ನಾಲೆ ದುರಸ್ತಿಗೊಳಿಸಿ, ನೀರು ಹರಿಸಿ

Team Udayavani, Jul 20, 2019, 1:12 PM IST

cn-tdy-1

ಕೊಳ್ಳೇಗಾಲ ಪಟ್ಟಣದ ಹೃದಯ ಭಾಗದಲ್ಲಿರುವ ಚಿಕ್ಕರಂಗನಾಥ ಕೆರೆಯಿಂದ ಪಾಪನಕೆರೆಗೆ ಹೋಗುವ ಕಬಿನಿ ನಾಲೆ ವಿಭಾಗಕ್ಕೆ ಸೇರಿದ ಮುಖ್ಯ ನಾಲೆ ಸಂಪೂರ್ಣ ಒಡೆದುಹೋಗಿದೆ.

ಕೊಳ್ಳೇಗಾಲ: ಪಟ್ಟಣದ ಹೃದಯ ಭಾಗದ ಕಬಿನಿ ನಾಲಾ ವಿಭಾಗದ ಚಿಕ್ಕರಂಗನಾಥ ಕೆರೆಯಿಂದ ಪಾಪನಕೆರೆಗೆ ಸಂಪರ್ಕ ಕಲ್ಪಿಸುವ ಮುಖ್ಯ ನಾಲೆ ಸಂಪೂರ್ಣ ಹಾಳಾಗಿದ್ದು, ಗಿಡಗಂಟೆ ಬೆಳೆದು ವಿಷಜಂತುಗಳ ವಾಸಸ್ಥಾನವಾಗಿದೆ. ಅಲ್ಲದೆ ನಾಲೆಯಲ್ಲಿ ನೀರು ಹರಿಯದೆ ರೈತರು ಸಂಕಷ್ಟದಲ್ಲಿದ್ದರೂ ಕಾವೇರಿ ಮತ್ತು ಕಬಿನಿ ನಾಲೆ ನಿಗಮದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದಕ್ಕೆ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿಥಿಲಗೊಂಡಿರುವ ನಾಲೆಗಳು: ಕಾವೇರಿ ಮತ್ತು ಕಬಿನಿ ನಾಲೆ ವಿಭಾಗದ ನಿಗಮ, ಈ ಭಾಗದ ಕೆರೆಕಟ್ಟೆಗಳನ್ನು ಭರ್ತಿಗೊಳಿಸಿ, ನಾಲೆಗಳಿಂದ ರೈತರ ಜಮೀನುಗಳಿಗೆ ನೀರು ಹರಿಸಿ, ವಿವಿಧ ಫ‌ಸಲುಗಳನ್ನು ಬೆಳೆಯಲೆಂದು ಸರ್ಕಾರ ಸಾಕಷ್ಟು ಅನುದಾನ ನೀಡುತ್ತಿದೆ. ಆದರೆ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದ ನಾಲೆಗಳು ಶಿಥಿಲಗೊಂಡಿದ್ದು, ನೀರು ಹರಿಯದಂತಾಗಿದೆ.

ನಾಲೆ ಸದೃಢವಾಗಿದ್ದರೆ ರೈತರ ಜಮೀನಿಗೆ ನೀರು: ಚಿಕ್ಕರಂಗನಾಥ ಬೃಹತ್‌ ಕೆರೆ ಭರ್ತಿಗೊಂಡರೆ ನಾಲೆಗಳಿಂದ ಸಾವಿರಾರು ಎಕರೆ ಜಮೀನುಗಳಿಗೆ ನೀರು ಒದಗಿಸುವ ಬೃಹತ್‌ ಕೆರೆಯಾಗಿದೆ. ಕೆರೆಯ ನಾಲೆಗಳು ಸಂಪೂರ್ಣವಾಗಿ ಸ್ವಚ್ಛವಾಗಿ ಹಾಗೂ ಸದೃಢವಾಗಿದ್ದರೆ ಮಾತ್ರ, ಈ ಭಾಗದ ರೈತರ ಜಮೀನುಗಳಿಗೆ ನೀರು ಪೂರೈಕೆಯಾಗಲು ಸಾಧ್ಯ. ಆದರೆ ನಾಲೆಗಳೆ ಒಡೆದಿದ್ದು ಹಾಗೂ ಕಸ ಕಡ್ಡಿಗಳಿಂದ ತುಂಬಿದೆ. ಹೀಗಾಗಿ ನಾಲೆಗಳಿಗೆ ನೀರು ಹರಿಸಿದರೂ ರೈತರ ಜಮೀನುಗಳಿಗೆ ತಲುಪುವುದು ಕಷ್ಟ ಎಂದು ರೈತರ ಆರೋಪವಾಗಿದೆ. ಅಲ್ಲದೆ ಹೆಚ್ಚಿನ ಪ್ರಮಾಣದ ನೀರು ಪೋಲಾಗಲಿದೆ.

ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ: ಕಬಿನಿ ನಾಲಾ ವಿಭಾಗದ ಅಧಿಕಾರಿಗಳು, ನಾಲೆಗಳನ್ನು ಸೂಕ್ತವಾಗಿ ನಿರ್ವಹಿಸುವಲ್ಲಿ ಸಂಪೂರ್ಣ ವಿಫ‌ಲರಾಗಿದ್ದಾರೆ. ಬೇಸಿಗೆ ಸಂದರ್ಭದಲ್ಲಿ ನಾಲೆಗಳಲ್ಲಿರುವ ಹೂಳು ಎತ್ತಬೇಕು. ಜತೆಗೆ ನಾಲೆ ಶಿಥಿಲಗೊಂಡಿರುವ ಭಾಗದಲ್ಲಿ ದುರಸ್ತಿ ಕಾರ್ಯ ಮಾಡಬೇಕು. ನಾಲೆಯಲ್ಲಿ ಬೆಳೆದಿರುವ ಗಿಡಗಂಟೆಗಳನ್ನು ತೆರವುಗೊಳಿಸಿ, ನೀರು ಸರಾಗವಾಗಿ ಹರಿಯವುಂತೆ ನಿಗಾ ವಹಿಸಬೇಕು. ಆದರೆ ನಾಲೆ ಅಧಿಕಾರಿಗಳು ಈವರೆಗೂ ಕುಂಭಕರ್ಣ ನಿದ್ದೆಯಿಂದ ಏಳದೇ, ನಾಲೆ ಅಭಿವೃದ್ಧಿಯತ್ತ ಗಮನ ಹರಿಸದೇ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಮಾತುಗಳು ಕೇಳುತ್ತಿವೆ.

ಸಾಲದ ಸಂಕಷ್ಟದಲ್ಲಿ ರೈತರು: ರೈತರು ಆರ್ಥಿಕವಾಗಿ ಸದೃಢರಾಗುವ ಉದ್ದೇಶದಿಂದ ವಿವಿಧ ರಾಷ್ಟ್ರೀಕೃತ ಮತ್ತು ಸಹಕಾರ ಬ್ಯಾಂಕ್‌ಗಳಲ್ಲಿ ಹಾಗೂ ಶ್ರೀಮಂತರಿಂದ ಸಾಲ ಮಾಡಿ ಜಮೀನುಗಳಿಗೆ ಬಿತ್ತನೆ ಮಾಡುತ್ತಾರೆ. ಆದರೆ ಮಳೆಯ ಕೊರತೆ ಮತ್ತು ಕೆರೆ ನೀರು ಅಸಮರ್ಪಕವಾಗಿ ಹರಿಯುವಿಕೆಯಿಂದಾಗಿ ಉತ್ತಮ ಫ‌ಸಲು ದೊರೆಯುತ್ತಿಲ್ಲ. ಇದರ ಪರಿಣಾಮವಾಗಿ ಈ ಭಾಗದ ಸಾಕಷ್ಟು ರೈತರ ಕುಟುಂಬಗಳು ಸಾಲ ಶೂಲೆಗೆ ಸಿಲುಕಿವೆ. ಅಲ್ಲದೆ ಸಾಲಗಾರರ ಕಾಟ ತಾಳಲಾರದೆ ಹಾಗೂ ಸಾಲ ತೀರಿಸಲಾಗದೆ ಸಾಕಷ್ಟು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೂ ನಿಗಮದ ಅಧಿಕಾರಿಗಳು ನಾಲೆ ನಿರ್ವಹಣೆಗೆ ಕಾಳಜಿ ವಹಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ.

ನಾಲೆ ದುರಸ್ತಿಗೆ ಒತ್ತಾಯ: ಚಿಕ್ಕರಂಗನಾಥ ಕೆರೆ ನೀರು ಹರಿಯುವ ಕಬಿನಿ ನಾಲೆ ಶಿಥಿಲಾವವಸ್ಥೆಗೆ ತಲುಪಿದೆ. ಗಿಡಗಂಟೆ ಬೆಳೆದು, ವಿಷ ಜಂತುಗಳ ಕಾಟ ಹೆಚ್ಚಾಗಿದೆ. ಇದರಿಂದಾಗಿ ನಾಲೆಗೆ ಹರಿಸುವ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೂಡಲೇ ಕಬಿನಿ ನಾಲಾ ವಿಭಾಗದ ಅಧಿಕಾರಿಗಳು ಶಿಥಿಲಗೊಂಡಿರುವ ಸ್ಥಳಗಳಲ್ಲಿ ನಾಲೆ ದುರಸ್ತಿಗೊಳಿಸಿ, ನೀರು ಜಮೀನುಗಳಿಗೆ ಸರಾಗವಾಗಿ ಹರಿದುಹೋಗುವಂತೆ ಮಾಡಬೇಕು ಎಂದು ರೈತ ಮುಖಂಡ ಶಾಂತರಾಜು ಒತ್ತಾಯಿಸಿದ್ಧಾರೆ.

ಕಬಿನಿ ನಾಲೆಗೆ ಸೇರಿದ ತೂಬು ಶಿಥಿಲಗೊಂಡಿದೆ. ನಾಲೆ ಉದ್ದಕ್ಕೂ ಬೆಳೆದಿರುವ ಗಿಡಗಂಟೆಗಳನ್ನು ತೆರವುಗೊಳಿಸಿ, ಕ್ರಿಯಾಯೋಜನೆಯಲ್ಲಿ ಸೇರಿಸಿ ಅಭಿವೃದ್ಧಿಗೊಳಿಸಲಾಗುವುದು. ● ಪ್ರಶಾಂತ್‌, ನಿಗಮದ ಸಹಾಯಕ ಎಂಜಿನಿಯರ್‌

● ಡಿ.ನಟರಾಜು

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.