ಮೀಸಲಾತಿ ಪ್ರಮಾಣ ಹೆಚ್ಚಿಸದಿದ್ರೆ ವಿಧಾನಸೌಧಕ್ಕೆ ಮುತ್ತಿಗೆ

ಪ್ರತಿಭಟನೆ ನಡೆಸುತ್ತಿದರೂ, ಸರ್ಕಾರ ಸಮಸ್ಯೆ ಪರಿಹರಿಸಿಲ್ಲ.

Team Udayavani, May 21, 2022, 5:56 PM IST

ಮೀಸಲಾತಿ ಪ್ರಮಾಣ ಹೆಚ್ಚಿಸದಿದ್ರೆ ವಿಧಾನಸೌಧಕ್ಕೆ ಮುತ್ತಿಗೆ

ಎಚ್‌.ಡಿ.ಕೋಟೆ: ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಸರ್ಕಾರ ಸುಗ್ರೀವಾಜ್ಞೆ ಹೊರಡಿಸದೆ ಇದ್ದರೆ, ಮುಂದೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಪ್ರಗತಿಪರ ಸಂಘಟನೆಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ.

ಪಟ್ಟಣದಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಾಲೂಕಿನ ಪ್ರಗತಿಪರ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದರು. 40 ವರ್ಷ ಹಿಂದೆ ಎಸ್ಸಿ, ಎಸ್ಟಿಗೆ ಇದ್ದಷ್ಟೇ ಮೀಸಲಾತಿ ಮುಂದುವರಿಯುತ್ತಿದೆ. ರಾಜ್ಯದಲ್ಲಿ ಶೇ.3 ಜನಸಂಖ್ಯೆ ಇರುವವರಿಗೆ ಸರ್ಕಾರ ಶೇ.10 ಮೀಸಲಾತಿ ನೀಡಿದೆ ಎಂದು ಹೇಳಿದರು.

2 ವರ್ಷ ಹಿಂದೆ ವರದಿ ಸಲ್ಲಿಕೆ: ಬಹುಸಂಖ್ಯೆಯಲ್ಲಿರುವ ಎಸ್ಸಿ ಎಸ್ಟಿ, ಒಬಿಸಿಗೆ ಮೊದಲಿದ್ದ ಮೀಸಲಾತಿ ಮುಂದುವರಿಯುತ್ತಿದೆ. ಮೀಸಲಾತಿ ಹೆಚ್ಚಿಸುವಂತೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಸರ್ಕಾರವೇ ನಿಯೋಜಿಸಿದ ನ್ಯಾ.ನಾಗಭೂಷಣ್‌ ಆಯೋಗ ಎಸ್ಸಿಗೆ ಶೇ.17, ಎಸ್ಟಿಗೆ ಶೇ.7.5 ಮೀಸಲಾತಿ ಹೆಚ್ಚಿಸುವಂತೆ ಸರ್ಕಾರಕ್ಕೆ 2 ವರ್ಷ ಹಿಂದೆಯೇ ವರದಿ ಸಲ್ಲಿಸಿದೆ. ಆದರೆ, ಕಣ್ಣು, ಮೂಗು, ಬಾಯಿ ಇಲ್ಲದ ಸರ್ಕಾರ ಬಹುಸಂಖ್ಯೆಯಲ್ಲಿರುವ ಸಮುದಾಯಗಳ ಬೇಡಿಕೆ ತಿರಸ್ಕರಿಸಿದೆ ಎಂದು ದೂರಿದರು.

ಸರ್ಕಾರಕ್ಕೆ ಎಚ್ಚರಿಕೆ: ಮೀಸಲಾತಿ ಹೆಚ್ಚಳಕ್ಕೆ ಸರ್ಕಾರವನ್ನು ಒತ್ತಾಯಿಸಿ ಪ್ರಸನ್ನಾನಂದ ಶ್ರೀಗಳು 100 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದರೂ, ಸರ್ಕಾರ ಸಮಸ್ಯೆ ಪರಿಹರಿಸಿಲ್ಲ. ಶ್ರೀಗಳ ಬೆಂಬಲವಾಗಿ ರಾಜ್ಯಾದ್ಯಂತ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿದೆ ಎಂದು ಆರೋಪಿಸಿದರು.

ಶಾಸಕ ಅನಿಲ್‌ ಚಿಕ್ಕಮಾದು, ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ, ತಾಲೂಕು ಆದಿಕರ್ನಾಟಕ ಮಹಾಸಭಾಧ್ಯಕ್ಷ ಎಚ್‌.ಸಿ.ನರಸಿಂಹಮೂರ್ತಿ, ಆದಿ ಜಾಬಂಬ ಸಮುದಾಯದ ಶಿವಯ್ಯ, ಸಂವಿಧಾನ ಸಂರಕ್ಷಣಾ ಸಮಿತಿ ಅಧ್ಯಕ್ಷ ಎಂ.ಸಿ.ದೊಡ್ಡನಾಯ್ಕ, ದಸಂಸ ಜಿಲ್ಲಾ ಸಂಚಾಲಕ ಬೆಟ್ಟಯ್ಯಕೋಟೆ ಮಾತನಾಡಿದರು.

ಇದಕ್ಕೂ ಮುನ್ನ ಪ್ರತಿಭಟನಾಕಾರರು ಪಟ್ಟಣದ ಶ್ರೀಲಕ್ಷ್ಮೀವರದಾಜಸ್ವಾಮಿ ದೇವಸ್ಥಾನದ ಬಳಿಯಿಂದ 1ನೇ ಮುಖ್ಯರಸ್ತೆ ಮಾರ್ಗವಾಗಿ ಎಚ್‌ .ಬಿ.ರಸ್ತೆ ತಲುಪಿ, ಅಲ್ಲಿಂದ ಮಿನಿವಿಧಾನಸೌಧ ತಲುಪಿದರು. ರಸ್ತೆಯುದ್ದಕ್ಕೂ ಸರ್ಕಾರದ ನಿರ್ಲಕ್ಷತನದ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಹಾಕಿ, ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಮುದ್ದಮಲ್ಲಯ್ಯ, ಮಧುಕುಮಾರ್‌, ಹೊಂಡ
ನಯಾಜ್‌, ಪರಶಿವಮೂರ್ತಿ, ಚಾಕಳ್ಳಿ ಕೃಷ್ಣ, ಚಿಕ್ಕವೀರನಾಯ್ಕ, ಭಾಗ್ಯಲಕ್ಷ್ಮೀ, ಕ್ಯಾತನಹಳ್ಳಿ ನಾಗರಾಜು, ಈರೇಗೌಡ, ಜಯಪ್ರಕಾಶ್‌, ಎಸ್‌ .ಸಿ.ಮಂಜುನಾಥ್‌ ಇತರರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.