ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಸಿಲಿಂಡರ್ ಸ್ಫೋಟ: ಯುವಕ ಸಾವು
Team Udayavani, May 26, 2022, 12:14 PM IST
ಗುಂಡ್ಲುಪೇಟೆ: ಸಿಲಿಂಡರ್ ಸ್ಫೋಟ ಹಾಗೂ ವಿದ್ಯುತ್ ಸ್ಪರ್ಶದಿಂದ ಯುವಕನೋರ್ವ ಸುಟ್ಟು ಕರಕಲಾಗಿರುವ ಘಟನೆ ತಾಲೂಕಿನ ಮಳವಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಮಳವಳ್ಳಿ ಗ್ರಾಮದ ಸ್ವಾಮಿ (28) ಮೃತ ದುರ್ದೈವಿ.
ಸ್ವಾಮಿ ಮನೆಯಲ್ಲಿ ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಸಿಲಿಂಡರ್ ಸ್ಫೋಟಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆ ಮೇಲ್ಛಾವಣಿ ಹಾರಿಹೋಗಿದ್ದು, ಮನೆಯಲ್ಲಿದ್ದ ವಿವಿಧ ವಸ್ತುಗಳು ಸಹ ಸುಟ್ಟು ಹೋಗಿದೆ.
ಇದನ್ನೂ ಓದಿ:ಮಳಲಿ ವಿವಾದ: ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಆಸ್ಪದವಿಲ್ಲ: ಅಲೋಕ್ ಕುಮಾರ್
ಸ್ಫೋಟಗೊಂಡ ಸಿಲಿಂಡರ್ ಭಾರತ್ ಗ್ಯಾಸ್ ಕಂಪನಿಗೆ ಸೇರಿದ್ದು, ಸ್ಥಳಕ್ಕೆ ಕಂಪನಿಯ ಮ್ಯಾನೇಜರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಗುಂಡ್ಲುಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವವನ್ನು ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.