂದ ಏ.18ರ ಮಧ್ಯರಾತ್ರಿ ತನಕ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಏ.18ರಂದು ನಡೆಯಬೇಕಿದ್ದ ಎಲ್ಲಾ ಸಂತೆ, ಜಾತ್ರೆ ಹಾಗೂ ಉತ್ಸವಗಳನ್ನು ರದ್ದುಪಡಿಸಲಾಗಿದೆ ಎಂದರು.

ಮತದಾನ ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಆದರೆ, ಮತದಾನ ಮುಕ್ತಾಯ ಅವಧಿ ಸಮಯದಲ್ಲಿ ಸರದಿ ಸಾಲು ಇದ್ದಲ್ಲಿ. ಸಾಲಿನಲ್ಲಿರುವವರಿಗೆ ಮತದಾನ ಮಾಡಲು ಅವಕಾಶ ನೀಡಲಾಗುವುದು. ಸರಿಯಾಗಿ 6 ಗಂಟೆಗೆ ಮತಗಟ್ಟೆ ಅಧಿಕಾರಿ ಸಾಲಿನಲ್ಲಿ ನಿಂತಿದ್ದವರಿಗೆ ಟೋಕನ್‌ ನೀಡಲಿದ್ದಾರೆ.

ನಂತರ ಬಂದು ಸೇರಿಕೊಂಡವರಿಗೆ ಮತದಾನ ಮಾಡಲು ಅವಕಾಶ ನೀಡಲಾಗುವುದಿಲ್ಲ ಎಂದರು. ಮತಗಟ್ಟೆಯಲ್ಲಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ಸಾಲಿನ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ವಿಕಲಚೇತನರು ಮತ್ತು ಹಿರಿಯ ನಾಗರಿಕರಿಗೆ ಪ್ರತ್ಯೇಕ ಸಾಲಿನ ವ್ಯವಸೆœ ಮಾಡಲಾಗಿದ್ದು ಎಂದು ಹೇಳಿದರು.

ಚುನಾವಣಾ ನೀತಿ ಸಂಹಿತೆ ಜಾರಿಗೊಂಡ ನಂತರ ಚಾಮರಾಜನಗರ‌ ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳನ್ನು ದಾಖಲು ಮಾಡಿಕೊಂಡು 14,11,961 ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಅಂದಾಜು 48,76,107 ರೂ. ಮೌಲ್ಯದ ಮದ್ಯವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಧರ್ಮೇಂದರ್‌ಕುಮಾರ್‌ ಮೀನಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್‌. ಲತಾಕುಮಾರಿ ಉಪಸ್ಥಿತರಿದ್ದರು.

10 ಸಖೀ, 4 ಬುಡಕಟ್ಟು , 2 ವಿಕಲಚೇತನ ಮತಗಟ್ಟೆ ಸ್ಥಾಪನೆ
ಚಾಮರಾಜನಗರ:
ಜಿಲ್ಲೆಯ ವ್ಯಾಪ್ತಿಯಲ್ಲಿ ಒಟ್ಟು 10 ಸಖೀ ಮತಗಟ್ಟೆ, 4 ಬುಡಕಟ್ಟು ,2 ವಿಕಲಚೇತನ ಮತಗಟ್ಟೆ ಮತಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ವಿಶೇಷ ವ್ಯವಸ್ಥೆ ಒದಗಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಸ್‌. ಲತಾಕುಮಾರಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚಾಮರಾಜನಗರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ 10 ಸಖೀ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಮತಗಟ್ಟೆಗಳಲ್ಲಿ ಮಹಿಳಾ ಸಿಬ್ಬಂದಿಯೇ ಕಾರ್ಯನಿರ್ವಹಸಲಿದ್ದಾರೆ. ಹನೂರು ಕ್ಷೇತ್ರದಲ್ಲಿ 2, ಕೊಳ್ಳೇಗಾಲದಲ್ಲಿ 3, ಚಾಮರಾಜನಗರದಲ್ಲಿ 3 ಮತ್ತು ಗುಂಡ್ಲುಪೇಟೆಯಲ್ಲಿ 2 ಸೇರಿದಂತೆ 10 ಮತಗಟ್ಟೆ ಮತ್ತು 4 ವಿಧಾನಸಭಾ ಕ್ಷೇತ್ರಗಲ್ಲೂ ತಲಾ ಒಂದರಂತೆ 4 ಬುಡಕಟ್ಟು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಮತ್ತು ಚಾಮರಾಜನಗರ ವಿಧಾನ ಸಭಾ ಕ್ಷೇತ್ರಗಳಲ್ಲಿ ತಲಾ ಒಂದರಂತೆ ಎರಡು 7 ವಿಕಲಚೇತನ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಎಲ್ಲಾ ಮತಗಟ್ಟೆಗಳಿಗೆ ವೀಲ್‌ಚೇರ್‌ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಹಿರಿಯರಿಗೆ, ಅಂಗವಿಕಲರಿಗೆ, ಗರ್ಭಿಣಿಯರಿಗೆ ಮತಗಟ್ಟೆಗೆ ಬರಲು ಅನುಕೂಲವಾಗುವಂತೆ ವಾಹನದ ವ್ಯವಸ್ಥೆ ಮಾಡಲಾಗಿದೆ. ದೃಷ್ಟಿ ದೋಷವುಳ್ಳವರಿಗೆ ಸಹಾಯವಾಗಲು ಬ್ರೈಲ್‌ ಮತ ಪತ್ರಗಳನ್ನು ಕೂಡ ಪ್ರತಿ ಮತಗಟ್ಟೆಗೆ ಸರಬರಾಜು ಮಾಡಲಾಗಿದೆ. ಅಶಕ್ತರಿಗೆ ನೆರವು ನೀಡಲು ಪ್ರತಿ ಮತಗಟ್ಟೆಯಲ್ಲಿ ಸ್ವಯಂಸೇವಕರೊಬ್ಬರು ಇರುತ್ತಾರೆ ಎಂದು ಸಿಇಒ ತಿಳಿಸಿದರು.

2 ಸಾವಿರ ಪೊಲೀಸರ ನಿಯೋಜನೆ
ಚಾಮರಾಜನಗರ: ಲೋಕಸಭಾ ಚುನಾವಣೆ ಮತದಾನದ ದಿನ ಜಿಲ್ಲೆಯಲ್ಲಿ ಶಾಂತಿಯುತ ಮತದಾನಕ್ಕಾಗಿ ಭದ್ರತೆಗಾಗಿ 2 ಸಾವಿರಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಎಸ್ಪಿ ಧರ್ಮೇಂದರ್‌ ಕುಮಾರ್‌ ಮೀನಾ ತಿಳಿಸಿದರು.

ಅಂದು ಮತಗಟ್ಟೆಯ ಸುತ್ತಲಿನ 200 ಮೀಟರ್‌ ವ್ಯಾಪ್ತಿ ಪ್ರದೇಶದಲ್ಲಿ ಸೆಕ್ಷನ್‌ 144ರ ಪ್ರಕಾರ ಬೆಳಗ್ಗೆ 7ರಿಂದ ಮತದಾನ ಮುಗಿಯುವ ತನಕ ನಿಷೇಧಾಜ್ಞೆ ವಿಧಿಸಲಾಗಿದೆ. ನಿಷೇಧಿತ ಪ್ರದೇಶದಲ್ಲಿ ಮೆರವಣಿಗೆ ಅಥವಾ 5 ಮಂದಿಗಿಂತ ಹೆಚ್ಚು ಜನ ಸೇರುವುದನ್ನು ನಿಷೇಧಿಸಲಾಗಿದೆ. ಯಾವುದೇ ರೀತಿಯ ಮಾರಕಾಸ್ತ್ರ, ಶಸ್ತ್ರಾಸ್ತ್ರ, ಸ್ಫೋಟಕ ವಸ್ತು ಒಯ್ಯುವುದನ್ನು, ಪ್ರತಿಕೃತಿ ಪ್ರದರ್ಶನ, ದಹನ, ಬಹಿರಂಗ ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.