ಜಿಲ್ಲೆಯ 29 ಕೆರೆಗಳ ಜೀರ್ಣೋದ್ಧಾರಕ್ಕೆ ಅಸ್ತು

Team Udayavani, Dec 16, 2019, 3:00 AM IST

jilleya

ಚಾಮರಾಜನಗರ: ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಒಟ್ಟು 29 ಕೆರೆಗಳನ್ನು ಜಲಾಮೃತ ಯೋಜನೆಯಡಿ ಅಭಿವೃದ್ಧಿಪಡಿಸಲು ಒಟ್ಟು 5.73 ಕೋಟಿ ರೂ. ಗಳ ಕಾಮಗಾರಿಗಾಗಿ ಅನುಮೋದನೆ ದೊರೆತಿದೆ. ಪ್ರಸಕ್ತ 2019-20ನೇ ಸಾಲಿಗೆ ಜಲಾಮೃತ ಯೋಜನೆಯಡಿಯಲ್ಲಿ ಜಿಲ್ಲೆಯ ಕೊಳ್ಳೇಗಾಲ, ಚಾಮರಾಜನಗರ, ಗುಂಡ್ಲುಪೇಟೆ, ಯಳಂದೂರು ತಾಲೂಕಿನ ಒಟ್ಟು 29 ಕೆರೆಗಳ ಜೀರ್ಣೋದ್ಧಾರ ಕಾಮಗಾರಿಗಾಗಿ ಜಿಪಂ ವತಿಯಿಂದ ಕ್ರಿಯಾ ಯೋಜನೆಯನ್ನು ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿತ್ತು.

ಈ ಮೊತ್ತವನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ಜಲಾಮೃತ ಯೋಜನೆಯಡಿ ಭರಿಸಲು ಪ್ರಸ್ತಾವನೆಯಲ್ಲಿ ಸಲ್ಲಿಸಲಾಗಿತ್ತು. ಇದನ್ನು ಪರಿಶೀಲಿಸಿ ಜಿಲ್ಲೆಗೆ ಜಲಾಮೃತ ಯೋಜನೆಯಡಿ ಪ್ರಸಕ್ತ ಸಾಲಿಗೆ 2.23 ಕೋಟಿ ರೂ. ಅನುದಾನವನ್ನು ನಿಗದಿಪಡಿಸಲಾಗಿದೆ. ಉದ್ಯೋಗ ಖಾತರಿ ಯೋಜನೆಯಡಿ 2.78 ಕೋಟಿ ರೂ. ಸೇರಿದಂತೆ ಒಟ್ಟು 5.73 ಕೋಟಿ ರೂ. ಗಳನ್ನು ಒಗ್ಗೂಡಿಸುವಿಕೆಯ ಮೂಲಕ ಕಾಮಗಾರಿ ಕೈಗೊಳ್ಳಲು ಅನುಮೋದನೆ ನೀಡಲಾಗಿದೆ.

ಜಲಾಮೃತ ಯೋಜನೆಯಡಿ ಒಟ್ಟು 2.23 ಕೋಟಿ ರೂ.: ಚಾಮರಾಜನಗರ ತಾಲೂಕಿನ 10, ಗುಂಡ್ಲುಪೇಟೆ ತಾಲೂಕಿನ 11, ಯಳಂದೂರು ತಾಲೂಕಿನ 6 ಹಾಗೂ ಕೊಳ್ಳೇಗಾಲ ತಾಲೂಕಿನ 2 ಕೆರೆಗಳನ್ನು ಜೀರ್ಣೋದ್ಧಾರಕ್ಕಾಗಿ ಕೈಗೆತ್ತಿಕೊಳ್ಳಲಾಗುತ್ತಿದೆ. ಉದ್ಯೋಗ ಖಾತರಿ ಯೋಜನೆಯಡಿ ಚಾಮರಾಜನಗರ ತಾಲೂಕಿನ 10 ಕೆರೆಗಳಿಗೆ 89 ಲಕ್ಷ ರೂ., ಗುಂಡ್ಲುಪೇಟೆ ತಾಲೂಕಿನಲ್ಲಿ 11 ಕೆರೆಗಳಿಗೆ ಲಕ್ಷ ರೂ., ಯಳಂದೂರು ತಾಲೂಕಿನ 6 ಕೆರೆಗಳಿಗೆ 79 ಲಕ್ಷ ರೂ. ಹಾಗೂ ಕೊಳ್ಳೇಗಾಲ ತಾಲೂಕಿನಲ್ಲಿ 2 ಕೆರೆಗಳಿಗೆ 20 ಲಕ್ಷ ರೂ. ನಿಗದಿ ಮಾಡಿಕೊಳ್ಳಲಾಗಿದೆ. ಉಳಿದಂತೆ ಜಲಾಮೃತ ಯೋಜನೆಯಡಿ ಒಟ್ಟು 2.23 ಕೋಟಿ ರೂ. ವೆಚ್ಚ ಮಾಡಲು ಅನುಮೋದನೆ ದೊರೆತಿದೆ.

ಅನುಕೂಲಕರ ಕಾಮಗಾರಿ: ಜಲಾಮೃತ ಯೋಜನೆಯಡಿ ನಿರ್ವಹಿಸಲಾಗುವ ಜೀರ್ಣೋದ್ಧಾರ ಕಾಮಗಾರಿಯಿಂದ ಅಂತರ್ಜಲ ಹೆಚ್ಚಳ, ಮರುಪೂರಣಕ್ಕೆ ಸಹಾಯವಾಗಲಿದೆ. ಕೆರೆಗಳ ಹೂಳು ತೆಗೆಯುವಿಕೆ, ಫೀಡರ್‌ ಚಾನಲ್‌, ತೂಬು ನಿರ್ಮಾಣ, ಏರಿ ದುರಸ್ತಿ ಇನ್ನಿತರ ಅನುಕೂಲಕರ ಕಾಮಗಾರಿಗಳನ್ನು ನಿರ್ವಹಿಸಲಾಗುತ್ತದೆ. ಕೆರೆಗಳ ಈ ಅಭಿವೃದ್ಧಿ ಕಾಮಗಾರಿಯಿಂದ ಕೆರೆಗಳ ಸುತ್ತಮುತ್ತಲ ಕೊಳವೆ ಬಾವಿಗಳ ಮರುಪೂರಣ ಸಾಮರ್ಥ್ಯ ಹೆಚ್ಚು ಮಾಡುವ ಉದ್ದೇಶ ಹೊಂದಲಾಗಿದೆ. ಅಲ್ಲದೇ ಜಾನುವಾರು, ಪ್ರಾಣಿ- ಪಕ್ಷಿಗಳಿಗೆ ಕುಡಿವ ನೀರಿನ ಲಭ್ಯತೆ ಉಂಟು ಮಾಡುವುದು ಯೋಜನೆಯ ಸದುದ್ದೇಶಗಳಲ್ಲಿ ಒಂದಾಗಿದೆ.

ಅನುಮೋದನೆಗಳು ಅಗತ್ಯ: ಕಾಮಗಾರಿ ನಿರ್ವಹಣೆಗೆ ಹಲವು ಷರತ್ತು ಹಾಗೂ ನಿಬಂಧನೆಗಳನ್ನು ಪೂರೈಸುವಂತೆ ಸೂಚಿಸಲಾಗಿದೆ. ಜಲಾಮೃತ ಯೋಜನೆಯ ಕಾಮಗಾರಿಗಳ ಪ್ರಸ್ತಾವನೆಗಳನ್ನು ಗ್ರಾಮ ಪಂಚಾಯಿತಿ ಮಟ್ಟದ ಜಲಾಮೃತ ಸಮಿತಿ ಮತ್ತು ಗ್ರಾಮಸಭೆಗಳಲ್ಲಿ ಅನುಮೋದನೆಗಾಗಿ ಮಂಡಿಸಬೇಕು. ನಂತರ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳ ಪರಿಶೋಧನೆ ಮತ್ತು ಅನುಮೋದನೆಗೆ ಕಳುಹಿಸಬೇಕಿದೆ.

ಕೆರೆಯ ಜಲಾನಯನ ಪ್ರದೇಶ ಮತ್ತು ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಸಮುದಾಯದ ಸಹಭಾಗಿತ್ವವನ್ನು ಖಚಿತಪಡಿಸಿಕೊಳ್ಳಬೇಕು. ಕಳೆದ 5 ವರ್ಷಗಳಲ್ಲಿ ಸದರಿ ಕೆರೆಯಲ್ಲಿ ಹೂಳೆತ್ತುವ ಕಾಮಗಾರಿ ಕೈಗೊಂಡಿರಬಾರದು. ಕೈಗೊಂಡ ಕಾಮಗಾರಿ ಸ್ಥಳದ ಮೂರು ಹಂತದ ಅಂದರೆ ಪೂರ್ವ, ಪ್ರಗತಿ ಹಾಗೂ ಮುಕ್ತಾಯದ ನಂತರದ ಹಂತಗಳ ಛಾಯಾಚಿತ್ರಗಳ ಜತೆಗೆ ಭೌತಿಕ, ಆರ್ಥಿಕ ಮತ್ತು ಕಾಮಗಾರಿಗೆ ಸಂಬಂಧಿಸಿದ ಸಂಪೂರ್ಣ ವರದಿಗಳನ್ನು ಜಲಾಮೃತ ಮೇಲುಸ್ತುವಾರಿ ಘಟಕಕ್ಕೆ ಸಲ್ಲಿಸಬೇಕು. ಪ್ರತೀ ಕಾಮಗಾರಿ ಸ್ಥಳಗಳಗಳಲ್ಲಿ ಕಾಮಗಾರಿ ಸಂಬಂಧ ಸಂಪೂರ್ಣ ವಿವರಗಳನ್ನೊಳಗೊಂಡ ನಾಮಫ‌ಲಕ ಕಡ್ಡಾಯವಾಗಿ ಅಳವಡಿಸುವಂತೆ ಸೂಚನೆ ನೀಡಲಾಗಿದೆ.

ಜಲಾಮೃತ ಯೋಜನೆಯಲ್ಲಿ ಜಿಲ್ಲೆಯ 29 ಕೆರೆಗಳನ್ನು ಅಭಿವೃದ್ಧಿ ಪಡಿಸಲು 5.73 ಕೋಟಿ ರೂ.ಗಳ ಕಾಮಗಾರಿಗೆ ಸರ್ಕಾರದ ಅನುಮೋದನೆ ದೊರೆತಿದೆ. ಜಿಲ್ಲೆಯಲ್ಲಿ ಕಬಿನಿಯಿಂದ ನೀರು ತುಂಬಿಸಲಾಗುವ ಕೆರೆಗಳನ್ನು ಹೊರತುಪಡಿಸಿ, ಬೇರೆ ಕೆರೆಗಳನ್ನು ಇದರಲ್ಲಿ ಆಯ್ಕೆ ಮಾಡಿಕೊಳ್ಳಲಾಗಿದೆ.
-ಬಿ. ಎಚ್‌. ನಾರಾಯಣರಾವ್‌, ಜಿಪಂ ಸಿಇಒ

* ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.