Udayavni Special

ಪ್ಯಾನೆಲ್‌ ವಕೀಲರಿಗೆ ಸೇವಾ ಮನೋಭಾವ ಮುಖ್ಯ


Team Udayavani, Aug 29, 2019, 3:00 AM IST

pannel-vak

ಚಾಮರಾಜನಗರ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ನೇಮಕಗೊಂಡ ಪ್ಯಾನೆಲ್‌ ವಕೀಲರಿಗೆ ಸೇವಾ ಮನೋಭಾವ ತುಂಬಾ ಮುಖ್ಯ. ಹಣಗಳಿಕೆಯ ಉದ್ದೇಶವನ್ನು ಮೀರಿ ಸಾಮಾನ್ಯರಿಗೂ ನ್ಯಾಯ ದೊರೆಯುವಂತೆ ಮಾಡುವುದು ಪ್ಯಾನೆಲ್‌ ವಕೀಲರ ಕರ್ತವ್ಯವಾಗಿರುತ್ತದೆ ಎಂದು ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ‌ ಡಿ. ವಿನಯ್‌ ಹೇಳಿದರು.

ನಗರದ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ರಾಜ್ಯ ಕಾನೂನು ಸೇವೆಗಳರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಅಭಿಯೋಜನಾ ಇಲಾಖೆ ಸಂಯುಕ್ತಾಶ್ರಯದಲ್ಲಿ 2019ನೇ ಸಾಲಿನಲ್ಲಿ ಹೊಸದಾಗಿ ನೇಮಕಗೊಂಡ ಪ್ಯಾನೆಲ್‌ ವಕೀಲರಿಗೆ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಕಾರ್ಯಾಗಾರಗಳು ಸಹಕಾರಿ: ಪ್ಯಾನೆಲ್‌ ವಕೀಲರು ಅವರ ಕಾರ್ಯಾವಧಿಯಲ್ಲಿ ವಿವಿಧ ರೀತಿಯ ಪ್ರಕರಣಗಳನ್ನು ಎದುರಿಸಬೇಕಾಗುತ್ತದೆ. ಅವುಗಳನ್ನು ಸಮರ್ಥವಾಗಿ ಮುನ್ನಡೆಸಲು ಇಂತಹ ಕಾರ್ಯಾಗಾರಗಳು ಸಹಕಾರಿಯಾಗಲಿವೆ. ಕೇವಲ ಉಪನ್ಯಾಸ ರೀತಿಯ ಮಾದರಿಯಾಗಿರದೇ, ವಿಚಾರ ವಿನಿಮಯಕ್ಕೆ ಅವಕಾಶವಿರುವುದರಿಂದ ನಿಮ್ಮ ಎಲ್ಲಾ ಅನುಮಾನಗಳು ಈ ಕಾರ್ಯಾಗಾರದ ಮುಖೇನ ಪರಿಹಾರಗೊಳ್ಳಲಿವೆ ಎಂದು ತಿಳಿಸಿದರು.

ನೈಪುಣ್ಯತೆ ಇರಬೇಕು: ನಗರದ ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಗಣಪತಿ ಜಿ ಬಾದಾಮಿ ಮಾತನಾಡಿ, ಯಾವುದೇ ಪ್ರಕರಣವನ್ನು ಬಗೆಹರಿಸಲು ಪ್ಯಾನೆಲ್‌ ವಕೀಲರು ಮುಂದಾಗಬೇಕು. ಸಾಮಾನ್ಯ ಜನರ ಸಮಸ್ಯೆಗಳನ್ನು ಬಗೆಹರಿಸಲು ಆದ್ಯತೆ ನೀಡಬೇಕು. ಪ್ರಕರಣಗಳ ಇತ್ಯರ್ಥಕ್ಕೆ ಅಗತ್ಯವಿರುವ ನೈಪುಣ್ಯತೆ ಇಂತಹ ಕಾರ್ಯಾ ಗಾರಗಳಿಂದ ದೊರೆಯಲಿದೆ ಎಂದು ಹೇಳಿದರು.

ಕಾನೂನಿನ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಿ: ಇಂದಿಗೂ ಎಷ್ಟೋ ಜನರಿಗೆ ಕಾನೂನಿಗೆ ಬಗೆಗೆ ಸಂಪೂರ್ಣ ಮಾಹಿತಿ ಇಲ್ಲ. ಆಸ್ತಿ ವಿವಾದ, ವಿವಾಹ ವಿಚ್ಛೇದನ ಮುಂತಾದ ವಿಚಾರಗಳನ್ನು ಯಾವುದೇ ಕಾನೂನಿನ ಭದ್ರತೆ ಇಲ್ಲದೇ ತಮ್ಮಲ್ಲೇ ಬಗೆಹರಿಸಿಕೊಳ್ಳುವ ಪದ್ಧತಿ ಇದೆ. ಈ ಹಿಂಜರಿಕೆ ಮೊದಲು ಹೋಗಬೇಕು. ಪ್ರತಿಯೊಬ್ಬರೂ ಕಾನೂನಿನ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.

ತೀರ್ಪುಗಳ ಬಗ್ಗೆ ಅರಿತು ಕೊಂಡಿರಬೇಕು: ನಗರ ಉಪ- ವಿಭಾಗದ ಪೊಲೀಸ್‌ ಡಿವೈಎಸ್‌ಪಿ ಜೆ. ಮೋಹನ್‌ ಮಾತನಾಡಿ ಕಲಿಕೆ ಎಂಬುದು ನಿರಂತರವಾದದ್ದು. ವಕೀಲರಾದವರು ಕಾನೂನಿನಲ್ಲಾದ ಹೊಸ ತಿದ್ದುಪಡಿಗಳು, ಐತಿಹಾಸಿಕ ತೀರ್ಪುಗಳು ಮುಂತಾದವುಗಳ ಬಗ್ಗೆ ಅರಿತುಕೊಂಡಿರಬೇಕು. ಆಗಲೇ ಯಾವುದೇ ಪ್ರಕರಣವನ್ನು ಸಮರ್ಥವಾಗಿ ನಿರ್ವಹಿಸಲು ಸಾಧ್ಯ ಎಂದರು.

ಒಳ್ಳೆಯ ಸೇವೆ ಒದಗಿಸಬೇಕು: ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ. ಜಿ. ವಿಶಾಲಾಕ್ಷಿ ಮಾತನಾಡಿ, ದೇಶದ ಕಟ್ಟಕಡೆಯ ನಾಗರಿಕನಿಗೂ ನ್ಯಾಯ ಸಿಗಬೇಕು ಎಂದು ನಮ್ಮ ಸರ್ವೋತ್ಛ ನ್ಯಾಯಾಲಯ ಪ್ರತಿಪಾದಿಸುತ್ತದೆ. ಅದರಂತೆ ವಕೀಲರು ತಮ್ಮ ಜ್ಞಾನವನ್ನು ಸಾಮಾನ್ಯರಿಗೆ ಉಪಯೋಗವಾಗುವ ರೀತಿಯಲ್ಲಿ ಬಳಸಬೇಕು. ತನ್ಮೂಲಕ ಸಾಮಾನ್ಯರಿಗೂ ಒಳ್ಳೆಯ ಸೇವೆ ಒದಗಿಸಬೇಕು ಎಂದು ಹೇಳಿದರು.

ಸಾಮಾನ್ಯರ ನೆರವಿಗೆ ನಿಲ್ಲಬೇಕು: ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್‌, ಪ್ರತಿಯೊಬ್ಬ ವ್ಯಕ್ತಿಗೂ ಕಾನೂನಿನ ಬಗೆಗೆ ಅರಿವಿರಬೇಕಾಗುತ್ತದೆ. ಕೇವಲ ಹಕ್ಕುಗಳನ್ನಷ್ಟೇ ಕೇಳದೇ ನಾವು ಮಾಡಬೇಕಿರುವ ಕರ್ತವ್ಯಗಳನ್ನು ನಿರ್ವಹಿಸಬೇಕು. ಪ್ಯಾನೆಲ್‌ ವಕೀಲರು ಈ ಗುಣವನ್ನು ರೂಢಿಸಿಕೊಂಡು ಸಾಮಾನ್ಯರ ನೆರವಿಗೆ ನಿಲ್ಲಬೇಕು ಎಂದು ತಿಳಿಸಿದರು.

ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶ ಮತ್ತು ಪ್ರಥಮ ನ್ಯಾಯಿಕ ದಂಡಾಧಿಕಾರಿ ಸ್ಮಿತಾ, ಬೆಂಗಳೂರಿನ ವಕೀಲೆ ಮತ್ತು ವಿಶೇಷ ತರಬೇತುದಾರರಾದ ರಮಾ, ಜಿಲ್ಲಾ ಸರ್ಕಾರಿ ವಕೀಲ‌ ಎಚ್‌. ಎನ್‌ ಲೋಕೇಶ್‌, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್‌. ಮಂಜು ಹರವೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಮಸ್ಟರಿಂಗ್ ಕಾರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ

ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಮಸ್ಟರಿಂಗ್ ಕಾರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ

“ಯಾರೂ ಅಲ್ಲಾ, ಯಡಿಯೂರಪ್ಪಾನೇ ವಿಲನ್”: ಸಚಿವ ಸೋಮಶೇಖರ್ ಹೇಳಿಕೆ

“ಯಾರೂ ಅಲ್ಲಾ, ಯಡಿಯೂರಪ್ಪಾನೇ ವಿಲನ್”: ಸಚಿವ ಸೋಮಶೇಖರ್ ಹೇಳಿಕೆ

ಪೇಶಾವರ: ಭಾರೀ ಸ್ಫೋಟ, ಏಳು ಮಕ್ಕಳ ಸಾವು, 70 ಮಂದಿಗೆ ಗಾಯ

ಪೇಶಾವರ: ಭಾರೀ ಸ್ಫೋಟ, ಏಳು ಮಕ್ಕಳ ಸಾವು, 70 ಮಂದಿಗೆ ಗಾಯ

ನಟಿ ಖುಷ್ಬೂ ಸೇರಿ ಹಲವು ಬಿಜೆಪಿ ನಾಯಕರನ್ನು ಬಂಧಿಸಿದ ತಮಿಳುನಾಡು ಪೊಲೀಸರು

ನಟಿ ಖುಷ್ಬೂ ಸೇರಿ ಹಲವು ಬಿಜೆಪಿ ನಾಯಕರನ್ನು ಬಂಧಿಸಿದ ತಮಿಳುನಾಡು ಪೊಲೀಸರು

ಮಾಜಿ ಸಚಿವ ಡಾ. ವೈ. ನಾಗಪ್ಪ ನಿಧನ

ಮಾಜಿ ಸಚಿವ ಡಾ. ವೈ. ನಾಗಪ್ಪ ನಿಧನ

ಅನುರಾಗ್ ಕಶ್ಯಪ್ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ನಟಿ ಪಾಯಲ್ ಘೋಷ್ ಅಠವಳೆ ಪಕ್ಷ ಸೇರ್ಪಡೆ

ಅನುರಾಗ್ ಕಶ್ಯಪ್ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ನಟಿ ಪಾಯಲ್ ಘೋಷ್ ಅಠವಳೆ ಪಕ್ಷ ಸೇರ್ಪಡೆ

ಕಳ್ಳದಾಸ್ತಾನು ವಿರುದ್ಧ ಕ್ರಮದ ಎಚ್ಚರಿಕೆ ಬೆನ್ನಲ್ಲೇ ಈರುಳ್ಳಿ ದರ ಇಳಿಕೆ

ಕಳ್ಳದಾಸ್ತಾನು ವಿರುದ್ಧ ಕ್ರಮದ ಎಚ್ಚರಿಕೆ ಬೆನ್ನಲ್ಲೇ ಈರುಳ್ಳಿ ದರ ಇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾಮರಾಜನಗರ :18 ಹೊಸ ಕೋವಿಡ್ ಪ್ರಕರಣ ದೃಢ! 284 ಸಕ್ರಿಯ ಪ್ರಕರಣ

ಚಾಮರಾಜನಗರ :18 ಹೊಸ ಕೋವಿಡ್ ಪ್ರಕರಣ ದೃಢ! 284 ಸಕ್ರಿಯ ಪ್ರಕರಣ

c-tdy-1

ಕಿತ್ತೂರು ಚೆನ್ನಮ್ಮ ಮಹಿಳೆಯರಿಗೆ ಆದರ್ಶ

ತನಿಖಾಧಿಕಾರಿಯ ಸೋಗಿನಲ್ಲಿ ವಾಹನ ಅಡ್ಡಗಟ್ಟಿ ವ್ಯಾಪಾರಿಯಿಂದ 14 ಲಕ್ಷ ರೂ ಅಪಹರಣ

ತನಿಖಾಧಿಕಾರಿಗಳ ಸೋಗಿನಲ್ಲಿ ವಾಹನ ಅಡ್ಡಗಟ್ಟಿ ವ್ಯಾಪಾರಿಯಿಂದ 14 ಲಕ್ಷ ರೂ ಅಪಹರಿಸಿದ ತಂಡ

ವಿಷಪ್ರಸಾದ ಪ್ರಕರಣದಿಂದ ಮುಚ್ಚಲ್ಪಟ್ಟಿದ್ದ ಕಿಚ್ಚುಗುತ್ತು ಮಾರಮ್ಮ ದೇವಾಲಯ ದರ್ಶನಕ್ಕೆ ಮುಕ್ತ

ವಿಷಪ್ರಸಾದ ಪ್ರಕರಣದಿಂದ ಮುಚ್ಚಲ್ಪಟ್ಟಿದ್ದ ಕಿಚ್ಚುಗುತ್ತು ಮಾರಮ್ಮ ದೇವಾಲಯ ದರ್ಶನಕ್ಕೆ ಮುಕ್ತ

ಪತ್ನಿಯ ನಡತೆ ಮೇಲೆ ಅನುಮಾನಗೊಂಡ ಪತಿ : ಕುಡಿದ ಮತ್ತಿನಲ್ಲಿ ಪತ್ನಿಯ ಕೊಲೆ

ಪತ್ನಿಯ ನಡತೆ ಮೇಲೆ ಅನುಮಾನಗೊಂಡ ಪತಿ : ಕುಡಿದ ಮತ್ತಿನಲ್ಲಿ ಪತ್ನಿಯ ಕೊಲೆ

MUST WATCH

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

udayavani youtube

The Sharada statue embodied in the artist’s finesse | Navaratri Specialಹೊಸ ಸೇರ್ಪಡೆ

ಶಾಸಕರು-ಮಾಜಿ ಸಚಿವರ ಸ್ಪರ್ಧೆ ತಂದ ಕುತೂಹಲ!

ಶಾಸಕರು-ಮಾಜಿ ಸಚಿವರ ಸ್ಪರ್ಧೆ ತಂದ ಕುತೂಹಲ!

ಬ್ಲೇಡ್‌ ಕಂಪನಿಗಳಿಗೆ ಬೀಳುವುದೇ ಬ್ರೇಕ್‌?

ಬ್ಲೇಡ್‌ ಕಂಪನಿಗಳಿಗೆ ಬೀಳುವುದೇ ಬ್ರೇಕ್‌?

ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಮಸ್ಟರಿಂಗ್ ಕಾರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ

ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಮಸ್ಟರಿಂಗ್ ಕಾರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ

bng-tdy-2

ಕ್ಷೇತ್ರದ ಪ್ರಗತಿಗಾಗಿ ಕಾಂಗ್ರೆಸ್‌ ಬೆಂಬಲಿಸಿ

ಆರ್‌.ಆರ್‌. ನಗರದಲ್ಲಿ ಡಿ.ಕೆ.ಸುರೇಶ್‌ ಕಾರ್ಯತಂತ್ರ

ಆರ್‌.ಆರ್‌. ನಗರದಲ್ಲಿ ಡಿ.ಕೆ.ಸುರೇಶ್‌ ಕಾರ್ಯತಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.