ಪ್ರತಿ ಹಳ್ಳಿಯಲ್ಲೂ ರೈತರು ರಚನಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಿ

Team Udayavani, Feb 15, 2021, 4:18 PM IST

ಪ್ರತಿ ಹಳ್ಳಿಯಲ್ಲೂ ರೈತರು ರಚನಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಿ

ಚಾಮರಾಜನಗರ: ಎಲ್ಲರೂ ಸೇರಿ ಸಮಾನವಾಗಿ ರೈತ ಚಳವಳಿ ಕಟ್ಟಬೇಕು. ಅಧ್ಯಕ್ಷ, ‌ ಉಪಾಧ್ಯಕ್ಷ ನಾಯಕತ್ವ ಕಾಯಿಲೆಯಿಂದ ಹೊರಬರಬೇಕು. ರೈತ ಸಂಘಟನೆಯ ಒಳಗೆ ಇರುವ ಕಾರ್ಯವೈಖರಿ ಹಾಗೂ ಸಂಸ್ಕೃತಿ ಬದಲಾಗಬೇಕು ಎಂದು ಅಮೃತಭೂಮಿ ಅಂತಾರಾಷ್ಟ್ರೀಯ ಸುಸ್ಥಿರಅಭಿವೃದ್ಧಿ ಕೇಂದ್ರದ ಕಾರ್ಯನಿರ್ವಾಹಕ ಧರ್ಮದರ್ಶಿ, ರೈತ ನಾಯಕಿ ಚುಕ್ಕಿ ನಂಜುಂಡಸ್ವಾಮಿ ತಿಳಿಸಿದರು.

ತಾಲೂಕಿನ ಹೊಂಡರಬಾಳು ಗ್ರಾಮದ ಬಳಿಇರುವ ಪ್ರೊ. ಎಂ.ಡಿ. ಎನ್‌. ಸ್ಮಾರಕಅಮೃತಭೂಮಿಯ ಅಂತಾರಾಷ್ಟ್ರೀಯ ಸುಸ್ಥಿರ ಅಭಿವೃದ್ಧಿ ಕೇಂದ್ರದಲ್ಲಿ ಆಯೋಜಿಸಿದ್ದ ವಿಶ್ವ ರೈತ ಚೇತನ ಪ್ರೊ ಎಂ.ಡಿ.ನಂಜುಂಡಸ್ವಾಮಿ ಅವರ 85ನೇವರ್ಷದ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಮಗೆ ಗೊತ್ತಿಲ್ಲದ ಹಾಗೇ ನಮ್ಮೊಳಗೆ ಒಂದು ಕಾಯಿಲೆ ಬಂದಿದೆ. ಅದು ಅಧ್ಯಕ್ಷ ಹಾಗೂ ನಾಯಕತ್ವದಕಾಯಿಲೆ. ಎಲ್ಲರೂ ಒಗ್ಗಟ್ಟಿನಿಂದಹೋರಾಡಬೇಕೆ ಹೊರತು, ಒಬ್ಬ ನಾಯಕನನ್ನು ಮುಂದಿಟ್ಟುಕೊಂಡು ಹೋರಾಡುವುದು ಸುಳ್ಳು. ವೇದಿಕೆ ಸಂಸ್ಕೃತಿಯನ್ನು ಬಿಟ್ಟು ಎಲ್ಲರೂ ಸಮಾನವಾಗಿ ಚಳವಳಿ ಕಟ್ಟಬೇಕು. ಜಿಲ್ಲಾಧಿಕಾರಿ ಕಚೇರಿ, ವಿಧಾನಸೌಧ ಮುತ್ತಿಗೆ ಮಾಡುವುದರ ಜೊತೆಗೆ ಬೇಕಾದ ಮಾದರಿಯನ್ನು ನಾವೇ ಕಟ್ಟಿಕೊಳ್ಳಬೇಕಿದೆ ಎಂದು ಹೇಳಿದರು.

ಪ್ರೊ ಎಂ.ಡಿ.ನಂಜುಂಡಸ್ವಾಮಿ ತಮ್ಮ ಇಡೀ ಜೀವನವನ್ನು ಸಾಮಾಜಿಕ ಬದಲಾವಣೆ ಹಾಗೂಅನಕ್ಷರತೆ, ಮೌಡ್ಯಕ್ಕೆ ಸಿಲುಕಿರುವ ವರ್ಗಕ್ಕೆಮೀಸಲಿಟ್ಟರು. ರೈತರು ರಚನಾತ್ಮಕ ಕೆಲಸಗಳನ್ನು ಪ್ರತಿ ಹಳ್ಳಿ ಹಳ್ಳಿಗಳಲ್ಲೂ ಮಾಡಬೇಕಿದೆ.ಚಳವಳಿಯನ್ನು ಹಳ್ಳಿಗಳಲ್ಲಿ ಕಟ್ಟುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಇದಕ್ಕೂ ಮುನ್ನ ಗಣ್ಯರು ಪ್ರೊ ಎಂ.ಡಿ.ನಂಜುಂಡಸ್ವಾಮಿ ಸ್ಮಾರಕದ ಬಳಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಅವರಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿ ನಮಿಸಿದರು. ಬಳಿಕ ರಕ್ತದಾನ ಶಿಬಿರದಲ್ಲಿ ಹಲವರು ರಕ್ತದಾನ ಮಾಡಿದರು. ಇದೇ ಸಂದರ್ಭದಲ್ಲಿ ನಂಜನಗೂಡು

ತಾಲೂಕಿನ ಕಳಲೆ ಗ್ರಾಮಸ್ಥರು ಸ್ವಯಂಪ್ರೇರಿತವಾಗಿ ರೈತ ಸಂಘಕ್ಕೆ ಸೇರ್ಪಡೆಯಾದರು. ಅವರಿಗೆ ಹಸಿರು ಶಾಲು ಹಾಕಿ ರೈತ ದೀಕ್ಷೆ ನೀಡಲಾಯಿತು. ಈ ವೇಳೆ ಚಿಂತಕ ಕೆ.ಪಿ. ಸುರೇಶ, ರಾಮಣ್ಣ, ಹೊನ್ನೂರು ಪ್ರಕಾಶ್‌, ಗುರುಪ್ರಸಾದ್‌, ಮಲ್ಲಿಕಾರ್ಜುನ, ವಿದ್ಯಾಸಾಗರ ಮತ್ತಿತರರು ಉಪಸ್ಥಿತರಿದ್ದರು.

ಹಳ್ಳಿ ಹೆಣ್ಣ ಮಕ್ಕಳು ಕೃಷಿ ರಾಯಭಾರಿಗಳಾಗಿ :  ಹಳ್ಳಿಯ ಹೆಣ್ಣು ಮಕ್ಕಳು ಮಾರುಕಟ್ಟೆ ಕೌಶಲ್ಯವನ್ನು ಕಲಿಯಬೇಕಿದೆ. ಮೌಲ್ಯವರ್ಧನೆ, ಮಾರುಕಟ್ಟೆ ಕೌಶಲ್ಯ, ಸಾವಯವ ಕೃಷಿ ಉತ್ಪನ್ನಗಳ ವಿಷ ಪೂರಿತ ಆಹಾರಗಳನ್ನುಬೆಳೆದು ಮಾರಾಟ ಮಾಡುವ ರಾಯಭಾರಿಗಳಾಗಬೇಕಿದೆ. ಕೇಂದ್ರ ಸರ್ಕಾರಕ್ಕೆ ಉತ್ತರ ನೀಡುವ ಸಲುವಾಗಿ ನಮ್ದು ಬ್ರಾಂಡನ್ನು ಚಾಲನೆಗೆ ತರಲೇಬೇಕು ಎಂದು ರೈತ ಮುಖಂಡ ಕೆ.ಟಿ. ಗಂಗಾಧರ್‌ ಮನವಿ ಮಾಡಿದರು.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.