ಪ್ರತ್ಯೇಕ ಬಸ್‌ ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

Team Udayavani, Nov 26, 2022, 2:50 PM IST

tdy-13

ಗುಂಡ್ಲುಪೇಟೆ: ಪ್ರತ್ಯೇಕವಾಗಿ ಬಸ್‌ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ತಾಲೂಕಿನ ಕೂತನೂರು ಗ್ರಾಮದ ಹೆದ್ದಾರಿ ರಸ್ತೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಬಸ್‌ ತಡೆದು ಪ್ರತಿಭಟನೆ ನಡೆಸಿದರು.

ತಾಲೂಕಿನ ಕೂತನೂರು ಗ್ರಾಮದ ಗುಂಡ್ಲುಪೇಟೆ-ಕೇರಳ ಹೆದ್ದಾರಿಯ ಬಸ್‌ ನಿಲ್ದಾಣದ ಮುಂದೆ ಜಮಾವಣೆಗೊಂಡ ನೂರಕ್ಕು ಅಧಿಕ ವಿದ್ಯಾರ್ಥಿಗಳು ಈ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್‌ಗಳನ್ನು ತಡೆದು ಡಿಪೋ ವ್ಯವಸ್ಥಾಪಕರ ವಿರುದ್ಧ ಆಕ್ರೋಶ ಹೊರಹಾಕಿ ಪ್ರತ್ಯೇಕ ಬಸ್‌ ಸೌಲಭ್ಯಕ್ಕೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾರ್ಥಿಗಳು, ಕೂತನೂರು ಗ್ರಾಮದಿಂದ ಶಾಲಾ-ಕಾಲೇಜಿಗೆ ನೂರಕ್ಕಿಂತ ಹೆಚ್ಚು ಮಂದಿ ತೆರಳುತ್ತಿದ್ದರು ಸಹ ಪ್ರತ್ಯೇಕವಾಗಿ ಬಸ್‌ ಸೌಲಭ್ಯ ಕಲ್ಪಿಸಿಲ್ಲ. ಈ ಬಗ್ಗೆ ಡಿಪೋ ವ್ಯವಸ್ಥಾಪಕರಿಗೆ ಈಗಾಗಲೇ ಹಲವು ಬಾರಿ ಮನವಿ ಮಾಡಲಾಗಿದೆ. ಆದರೂ ಕೂಡ ಕ್ರಮ ವಹಿಸಿಲ್ಲ ಎಂದು ಆಕ್ರೋಶ ಹೊರಹಾಕಿದರು. ಪ್ರತ್ಯೇಕವಾಗಿ ಬಸ್‌ ಇಲ್ಲದ ಕಾರಣ ಬೇರಂಬಾಡಿ ಮೂಲಕ ಬರುವ ಬಸ್‌ ಅವಲಂಬಿಸಬೇಕಾಗಿದೆ. ಆ ಬಸ್‌ ಕೂಡ ಬೆಳಗಿನ ಸಮಯ ಅಧಿಕ ಮಂದಿ ಪ್ರಯಾಣಿಕರನ್ನು ತುಂಬಿಕೊಂಡು ಬರುವ ಹಿನ್ನೆಲೆ ಕೂತನೂರು ಬಳಿ ನಿಲುಗಡೆ ಮಾಡದೆ ತೆರಳುತ್ತದೆ. ಈ ಕಾರಣದಿಂದ ಸರಿಯಾದ ಸಮಯಕ್ಕೆ ತರಗತಿಗಳಿಗೆ ಹೋಗಲು ಆಗುತ್ತಿಲ್ಲ. ಜೊತೆಗೆ ಖಾಸಗಿ ಆಟೋಗಳ ಮೊರೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ವಿದ್ಯಾರ್ಥಿಗಳಲ್ಲದೆ ಗ್ರಾಮಸ್ಥರೂ ಕೂಡ ಸಮಯಕ್ಕೆ ಸರಿಯಾಗಿ ಬಸ್‌ ಇಲ್ಲದೆ ಕೂಲಿ ಕೆಲಸಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕೂತನೂರು ಗ್ರಾಮಕ್ಕೆ ಪ್ರತ್ಯೇಕವಾಗಿ ಬಸ್‌ ಬಿಡಬೇಕು ಎಂದು ಆಗ್ರಹಿಸಿದರು. ಗುಂಡ್ಲುಪೇಟೆ ಡಿಪೋ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರು.

ಡಿಪೋ ವ್ಯವಸ್ಥಾಪಕರಾದ ಪುಷ್ಪಾ ಮಾತನಾಡಿ, ಈ ಬಗ್ಗೆ ಪರಿಶೀಲನೆ ನಡೆಸಿ ಕೂಡಲೇ ಬಸ್‌ ಸೌಲಭ್ಯ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. ವಿವಿಧ ಶಾಲಾ-ಕಾಲೇಜಿನ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

naval

ಡೈರೆಕ್ಟರ್ ಜನರಲ್ ನೇವಲ್ ಆಪರೇಷನ್ಸ್ ಆಗಿ ಅತುಲ್ ಆನಂದ ಅಧಿಕಾರ ಸ್ವೀಕಾರ

mattimood

ಕಲಬುರಗಿ ಗ್ರಾಮೀಣ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-10

ಏ.9ಕ್ಕೆ ಬಂಡೀಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ?

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

tdy-11

ಹನೂರು ಕ್ಷೇತ್ರದಲ್ಲಿ ಕಗ್ಗಂಟಾದ ಬಿಜೆಪಿ ಅಭ್ಯರ್ಥಿಯ ಆಯ್ಕೆ

ಕೊಳ್ಳೇಗಾಲ ‘ಕೈ’ ಟಿಕೆಟ್‌ಗೆ ಇಬ್ಬರ ಹೆಸರು ಫೈನಲ್‌

ಕೊಳ್ಳೇಗಾಲ ‘ಕೈ’ ಟಿಕೆಟ್‌ಗೆ ಇಬ್ಬರ ಹೆಸರು ಫೈನಲ್‌

tdy-12

ರೈತ ವಿರೋಧಿ ನೀತಿ ಖಂಡಿಸಿ ಧರಣಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ