ಮೀಸಲಾತಿ ಹೆಚ್ಚಿಸಲು ಆಗ್ರಹಿಸಿ ಪ್ರತಿಭಟನೆ

ಜನಹಿತ ಶಕ್ತಿ ಹೋರಾಟ ವೇದಿಕೆಯಿಂದ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಸರ್ಕಾರ ವಿರುದ್ಧ ಪ್ರತಿಭಟನೆ

Team Udayavani, Jun 7, 2019, 7:15 AM IST

ರಾಜ.ದ ಜೆಡಿಸ್‌ ಮತ್ತು ಕಾಂಗ್ರೆಸ್‌ ಮೈತಿ ್ರಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಯನ್ನು ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿ ಜನ ಹಿತಶಕ್ತಿ ಹೋರಾಟ ವೇದಿಕೆಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಚಾಮರಾಜನಗರ: ರಾಜ್ಯದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಸರ್ಕಾರ ಎಸ್‌ಸಿ ಮತ್ತು ಎಸ್ಟಿ ಸಮುದಾಯದ ಅಭಿವೃದ್ಧಿಗೆ ಯಾವುದೇ ವಿಶೇಷ ಅನುದಾನ ಬಿಡುಗಡೆ ಮಾಡದೇ ನಿರ್ಲಕ್ಷ್ಯ ಧೋರಣೆ ತಾಳಿದೆ ಎಂದು ಆರೋಪಿಸಿ ಜನಹಿತ ಶಕ್ತಿ ಹೋರಾಟ ವೇದಿಕೆಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಭುವನೇಶ್ವರಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ವೇದಿಕೆಯ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ, ಭುವನೇಶ್ವರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಅವರ ಭಾವಚಿತ್ರಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆಯ ಜಿಲ್ಲಾಧ್ಯಕ್ಷ ರಾಮಸಮುದ್ರ ಸುರೇಶ್‌, ಮೈತ್ರಿ ಸರ್ಕಾರ ರಚನೆಯಾದ ಆರಂಭದಿಂದಲೂ ರಾಜ್ಯದಲ್ಲಿ ಎಸ್ಸಿ ಮತ್ತು ಎಸ್ಟಿ ಸಮುದಾಯದ ಅಭಿವೃದ್ಧಿಗೆ ಯಾವುದೇ ವಿಶೇಷ ಅನುದಾನ ಬಿಡುಗಡೆ ಮಾಡಿಲ್ಲ. ಕೇವಲ ಸುಳ್ಳು ಆಶ್ವಾಸನೆ ನೀಡಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ಈ ಹಿಂದಿನ ರಾಜ್ಯಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ಸೌಲಭ್ಯವನ್ನು ನೀಡಿತ್ತು. ಆದರೆ ಈ ಮೈತ್ರಿ ಸರ್ಕಾರವು ಈ ಯೋಜನೆಯನ್ನು ರದ್ದು ಮಾಡುವ ಹುನ್ನಾರ ನಡೆಸಿದೆ.

ಇದು ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಕ್ಕೆ ಮಾಡಿರುವ ದೊಡ್ಡ ಅಪಮಾನವಾಗಿದೆ.

ಇದನ್ನು ನೋಡಿದರೆ ರಾಜ್ಯ ಮೈತ್ರಿಸರ್ಕಾರ ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಕಂಡು ಬರುತ್ತಿದೆ. ಸರ್ಕಾರವು ಈ ಚಿಂತನೆಯನ್ನು ಕೈ ಬಿಟ್ಟು ಈ ಹಿಂದೆ ಇದ್ದಂತೆ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ಮುಂದುವರೆಸುವಂತೆ ಒತ್ತಾಯಿಸಿದರು.

ರಾಜ್ಯದ ಮೈತ್ರಿಸರ್ಕಾರ ತನ್ನ ಅಧಿಕಾರ ಉಳಿಸಿಕೊಳ್ಳುವುದರಲ್ಲೇ ಸಮಯ ಕಳೆಯುತ್ತಿದೆಯೇ ಹೊರತು, ಅಭಿವೃದ್ಧಿ ಕಾರ್ಯಗಳಿಗೆ ಗಮನಹರಿಸುತ್ತಿಲ್ಲ. ಹೀಗಾಗಿ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿವೆ. ಇದರ ಪರಿಣಾಮವಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ನೀಡಬೇಕಾದ ಅನುದಾನವನ್ನೂ ನೀಡಿಲ್ಲ. ಉಚಿತ ಬಸ್‌ ಪಾಸ್‌ ಅನ್ನೂ ನೀಡಿಲ್ಲ. ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡದಿದ್ದರೆ, ರಾಜ್ಯಾದ್ಯಂತ ತೀವ್ರಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ವೇದಿಕೆ ಉಪಾಧ್ಯಕ್ಷ‌ ಸಿದ್ದಯ್ಯನಪುರ ಧನಂಜಯ, ಡಿಎಸ್‌ಎಸ್‌ನ ಕೆ.ಎಂ.ನಾಗರಾಜು, ನಿಜ ಧ್ವನಿಗೋವಿಂದರಾಜು, ಕದಂಬ ಅಂಬರೀಶ್‌, ಕಣ್ಣೆಗಾಲ ಮಹದೇವನಾಯಕ, ನಾರಾಯಣ, ಷರೀಫ್, ಸೋಮೇಶ, ಕುಮಾರಚಂದ್ರಕುಮಾರ್‌, ಪಾಪಣ್ಣ, ಮಹದೇವಯ್ಯ ಇತರರು ಇದ್ದರು.

ಚಾಮರಾಜನಗರ: ಪರಿಶಿಷ್ಟ ಪಂಗಡದವರಿಗೆ ಕರ್ನಾಟಕ ರಾಜ್ಯದಲ್ಲಿ ನಿಗದಿ ಪಡಿಸಿರುವ ಮೀಸಲಾತಿ ಪ್ರಮಾಣವನ್ನು ಶೇ. 3ರಿಂದ ಶೇ. 7.5ಕ್ಕೆ ಹೆಚ್ಚಿಸಬೇಕೆಂದು ಒತ್ತಾಯಿಸಿ ಚಾಮರಾಜನಗರ ತಾಲೂಕು ನಾ¿ುಕರ ಸಂಘಗಳ ಒಕ್ಕೂಟದ ವತಿಯಿಂದ ನಗರದ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ಎಂ. ರಾಮಚಂದ್ರ ಮಾತನಾಡಿ ಕೇಂದ್ರ ಸರ್ಕಾರದ 2005ರ ಆದೇಶದಂತೆ ಕರ್ನಾಟಕ ರಾಜ್ಯದಲ್ಲಿ ಶೇಕಡ 7.5 ಮೀಸಲಾತಿಯನ್ನು ರಾಜಕೀಯವಾಗಿ ಸಾಮಾಜಿಕವಾಗಿ ಈಗಾಗಲೇ ಪಡೆಯುತ್ತಿದ್ದೇವೆ. ಆದರೆ ರಾಜ್ಯ ಸರ್ಕಾರ ಕೇವಲ ಶೇಕಡ 3 ರಷ್ಟು ಮೀಸಲಾತಿ ನೀಡುತ್ತಿದ್ದು ರಾಜಕೀಯವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಮೀಸಲಾತಿಯಿಂದ ವಂಚಿತರಾಗಿದ್ದೇವೆ ಎಂದು ಹೇಳಿದರು.

ಕ‌ರ್ನಾಟಕ ರಾಜ್ಯದಲ್ಲಿ 2011ರ ಜನಗಣತಿಯ ಅಂಕಿ ಅಂಶಗಳ ಪ್ರಕಾರ ಪರಿಶಿಷ್ಟ ಪಂಗಡದವರ ಜನಸಂಖ್ಯೆ 42,48,987ರಷ್ಟಿದ್ದು, ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ಪ್ರಮಾಣ ಶೇಕಡ 6.95 ರಷ್ಟಿರುತ್ತದೆ. ಇತ್ತೀಚೆಗೆ ಜನಸಂಖ್ಯೆ ರಾಜ್ಯದಲ್ಲಿ ಶೇಕಡ 7.5ರಷ್ಟು ಹೆಚ್ಚಿರುತ್ತದೆ. ಪ್ರಸ್ತುತ ರಾಜ್ಯದಲ್ಲಿ ವಿವಿಧ ಹುದ್ದೆಗಳಿಗೆ ನಡೆಯುವ ನೇಮಕಾತಿ ಬಡ್ತಿಯೂ ಸೇರಿದಂತೆಗಳಲ್ಲಿ ಮತ್ತು ಶೈಕ್ಷಣಿಕ ಸಂಸ್ಥೆಗಳ ಪ್ರವೇಶಗಳಲ್ಲಿ ಕೇವಲ ಶೇಕಡ 3 ರಷ್ಟು ಮೀಸಲಾತಿಯನ್ನು ನಿಗಧಿ ಪಡಿಸಲಾಗಿದೆ ಇದರಿಂದ ಪರಿಶಿಷ್ಟ ಪಂಗಡದವರಿಗೆ ಕರ್ನಾಟಕ ರಾಜ್ಯದಲ್ಲಿ ನಿಗದಿ ಪಡಿಸಿರುವ ಮೀಸಲಾತಿ ಪ್ರಮಾಣವನ್ನು ಶೇಕಡ 3 ರಿಂದ ಶೇಕಡ 7.5 ಕ್ಕೆಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಕೆಲವು ಮುಂದುವರೆದ ವರ್ಗದವರು ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿರುವ ಹೆಸರುಗಳನ್ನು ಬಳಸಿಕೊಂಡು ಜಾತಿ ಪ್ರಮಾಣ ಪತ್ರ ನೀಡುವ ಪ್ರಾಧಿಕಾರವಾದ ತಹಶೀಲ್ದಾರ್‌ರವರಿಂದ ಜಾತಿ ಪ್ರಮಾಣ ಪತ್ರಗಳನ್ನು ಅಸಂವಿಧಾನಾತ್ಮಕವಾಗಿ ಪಡೆದುಕೊಳ್ಳುತ್ತಿವೆ. ಪರಿಶಿಷ್ಟ ಪಂಗಡದವರಿಗೆ ಮೀಸಲಿಟ್ಟಿರುವ ಸೌಲಭ್ಯಗಳನ್ನು ಪಡೆಯುತ್ತಿರುವುದು ಸಮುದಾಯದ ಗಮನಕ್ಕೆ ಬಂದಿರುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಈ ಬಗ್ಗೆ ಗಮನಹರಿಸಿ ಆರ್ಹರಲ್ಲದವರಿಗೆ ಪರಿಶಿಷ್ಟ ಪಂಗಡದ ಪ್ರಮಾಣ ಪತ್ರ ನೀಡುವುದನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಎಚ್.ವಿ.ಚಂದ್ರು, ಜಿಪಂ ಮಾಜಿ ಸದಸ್ಯ ಅರಕಲವಾಡಿ ಸೋಮನಾಯಕ, ನಗರಸಭಾ ಮಾಜಿ ಸದಸ್ಯ ಸುರೇಶ್‌ನಾಯಕ, ಚುಡಾ ಮಾಜಿ ಅಧ್ಯಕ್ಷ ಆರ್‌.ಸುಂದರ್‌, ನಗರಸಭಾ ಸದಸ್ಯರಾದ ಪ್ರಕಾಶ್‌, ಶಿವರಾಜು, ಮುಖಂಡರಾದ ಕಪನಿನಾಯಕ, ಕಂಡಕ್ಟರ್‌ ಸೋಮನಾಯಕ, ಕಣ್ಣೇಗಾಲ ಎಂ.ಮಹದೇವನಾಯಕ, ಶಿವರಾಮು, ನಾರಾಯಣ್‌, ವೆಂಕಟೇಶ್‌, ನಂಜುಂಡನಾಯಕ, ರಂಗಸ್ವಾಮಿ, ರವಿ, ಲಿಂಗರಾಜು, ಬಸವನಾಯಕ, ಶಿವಣ್ಣ, ಚಾಮರಾಜನಾಯಕ ಇದ್ದರು.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ