ಗೊಂದಲಕ್ಕೆ ಅವಕಾಶ ನೀಡದೆ ಖರೀದಿ ಪ್ರಕ್ರಿಯೆ ನಿರ್ವಹಿಸಿ

ರಾಗಿ ಖರೀದಿ ಮೊತ್ತವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ.

Team Udayavani, Dec 9, 2022, 5:45 PM IST

ಗೊಂದಲಕ್ಕೆ ಅವಕಾಶ ನೀಡದೆ ಖರೀದಿ ಪ್ರಕ್ರಿಯೆ ನಿರ್ವಹಿಸಿ

ಚಾಮರಾಜನಗರ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ಭತ್ತ ಹಾಗೂ ರಾಗಿಯನ್ನು ಖರೀದಿಸುವ ಸಲುವಾಗಿ ಡಿ. 15ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು, ತೂಕ ಮತ್ತು ಅಳತೆಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಾಗದಂತೆ ಖರೀದಿ ಪ್ರಕ್ರಿಯೆ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್‌ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಕೊಠಡಿಯಲ್ಲಿ ಗುರುವಾರ ನಡೆದ 2022-23ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದರು. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದಿರುವ ಭತ್ತ ಮತ್ತು ರಾಗಿಯನ್ನು ಖರೀದಿಸಲು ಡಿ.15ರಿಂದ ರೈತರ ನೋಂದಣಿ ಕಾರ್ಯ ಆರಂಭಿಸಬೇಕು.2023ರ ಜನವರಿ 1ರಿಂದ ಮಾ.23ರವರೆಗೆ  ನಿಗದಿಗೊಳಿಸಲಾಗಿರುವ ಖರೀದಿ ಕೇಂದ್ರಗಳಲ್ಲಿ ಭತ್ತ ಹಾಗೂ ರಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.

ಜಿಲ್ಲೆಯ ಚಾಮರಾಜನಗರ, ಸಂತೇಮರಹಳ್ಳಿ, ಕೊಳ್ಳೇಗಾಲ, ಹನೂರು ಹಾಗೂ ಯಳಂದೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎ.ಪಿ.ಎಂ.ಸಿ) ಅವರಣದಲ್ಲಿ ಭತ್ತ ಹಾಗೂ ರಾಗಿ ಖರೀದಿ ಕೇಂದ್ರವನ್ನು ತೆರೆಯಲಾಗುತ್ತಿದೆ. ಕಳೆದ ಸಾಲಿನಲ್ಲಿ ಭತ್ತ ಖರೀದಿ ಪ್ರತಿ ಕ್ವಿಂಟಲ್‌ಗೆ 1940 ರೂ. ಹಾಗೂ ರಾಗಿ ಪ್ರತಿ ಕ್ವಿಂಟಲ್‌ಗೆ 3377 ರೂ. ಗಳನ್ನು ನಿಗದಿ ಮಾಡಲಾಗಿತ್ತು. ಪ್ರಸಕ್ತ ವರ್ಷ ಸಾಮಾನ್ಯ ಭತ್ತ ಖರೀದಿಗೆ ಪ್ರತಿ ಕ್ವಿಂಟಲ್‌ಗೆ 2040 ರೂ. ಹಾಗೂ ಗ್ರೇಡ್‌-ಎ ಭತ್ತ ಪ್ರತಿ ಕ್ವಿಂಟಲ್‌ಗೆ 2060 ರೂ. ಮತ್ತು ರಾಗಿ ಪ್ರತಿ ಕ್ವಿಂಟಲ್‌ಗೆ 3578 ರೂ. ಗಳಿಗೆ ಹೆಚ್ಚಿಸಲಾಗಿದೆ ಎಂದರು.

ಸರ್ಕಾರವು ರಾಜ್ಯ ಕೃಷಿ ಮಾರಾಟ ಮಂಡಳಿ ಯನ್ನು ಖರೀದಿ ಏಜೆನ್ಸಿಯಾಗಿ ನೇಮಿಸಿದ್ದು ಭತ್ತ ಹಾಗೂ ರಾಗಿ ಖರೀದಿ ಪ್ರಕ್ರಿಯೆಯು ಈ ಏಜೆನ್ಸಿ ಮೂಲಕ ನಡೆಯಲಿದೆ. ಪ್ರತಿಯೊಬ್ಬ ರೈತರು ಖರೀದಿ ಕೇಂದ್ರಗಳಿಗೆ ಮಾರಾಟಕ್ಕಾಗಿ ತಂದ ಭತ್ತದ ಗ್ರೇಡ್‌ ಅನ್ನು ಪ್ಯಾರಾಮೀಟರ್‌ ಮೂಲಕ ನಿರ್ಧರಿಸಲಾಗುತ್ತದೆ. ಭತ್ತ, ರಾಗಿ ಖರೀದಿ ಮೊತ್ತವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ. ಖರೀದಿ ವೇಳೆ ತೂಕ, ಅಳತೆಯಲ್ಲಿ ರೈತರಿಗೆ ಸೂಕ್ತ ಮಾಹಿತಿ ನೀಡಿ
ಯಾವುದೇ ಲೋಪಗಳಿಗೆ ಅಸ್ಪದವಾಗದಂತೆ ನೋಡಿ ಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಭತ್ತವನ್ನು ಮಾರಾಟ ಮಾಡುವ ರೈತರು ಈಗಾಗಲೇ ಪ್ರೂಟ್ಸ್‌ ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು. ಒಂದು ವೇಳೆ ರೈತರು ನೋಂದಣಿ ಮಾಡಿಕೊಳ್ಳದಿದ್ದಲ್ಲಿ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡು ಭತ್ತವನ್ನು ಮಾರಾಟ ಮಾಡಬಹುದಾಗಿದೆ ಎಂದರು. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಯೋಗಾನಂದ ಮಾತನಾಡಿ, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಇದೇ ತಿಂಗಳ 15ರಿಂದ ರೈತರ ನೋಂದಣಿ ಪ್ರಾರಂಭಿಸಲಾಗುತ್ತಿದ್ದು, ಈ ಸಂಭಂಧ ಮಾಹಿತಿ, ವಿವರಗಳಿಗಾಗಿ ರೈತರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳಿಯ ಜಿಲ್ಲಾ ವ್ಯವಸ್ಥಾಪಕರನ್ನು (ಮೊ. 9449864455) ಸಂಪರ್ಕಿಸುವಂತೆ ಮನವಿ ಮಾಡಿದರು.

ಟಾಪ್ ನ್ಯೂಸ್

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

Kollegala; ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ

Kollegala; ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.