ತೆರಕಣಾಂಬಿಯಲ್ಲಿ ಕಾಲೇಜು ಉಳಿಸಲು ಸಿಎಂ ಭೇಟಿ

Team Udayavani, Sep 13, 2020, 2:48 PM IST

ತೆರಕಣಾಂಬಿಯಲ್ಲಿ ಕಾಲೇಜು ಉಳಿಸಲು ಸಿಎಂ ಭೇಟಿ

ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿಯಲ್ಲಿಯೇ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಉಳಿಸಿಕೊಡಬೇಕೆಂದು ಒತ್ತಾಯಿಸಿ ತೆರಕಣಾಂಬಿ ಗ್ರಾಮದ ವಿದ್ಯಾರ್ಥಿಗಳು ಹಾಗೂ ರೈತ ಮುಖಂಡರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

ಕಳೆದ ಒಂದು ತಿಂಗಳಿನಿಂದ ಕಾಲೇಜು ಉಳಿಸಿಕೊಳ್ಳಲು ಹೋರಾಟ ನಡೆಸಿದ್ದ ವಿದ್ಯಾರ್ಥಿಗಳು ಹಾಗೂ ರೈತ ಸಂಘಟನೆಯವರು ಬೆಂಗಳೂರಿಗೆ ತೆರಳಿ ಮೌರ್ಯ ಸರ್ಕಲ್‌ನಲ್ಲಿ ಕುಳಿತು ಕೆಲಕಾಲ ರಸ್ತೆ ತಡೆದು ಪ್ರತಿಭಟಿಸಿ ಗಮನ ಸೆಳೆದರು.

ವಿಷಯ ತಿಳಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಮ್ಮ ಗೃಹ ಕಚೇರಿಗೆ ಹಸಿರು ಸೇನೆ ಹಾಗೂ ರೈತ ಸಂಘದ ಜಿಲ್ಲಾಧ್ಯಕ್ಷ ಮಹೇಶ್‌ ಪ್ರಭು,ಬಸವಣ್ಣ, ಶಾಂತಮಲ್ಲಪ್ಪ, ಶಿವಪುರ ಮಹದೇವಪ್ಪ, ವಿದ್ಯಾರ್ಥಿಗಳಾದ ರಕ್ಷಿತಾ, ತೇಜಸ್ವಿನಿ ಅವರನ್ನು ಕರೆಸಿಕೊಂಡು ಗ್ರಾಮದಲ್ಲಿ ಕಾಲೇಜು ಉಳಿಸುವ ಭರವಸೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಗ್ರಾಮದಲ್ಲಿ 2014ರಲ್ಲಿ ಪ್ರಥಮ ದರ್ಜೆ ಕಾಲೇಜು ಆರಂಭವಾಗಿದ್ದರೂ ಕಳೆದ ವರ್ಷ ನೂತನ ಕಟ್ಟಡ ನಿರ್ಮಾಣವಾಗಿತ್ತು. ವಿದ್ಯಾರ್ಥಿಗಳ ಕೊರತೆಯ ಕಾರಣದಿಂದ ಸರ್ಕಾರ ಕಾಲೇಜನ್ನು ಬೆಳಗಾವಿ ಜಿಲ್ಲೆಗೆ ಸ್ಥಳಾಂತರಿಸಿ ಆದೇಶ ಹೊರಡಿಸಿತ್ತು. ಇದೇ ಕಾಲೇಜಿನಲ್ಲಿ ಕೌಶಲ್ಯ ತರಬೇತಿ ಕೇಂದ್ರ ತೆರೆಯಲು ನಿರ್ಧರಿಸಲಾಗಿತ್ತು.

ಇದರಿಂದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಗ್ರಾಮೀಣ ಪ್ರದೇಶಗಳ ಹೆಣ್ಣುಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗುವ ಭೀತಿ ಎದುರಾಗಿತ್ತು. ಗ್ರಾಮದಲ್ಲಿ ಕಾಲೇಜು ಉಳಿಸುವಂತೆ ವಿದ್ಯಾರ್ಥಿಗಳು, ಪಾಲಕರು ಹಾಗೂ ರೈತ ಸಂಘಟನೆಯವರು ಹೋರಾಟ ನಡೆಸಿದ್ದರು. ಅಲ್ಲದೇ ಕಳೆದ 15 ದಿನಗಳ ಹಿಂದೆ ಉನ್ನತ ಶಿಕ್ಷಣ ಸಚಿವ ಉಪಮುಖ್ಯಮಂತ್ರಿ ಅಶ್ವತ್ಥ್

ನಾರಾಯಣ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರೂ ಯಾವುದೇ ಉಪಯೋಗವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ರೈತಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಶಿಕ್ಷಣ ಮಂತ್ರಿ ಸುರೇಶ್‌ಕುಮಾರ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.