ಅಭಿವೃದ್ಧಿ ವಿಚಾರದಲ್ಲಿ ಎಲ್ಲಾ ಸಮುದಾಯಕ್ಕೂ ಆದ್ಯತೆ: ಶಾಸಕ


Team Udayavani, Nov 28, 2022, 2:44 PM IST

tdy-10

ಗುಂಡ್ಲುಪೇಟೆ: ಅಭಿವೃದ್ಧಿ ವಿಚಾರದಲ್ಲಿ ಎಲ್ಲಾ ಸಮುದಾಯಗಳಿಗೆ ಆದ್ಯತೆ ನೀಡುವ ಮೂಲಕ ತಾಲೂಕಿನಲ್ಲಿ 50 ಗ್ರಾಮಗಳಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ತಲಾ 50 ಲಕ್ಷ ರೂಪಾಯಿ ಅನುದಾನ ನೀಡಲಾಗಿದೆ ಎಂದು ಶಾಸಕ ಸಿ.ಎಸ್‌. ನಿರಂಜನಕುಮಾರ್‌ ತಿಳಿಸಿದರು.

ತಾಲೂಕಿನ ಪಡುಗೂರು ಗ್ರಾಮದಲ್ಲಿ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಇಲಾಖೆ ವತಿಯಿಂದ 50 ಲಕ್ಷ ರೂ. ವೆಚ್ಚದಲ್ಲಿ ಸಾಮಾನ್ಯ ವರ್ಗದ ಬೀದಿಯ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಸ್ವತಂತ್ರ ಬಂದು 75 ವರ್ಷವಾಗಿದ್ದರು ಸಹ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಮೂಲ ಸೌಲಭ್ಯಗಳು ಇಲ್ಲದಿರುವುದು ಬೇಸರ ವಿಚಾರ. ಹಾಗಾದರೆ ಹಿಂದಿನ ಜನಪ್ರತಿನಿಧಿ 25 ವರ್ಷ ಏನು ಮಾಡುತ್ತಿದ್ದರು ಎಂಬುದೇ ಪ್ರಶ್ನೆಯಾಗಿದೆ ಎಂದರು.

ತಾಲೂಕಿನ ಯುವ ಸಮುದಾಯ ಮತ್ತು ದುಡಿಯುವ ಕೈಗಳಿಗೆ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ತೊಂಡವಾಡಿ ಗ್ರಾಮದ ಬಳಿ ದೊಡ್ಡ ಪ್ರಮಾಣದ ಕೈಗಾರಿಕೆ ಸ್ಥಾಪನೆ ಆಗುವ ನಿರೀಕ್ಷೆ ಇದೆ. ಕಂಪನಿಯೊಂದು ಕೈಗಾರಿಕೆ ಸ್ಥಾಪನೆ ಮಾಡಿದ್ದು, ಇದಕ್ಕೆ ಪೂರಕ ಸಹಕಾರ ನೀಡಿದ್ದೇವೆ ಎಂದು ತಿಳಿಸಿದರು.

ಕ್ಷೇತ್ರ ವ್ಯಾಪ್ತಿಯ ದೊಡ್ಡ ಗ್ರಾಮ ಗುರುತು ಮಾಡಿ ಕೆಲಸ ಮಾಡುತ್ತಿದ್ದು, ಪಡುಗೂರಿನ ಜನರು ಬೇಡಿಕೆ ಸಲ್ಲಿಸದಿದ್ದರೂ 50 ಲಕ್ಷ ಅನುದಾನ ನೀಡಿದ್ದೇನೆ. ಈ ಭಾಗದ ಪ್ರಮುಖ ಶೈಕ್ಷಣಿಕ ಮತ್ತು ರಾಜಕೀಯ ಶಕ್ತಿ ಕೇಂದ್ರ ಕಬ್ಬಹಳ್ಳಿ ಗ್ರಾಮದ ಸುತ್ತಲಿನ ಮೂರು ದಿಕ್ಕುಗಳ ಪಡಗೂರು, ಶೀಗೆವಾಡಿ, ಹುಣಸಿನಪುರ ರಸ್ತೆ ಅಭಿವೃದ್ಧಿ ಆಗುತ್ತಿವೆ ಎಂದರು.

ತಾಲೂಕಿನ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಪ್ರಾಮಾಣಿಕ ಕೆಲಸ ಆಗುತ್ತಿದೆ. ಆಲಂಬೂರು ಏತ ನೀರಾವರಿ ಯೋಜನೆಯಡಿ ಕೆರೆಗಳಿಗೆ ನೀರು ಹರಿಸಲಾಗುತ್ತಿದೆ. ನಲ್ಲೂರು ಅಮಾನಿ ಕೆರೆಯೂ ತುಂಬುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿ, ಗ್ರಾಮದ ಉಪ್ಪಾರ ಬೀದಿಗೆ ಮೂಲಸೌಲಭ್ಯ ಒದಗಿಸುವ ಭರವಸೆ ನೀಡಿದರು.

ನಂತರ ಶಾಸಕರು ಗ್ರಾಮದ ಡೇರಿ ಬಳಿ ನಿರ್ಮಾಣಗೊಂಡಿರುವ ಪಶು ಆಸ್ಪತ್ರೆಯನ್ನು ಉದ್ಘಾಟಿಸಿದರು. ಪಶು ವೈದ್ಯರ ನಿಯೋಜನೆ ಭರವಸೆ ನೀಡಿದರು.

ದೇವರಹಳ್ಳಿ ಗ್ರಾಮದಲ್ಲಿ ರಸ್ತೆ ನಿರ್ಮಾಣಕ್ಕೆ ಚಾಲನೆ: ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿಯೂ ಸಹ 50 ಲಕ್ಷ ರೂ. ವೆಚ್ಚದಲ್ಲಿ ಸಾಮಾನ್ಯ ವರ್ಗದ ಬೀದಿಗಳ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಎಸ್‌.ನಿರಂಜನಕುಮಾರ್‌ ಚಾಲನೆ ನೀಡಿದರು.

ನಂತರ ಮಾತನಾಡಿ, ನಿರೀಕ್ಷೆಗೂ ಮೀರಿ ಅಭಿವೃದ್ಧಿ ಕೆಲಸಗಳನ್ನು ಮಾಡ ಲಾಗಿದ್ದು, ಮುಂದಿನ ಚುನಾವಣೆಯಲ್ಲಿ ಸಹಕಾರ ಹೆಚ್ಚಿನ ರೀತಿಯಲ್ಲಿರಲಿ ಎಂದು ಕೋರಿದರು.

ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಎಚ್‌.ಎಂ.ಮಹೇಶ್‌, ಉಪಾಧ್ಯಕ್ಷ ಮಳವಳ್ಳಿಮಹೇಶ್‌, ನಿರ್ದೇಶಕ ಚನ್ನಮಲ್ಲೀಪುರ ಬಸವಣ್ಣ, ಬಿಜೆಪಿ ಮಂಡಲ ಅಧ್ಯಕ್ಷ ದೊಡ್ಡಹುಂಡಿ ಜಗದೀಶ, ಕಬ್ಬಹಳ್ಳಿಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಮಹದೇವಪ್ರಸಾದ್‌, ಉಪಾಧ್ಯಕ್ಷಮಹೇಶ ಕಲ್ಲಹಳ್ಳಿ, ಗ್ರಾಪಂ ಸದಸ್ಯ ನಟೇಶ್‌, ಗ್ರಾಮದ ಹಿರಿಯಮುಖಂಡರಾದ ಬಸವರಾಜಪ್ಪ, ಮಲ್ಲೇಶ, ಎಪಿಎಂಸಿ ನಿರ್ದೇಶಕಿ ಭಾಗ್ಯ, ತಾಪಂ ಮಾಜಿ ಸದಸ್ಯರಾದ ಶಿವಗನಾಗು, ರೇವಣ್ಣ, ಎಂ.ಸಂತೋಷ್‌ ಇತರರು ಇದ್ದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.