ಮೋದಿಯಿಂದ ಸಮಾಜ ವಿಭಜಿಸುವ ರಾಜಕಾರಣ

Team Udayavani, Mar 16, 2019, 7:38 AM IST

modiinda.jpg

ಚಾಮರಾಜನಗರ: 40 ವರ್ಷಗಳ ನನ್ನ ರಾಜಕೀಯ ಜೀವನದಲ್ಲಿ ನರೇಂದ್ರ ಮೋದಿಯವರಷ್ಟು ಸುಳ್ಳು ಹೇಳಿದಂಥ ಪ್ರಧಾನಿ ಯಾರೂ ಇಲ್ಲ ಎಂದರೆ ಅತಿಶಯೋಕ್ತಿಯಲ್ಲ. ರಾಮಮಂದಿರ, ಹಿಂದುತ್ವ, ಸರ್ಜಿಕಲ್‌ ಸ್ಟ್ರೈಕ್‌ನಂಥ ಭಾವನಾತ್ಮಕ ವಿಚಾರಗಳನ್ನು ಜನರ ಮನಸಿನಲ್ಲಿ ಬಿತ್ತಿ ಕೆರಳಿಸಿ ಸಮಾಜ ಹೊಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ನಗರದ ಡಾ.ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಶುಕ್ರವಾರ ಆಯೋಜಿಸಿದ್ದ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿ, ಅನೇಕ ಬಾರಿ ಪ್ರಧಾನಿ ನರೇಂದ್ರ ಮೋದಿ ಮತ್ತು ಯಡಿಯೂರಪ್ಪಗೆ ನಮ್ಮ ಸಾಧನೆ ಮತ್ತು ಅವರ ಸಾಧನೆಗಳ ಬಗ್ಗೆ ಚರ್ಚೆ ಮಾಡಲು ಕರೆದಿದ್ದೇನೆ. ಅಭಿವೃದ್ಧಿ ಮಾಡದ ಯಾವುದೇ ಕೆಲಸ ನಾವು ಕೇಳಿಲ್ಲ. 165 ಭರವಸೆಗಳನ್ನು ಈಡೇರಿಸಿದ ಸರ್ಕಾರ ನಮ್ಮದು. ನರೇಂದ್ರ ಮೋದಿ 5 ವರ್ಷ ಇದ್ದರು, ಅವರು ಏನೇನು ಮಾಡಿದ್ದೇವೆಂದು ಹೇಳಲಿ ಎಂದು ಸವಾಲು ಹಾಕಿದರು.

ಸಮಾಜ ಹೊಡೆಯುವ ಹೇಳಿಕೆ: ಬಿಜೆಪಿಯವರು ಭಾವನಾತ್ಮಕ ವಿಚಾರ ಬಿತ್ತಿ, ಕೆರಳಿಸಿ ಸಮಾಜ ಹೊಡೆಯುವ ಕೆಲಸ ಮಾಡುತ್ತಿದ್ದಾರೆ. ಒಂದು ಕಡೆ ಸುಳ್ಳು. ಇನ್ನೊಂದೆಡೆ ಸಮಾಜವನ್ನು ಹೊಡೆಯುವ ಕೆಲಸ. ತಮ್ಮ ಅಭಿವೃದ್ಧಿ ಕೆಲಸದ ಬಗ್ಗೆ ಮಾತನಾಡುವುದಿಲ್ಲ. ಅವರ ಭಾಷಣಗಳನ್ನು ನೋಡಿ. 2014ರಲ್ಲಿ ಏನು ಭರವಸೆ ನೀಡಿದ್ದೆವು? ಅವುಗಳಲ್ಲಿ ಎಷ್ಟು ಪಾಲನೆಯಾಗಿದೆ? ಹುಬ್ಬಳ್ಳಿ  ಕಲಬುರಗಿ ಭಾಷಣದಲ್ಲಿ ಎಲ್ಲಿಯೂ ಹೇಳಲಿಲ್ಲ ಎಂದು ಆರೋಪಿಸಿದರು.

ಬಡವರಿಗಿಲ್ಲ ಅಚ್ಚೇ ದಿನ್‌: ನರೇಂದ್ರ ಮೋದಿಯವರು ಏನೆಲ್ಲ ಹೇಳಿದರು, ಅಚ್ಚೇ ದಿನ್‌ ಆಯೇಗಾ ಎಂದಿದ್ದರು. ನೀರವ್‌ ಮೋದಿ, ವಿಜಯ್‌ಮಲ್ಯ, ಅಮಿತ್‌ಶಾ, ನರೇಂದ್ರಮೋದಿ ಅವರಿಗೆ ಅಚ್ಛೇದಿನ್‌ ಬಂತು. ಬಡವರಿಗೆ ಬರಲಿಲ್ಲ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಸಹಕಾರ ನೀಡದ ಮೋದಿ: ರೈತರು ದೇಶದ ಬೆನ್ನೆಲುಬು. ನಾನು ನಿಯೋಗ ಕರೆದುಕೊಂಡು ಹೋದೆ. ರಾಜ್ಯದಲ್ಲಿ ಬರಗಾಲ ಇತ್ತು. ಬಿಜೆಪಿ ಸಂಸದರನ್ನು ಕರೆದುಕೊಂಡು ಹೋದೆ. ನಮ್ಮಲ್ಲಿ ಭೀಕರ ಬರಗಾಲ ಇದೆ. ದಯಮಾಡಿ ರೈತರ ಸಾಲ ಮನ್ನಾ ಮಾಡಿ. ಏನ್‌ ಮಾಡಿದ್ರೂ ಸಾಲಮನ್ನಾ ಮಾಡಲು ಸಾಧ್ಯವಿಲ್ಲ ಎಂದು ನರೇಂದ್ರ ಮೋದಿ ಹೇಳಿದರು. ನಾವು 8165 ಕೋಟಿ ಸಾಲ ಮನ್ನಾ  ಮಾಡಿದ್ದೆವು. ಸಮ್ಮಿಶ್ರ ಸರ್ಕಾರದಲ್ಲಿ  ರಾಷ್ಟ್ರೀಕೃತ ಬ್ಯಾಂಕ್‌ ಸಾಲ 36 ಸಾವಿರ ಕೋಟಿ ಸಾಲ ಮನ್ನಾ ಮಾಡಲಾಗಿದೆ ಎಂದರು.

15 ಪೈಸೆ ಹಾಕದ ಪ್ರಧಾನಿ: ಈಗ ಒಂದು ಅನಿಲ ಸಿಲಿಂಡರ್‌ ಬೆಲೆ 1000 ರೂ. ಆಗಿದೆ. ಯುಪಿಎ ಸರ್ಕಾರ ಇದ್ದಾಗ  450 ರೂ. ಇತ್ತು.  ಅಚ್ಚೇದಿನ್‌ ತರುತ್ತಾರಂತೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈಗ ಕಚ್ಚಾ ತೈಲದರ ಇಳಿಕೆಯಾಗಿದೆ. ಆದರೂ ಪೆಟ್ರೋಲ್‌ ದರ ಮಾಡಲಿಲ್ಲ. 2 ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿದ್ದರು. ಸಣ್ಣ ಕೈಗಾರಿಕೆಗಳು ಮುಚ್ಚಿದ್ದರಿಂದ ಕೋಟ್ಯಂತರ ಮಂದಿ ಇರುವ ಉದ್ಯೋಗವನ್ನೂ ಕಳೆದುಕೊಂಡರು. ಜನರ ಖಾತೆಗೆ  15 ಲಕ್ಷ ರೂ. ಇರಲಿ 15 ಪೈಸೆ ಕೂಡ ಹಾಕಲಿಲ್ಲ ಎಂದು ಅವರು ಟೀಕಿಸಿದರು.

ಕೊಳಕು ಮನಸ್ಸಿನ ಬಿಜೆಪಿ: ನರೇಂದ್ರ ಮೋದಿ ಸರ್ಕಾರದಲ್ಲಿ ಮಂತ್ರಿಯಾಗಿರುವ ಅನಂತಕುಮಾರ ಹೆಗಡೆ ಸಂವಿಧಾನದ ಮೇಲೆ ಪ್ರಮಾಣ ಮಾಡಿ, ಸಂವಿಧಾನವನ್ನೇ ಬದಲಿಸುತ್ತೇವೆ ಎಂದು ಹೇಳಿದ್ದಾರೆ. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡಿದ ಸಂವಿಧಾನವನ್ನೇ ಬದಲಿಸುತ್ತೇವೆ ಎಂದಿರುವ,ಸಂವಿಧಾನಕ್ಕೆ ವಿರುದ್ಧವಾಗಿರುವವರನ್ನು ಯಾರೂ ನಂಬೇಡಿ. ಆರೆಸೆಸ್‌ ಸರಸಂಚಾಲಕ ಮೋಹನ್‌ ಭಾಗವತ್‌ ಮೀಸಲಾತಿ ರದ್ದಾಗಬೇಕು ಎಂದಿದ್ದಾರೆ. ಮೀಸಲಾತಿಯನ್ನು ರದ್ದು ಮಾಡಬೇಕೆಂಬ ಸಂವಿಧಾನಕ್ಕೆ ವಿರುದ್ಧವಾಗಿರುವ ಈ ಕೊಳಕು ಮನಸುಗಳನ್ನು ಬದಲಿಸದಿದ್ದರೆ ಬಡವರು, ದಲಿತರು,  ಅಲ್ಪಸಂಖ್ಯಾತರು ಇವರ್ಯಾರಿಗೂ ಉಳಿಗಾಲವಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ, ಅರಣ್ಯ ಸಚಿವ ಸತೀಶ್‌ ಜಾರಕಿಹೊಳಿ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ, ವಿಧಾನಪರಿಷತ್‌ ಸದಸ್ಯ ಸಿ.ಎಂ. ಇಬ್ರಾಹಿಂ, ಸಂಸದ ಆರ್‌. ಧ್ರುವನಾರಾಯಣ, ಮಾಜಿ ಸಚಿವರಾದ ಎಚ್‌.ಸಿ. ಮಹದೇವಪ್ಪ, ಗೀತಾ ಮಹದೇವಪ್ರಸಾದ್‌, ಕೆಪಿಸಿಸಿ ಮಹಿಳಾ ಘಟಕ ಅಧ್ಯಕ್ಷೆ ಪುಷ್ಪಾ ಅಮರನಾಥ್‌,  ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪಿ. ಮರಿಸ್ವಾಮಿ, ಶಾಸಕರಾದ ನರೇಂದ್ರ, ಯತೀಂದ್ರ, ಅನಿಲ್‌ ಚಿಕ್ಕಮಾದು, ಧರ್ಮಸೇನ, ಮಾಜಿ ಶಾಸಕರಾದ ವಾಸು, ಎ.ಆರ್‌. ಕೃಷ್ಣಮೂರ್ತಿ, ಎಸ್‌. ಜಯಣ್ಣ, ಎಸ್‌. ಬಾಲರಾಜು,

ಕೇಶವಮೂರ್ತಿ, ಕೃಷ್ಣಪ್ಪ, ವಾಸಂತಿ ಶಿವಣ್ಣ, ಸುಮಾ ವಸಂತ್‌, ಮಲ್ಲಾಜಮ್ಮ, ಲಕ್ಷ್ಮಿನಾರಾಯಣ, ಮಾಜಿ ಸಂಸದ ಸಿದ್ದರಾಜು, ಜಿ.ಪಂ. ಅಧ್ಯಕ್ಷೆ ಶಿವಮ್ಮ, ಉಪಾಧ್ಯಕ್ಷ ಯೋಗೀಶ್‌, ಜಿಲ್ಲಾಧ್ಯಕ್ಷೆ ಲತಾ ಜಯಣ್ಣ, ಜಿ.ಪಂ. ಸದಸ್ಯರಾದ ಸದಾಶಿವಮೂರ್ತಿ, ಕೆರೆಹಳ್ಳಿ ನವೀನ್‌, ಕೆ.ಎಸ್‌. ಮಹೇಶ್‌, ನಗರಸಭೆ ಮಾಜಿ ಅಧ್ಯಕ್ಷ ನಂಜುಂಡಸ್ವಾಮಿ, ಎಚ್‌.ಎಸ್‌. ನಂಜಪ್ಪ, ಎಪಿಎಂಸಿ ಸದಸ್ಯ ಬಿ.ಕೆ. ರವಿಕುಮಾರ್‌, ಡಿ.ಎನ್‌.ನಟರಾಜು, ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.