ಬೀದಿನಾಯಿಗಳ ಹಾವಳಿಗೆ ಬ್ರೇಕ್‌ ಹಾಕಿ

ತಾಲೂಕಾದ್ಯಂತ ಜೂನ್‌ ತಿಂಗಳಲ್ಲೇ ಸುಮಾರು 35 ಜನರಿಗೆ ಬೀದಿನಾಯಿ ಕಡಿತ

Team Udayavani, Jul 12, 2019, 11:08 AM IST

cn-tdy-1..

ಕೊಳ್ಳೇಗಾಲ ಪಟ್ಟಣ ಮತ್ತು ಗ್ರಾಮೀಣ ಪ್ರದೇಶದಲ್ಲಿ ಬೀದಿ ನಾಯಿಗಳ ಹಿಂಡು.

ಕೊಳ್ಳೇಗಾಲ: ಪಟ್ಟಣ ಮತ್ತು ಗ್ರಾಮೀಣ ಪ್ರದೇಶದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ನಿಯಂತ್ರಣಕ್ಕೆ ನಗರಸಭೆ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಮುಂದಾಗದೆ ನಿರ್ಲಕ್ಷ್ಯವಹಿಸಿದ್ದು ಜನರು ನಾಯಿಗಳ ಕಾಟದಿಂದ ಮನೆಯಿಂದ ಹೊರಬರದಂತಾಗಿದೆ.

ತಾಲೂಕಾದ್ಯಂತ ಎಲ್ಲೆಲ್ಲೂ ನಾಯಿಗಳ ಕಾಟ ಹೆಚ್ಚಾಗಿದ್ದು, ಅವುಗಳ ನಿಯಂತ್ರಣ ಮಾಡಲಾಗದ ಅಧಿಕಾರಿ ಗಳು ಕಾನೂನು ಸಬೂಬು ಹೇಳಿ ಶಾಲಾ ಮಕ್ಕಳು, ವೃದ್ಧರು ಹಾಗೂ ಸಾರ್ವಜನಿಕರು ನಾಯಿಯಿಂದ ಕಚ್ಚಿಸಿಕೊಂಡು ಚಿಕಿತ್ಸೆಗಾಗಿ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ.

ರಸ್ತೆಗಳಲ್ಲಿ ಆಡಚಣೆ: ತಾಲೂಕಾದ್ಯಂತ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಾಯಿಗಳ ಹಿಂಡು ಮುಖ್ಯ ರಸ್ತೆಗಳಿಗೂ ಗುಂಪು ಗುಂಪಾಗಿ ಬರುವುದರಿಂದ ವಾಹನ ಚಾಲನೆಗೆ ಆಡಚಣೆ ಉಂಟಾಗಿ ಹಲವು ಸವಾರರು ತಮ್ಮ ಬೈಕ್‌ಗಳನ್ನು ಬೇರೆಡೆಗೆ ಡಿಕ್ಕಿ ಹೊಡೆದು ಬಿದ್ದು, ಕಾಲು ಕೈ ಮುರಿದುಕೊಂಡಿರುವ ಹಲವು ಪ್ರಕರಣಗಳು ನಡೆದಿದೆ.

ನಾಯಿ ಕಡಿತ: ಎಲ್ಲಾ ರಸ್ತೆಗಳಲ್ಲೂ ನಾಯಿಗಳ ಕಾಟ ಹೆಚ್ಚಾಗಿದ್ದು ಶಾಲಾ ಮಕ್ಕಳು, ವೃದ್ಧರು ಮತ್ತು ಸಾರ್ವ ಜನಿಕರು ರಸ್ತೆಯಲ್ಲಿ ಓಡಾಡುವ ವೇಳೆ ಆಕಸ್ಮಿಕವಾಗಿ ನಾಯಿಗಳು ಕಚ್ಚಿ ಗಾಯಗೊಳಿಸಿರುವ ನಿದರ್ಶನಗಳು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದೆ.

ನಾಯಿಗಳ ಕಾಟದಿಂದ ನಿದ್ರೆ ಇಲ್ಲ: ರಾತ್ರಿಯ ಹೊತ್ತು ಸಕ್ಕರೆ ಕಾಯಿಲೆ, ಹೃದಯ ಕಾಯಿಲೆ ಸೇರಿದಂತೆ ವಿವಿಧ ಕಾಯಿಲೆಗಳಿಗೆ ಒಳಗಾದ ರೋಗಿಗಳಿಗೆ ತಮ್ಮ ಕಾಯಿಲೆಗೆ ಸಂಬಂಧಪಟ್ಟ ಔಷಧಿಪಡೆದು ಕೊಂಡು ನಿದ್ರಾವಸ್ಥೆಗೆ ಜಾರುತ್ತಾರೆ. ಆದರೆ ನಾಯಿಗಳ ಹಿಂಡು ಎಲ್ಲೆಲ್ಲೂ ದಾಳಿ ಮಾಡಿ ರಾತ್ರಿಯ ಹೊತ್ತು ಹೆಚ್ಚು ಬೊಗಳುವುದರಿಂದ ನಿದ್ರಾವಸ್ಥೆಯಲ್ಲಿರುವ ರೋಗಿ ಗಳು ನಿದ್ರೆ ಬಾರದೆ ನಾಯಿಗಳ ಕಾಟದಿಂದ ಮತ್ತಷ್ಟು ರೋಗ ಉಲ್ಬಣದ ಸ್ಥಿತಿಗೆ ಒಳಗಾಗುವಂತಾಗಿದೆ.

ರೋಗಿಗಳು ನಿದ್ರೆಗೆಡುವುದರ ಜೊತೆಗೆ ಸಣ್ಣ ಮಕ್ಕಳು ಸಹ ನಾಯಿಯ ಕೂಗಿನಿಂದ ಎದ್ದು ಮಕ್ಕಳು ಆಳುವುದರ ಜೊತೆಗೆ ಅವರ ತಂದೆ ತಾಯಿ ಮತ್ತು ಕುಟುಂಬ ವರ್ಗದವರು ನಿದ್ರಾವಸ್ಥೆಯಿಂದ ಕಂಗೆಟ್ಟು ನಾಯಿಗಳ ಕಾಟಕ್ಕೆ ಇಡೀ ಶಾಪ ಹಾಕುವಂತೆ ಆಗಿದ್ದು, ಈ ನಾಯಿಗಳನ್ನು ಇಲ್ಲಿ ಹಿಡಿಯುವವರು ಯಾರು ಇಲ್ಲವೇ ಮತ್ತು ಇದನ್ನು ನಾಶ ಗೊಳಿಸವುದಿಲ್ಲ ಎಂದು ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು ಹಾಕುವಂತೆ ಆಗಿದೆ.

ನಾಯಿಗಳಿಗೆ ಕಡಿವಾಣ ಹಾಕಿ: ಈ ಹಿಂದೆ ನಾಯಿಗಳು ಸುಮಾರು 35 ಜನರಿಗೆ ಕಚ್ಚಿ ಗಾಯ ಗೊಳಿಸಿರುವ ಪ್ರಕರಣಗಳು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದೆ. ಜೂನ್‌ ತಿಂಗಳು ಒಂದರಲ್ಲೇ ಇಷ್ಟು ಪ್ರಕರಣ ದಾಖಲಾದರೆ ವರ್ಷವಿಡೀ ಪ್ರಕರಣಗಳು ಹೆಚ್ಚಾಗಲಿದ್ದು, ಸಂಬಂಧಿಸಿದ ಅಧಿಕಾರಿಗಳು ನಾಯಿಗಳ ಕಾಟಕ್ಕೆ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

● ಡಿ.ನಟರಾಜು

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.