ಚಾ.ನಗರಕ್ಕೆ ಬಾರದ ಬಿಎಸ್‌ವೈ ಬಜೆಟ್‌ ಬಿಡಿಗಾಸು


Team Udayavani, Mar 9, 2021, 5:02 PM IST

ಚಾ.ನಗರಕ್ಕೆ  ಬಾರದ ಬಿಎಸ್‌ವೈ ಬಜೆಟ್‌ ಬಿಡಿಗಾಸು

ಚಾಮರಾಜನಗರ: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಮಂಡಿಸಿದ ರಾಜ್ಯ ಬಜೆಟ್‌ ನಲ್ಲಿ ಚಾಮರಾಜನಗರ ಜಿಲ್ಲೆಗೆಂದೇ ನೀಡಿರುವ ಅನುದಾನ 10 ಕೋಟಿ ರೂ.ಗಳನ್ನೂ ಮೀರ ದಿದ್ದು, ಮೂಗಿಗೆ ತುಪ್ಪ ಸವರುವ ಕೆಲಸ ಮಾಡಲಾಗಿದೆ. ಮುಖ್ಯ ಮಂತ್ರಿಯವರು ಭೇಟಿ ನೀಡಲು ಹಿಂಜರಿಯುವ ಚಾಮರಾಜನಗರಕ್ಕೆ ಬಜೆಟ್‌ನಲ್ಲಿ ಅನುದಾನ ನೀಡಲು ಸಹ ಹಿಂಜರಿತ ಕಂಡು ಬಂದಿದೆ!

ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟ ಪ್ರದೇಶದಲ್ಲಿರುವ ಗೋಪಿನಾಥಂ ಸಮೀಪ 5 ಕೋಟಿರೂ. ವೆಚ್ಚದಲ್ಲಿ ವನ್ಯಜೀವಿ ಸಫಾರಿ ಮತ್ತು ಪರಿಸರಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲಾಗು ವುದು.ಚಾಮರಾಜನಗರದಲ್ಲಿ ಅರಿಶಿನ ಮಾರುಕಟ್ಟೆ ಯನ್ನು ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವ ದಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಲಾಗಿದೆ. ಆದರೆ ಅದಕ್ಕೆ ಎಷ್ಟು ಮೊತ್ತ ಎಂದು ನಮೂದಿಸಿಲ್ಲ. ಚಾಮರಾಜನಗರ ತಾಲೂಕಿನ ಬೂದಿಪಡಗದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಆನೆ ಶಿಬಿರ ಪ್ರಾರಂಭಿಸಲಾಗುವುದು. ನಿರ್ಮಾಣ ಕಾರ್ಮಿಕರು ವಸತಿ ಸಮಸ್ಯೆ ಎದುರಿಸುತ್ತಿರುವ ಕಾರಣ ಕಾರ್ಮಿಕರ ಕಲ್ಯಾಣ ಮಂಡಳಿ ಯಿಂದ ಚಾಮರಾಜನಗರವೂಸೇರಿ ನಾಲ್ಕೈದು ಜಿಲ್ಲೆ ಗಳಲ್ಲಿ ತಾತ್ಕಾಲಿಕವಾದ 1 ವಸತಿ ಗೃಹ ನಿರ್ಮಿಸಲಾಗುವುದು.

ಇದಿಷ್ಟೇ ಬಜೆಟ್‌ನಲ್ಲಿ ಚಾಮರಾಜನಗರ ಜಿಲ್ಲೆಯ ಹೆಸರು ಕಾಣಿಸಿಕೊಂಡಿರುವ ಅನುದಾನಗಳು.ಚಾಮರಾಜನಗರ ಜಿಲ್ಲೆಯ ಹೆಸರು ಉಲ್ಲೇಖೀಸಿಲ್ಲವಾದರೂ, ಕೋವಿಡ್‌ 19ರ ಅವಧಿಯಲ್ಲಿ ನಿರ್ಮಿಸಿದಮೌಲ್ಯಯುತ ವೈದ್ಯಕೀಯ ಸೌಕರ್ಯ ವ್ಯರ್ಥವಾಗದಂತೆ ಸದ್ಬಳಕೆ ಮಾಡಲು ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ 25 ಹಾಸಿಗೆಗಳ ತೀವ್ರ ನಿಗಾ ಘಟಕ ಸ್ಥಾಪಿಸಲಾಗುವುದು ಎಂದು ತಿಳಿಸಲಾಗಿದೆ. ಇದರಡಿಯಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯೂ ಸೇರುತ್ತದೆ. ಇದಲ್ಲದೇ, ಜಾನುವಾರುಗಳನ್ನು ಸಂರಕ್ಷಿಸಲು ಚಾಮರಾಜನಗರ ದಲ್ಲಿ ಗೋಶಾಲೆ ತೆರೆಯಲಾಗುವುದು, ಎರಡು ಅರಣ್ಯ ಪ್ರದೇಶದ ಮಧ್ಯದ ಕಾರಿಡಾರ್‌ ಪ್ರದೇಶವನ್ನು ಸರ್ಕಾರ ಖರೀದಿಸಲು ಹೊಸ ನೀತಿ ರೂಪಿಸಲಾಗುವುದು ಎಂದು ತಿಳಿಸಲಾಗಿದೆ.ಜಿಲ್ಲೆಯ ಅರಣ್ಯ ಪ್ರದೇಶಗಳಿಗೂ ಇದರಿಂದ ಪ್ರಯೋ ಜನ ದೊರಕಬಹುದು. ಅರಿಶಿನ ಮಾರುಕಟ್ಟೆಯ ಸಮಗ್ರ ಅಭಿವೃದ್ಧಿ ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ. ಆದರೆ ಅದಕ್ಕೆ ಇಂತಿಷ್ಟು ಎಂದು ಅನುದಾನ ಘೋಷಿಸಿಲ್ಲ. ಮೇಲಾಗಿಇದೊಂದು ಬೃಹತ್‌ ಗಾತ್ರದ ಯೋಜನೆಯೇನೋಎಂಬಂತೆ ಇದಕ್ಕೂ, ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಎಂದು ತಿಳಿಸಲಾಗಿದೆ!

ಈ ಎಲ್ಲ ಯೋಜನೆಗಳ ವೆಚ್ಚ 10 ಕೋಟಿ ರೂ. ಗಳನ್ನು ಸಹ ದಾಟುವುದಿಲ್ಲ. ಅಭಿವೃದ್ಧಿ ಹೊಂದಲುಮುಂದಡಿಯಿಡುತ್ತಿರುವ ಶೈಶವಾವಸ್ಥೆಯಲ್ಲಿರುವಒಂದು ಜಿಲ್ಲೆಯ ಅಭಿವೃದ್ಧಿಗೆ ರಾಜ್ಯ ಬಜೆಟ್‌ನಲ್ಲಿಸಮಾಧಾನಕರ ರೀತಿಯ ಯೋಜನೆ-ಅನುದಾನ ದೊರಕುವ ನಿರೀಕ್ಷೆಗಳು ಜನರದಲ್ಲಿದ್ದವು. ಆದರೆ ಆನಿರೀಕ್ಷೆಗಳು ಹುಸಿಯಾಗಿವೆ.

ಬಜೆಟ್‌ ಸಿದ್ಧತೆ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ರವಿ ಅವರು ಜಿಲ್ಲೆಗೆ ಅಗತ್ಯವಾಗಿ ಆಗಬೇಕಾದ ಕೆಲವು ಯೋಜನೆಗಳ ಪ್ರಸ್ತಾವನೆ ಸಲ್ಲಿಸಿದ್ದರು. ಅವುಗಳ ಬಗ್ಗೆ ಬಜೆಟ್‌ನಲ್ಲಿ ಯಾವುದೇ ಪ್ರಸ್ತಾಪ ಇಲ್ಲ. ಜಿಲ್ಲೆಯಲ್ಲಿ ಒಟ್ಟು 5 ತಾಲೂಕುಗಳಿದ್ದು, ಒಂದೇ(ಕೊಳ್ಳೇಗಾಲ) ಉಪ ವಿಭಾಗ ಇದೆ. ಕಾರ್ಯ ನಿರ್ವ ಹಣೆಗೆ ಅನುಕೂಲವಾಗಲು ಮತ್ತೂಂದು ಉಪ ವಿಭಾಗ ರಚನೆ ಮಾಡಬೇಕು ಎಂಬ ಮನವಿ ಸಲ್ಲಿಸಿದ್ದರು. ಅದು ಈಡೇರಿಲ್ಲ. ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ ಕೊಳ್ಳೇಗಾಲದಿಂದ ಹನೂರುವರೆವಿಗೆ ಕೆಶಿಪ್‌ ಯೋಜನೆಯಡಿ ರಸ್ತೆಕಾರ್ಯ ಪ್ರಗತಿಯಲ್ಲಿದೆ. ಭಕ್ತಾದಿಗಳು ಹಾಗೂ ಸ್ಥಳೀಯರಿಗೂ ಅನುಕೂಲ ವಾಗುವಂತೆ ಹನೂರಿ ನಿಂದ ಮಲೆ ಮಹದೇಶ್ವರ ಬೆಟ್ಟದವರಗಿನ ರಸ್ತೆ ಅಭಿ ವೃದ್ಧಿ ಪ್ರಸ್ತಾವ ಯೋಜನೆಗೆ ಅನುಮೋದನೆ ನೀಡಿ ಅನುದಾನ ಬಿಡುಗಡೆ ಮಾಡಬೇಕು ಎಂಬ ಒತ್ತಾಯವಿತ್ತು. ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ಉನ್ನತ ಆರೋಗ್ಯಸೌಲಭ್ಯ ಕಲ್ಪಿಸಲು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮಾಡಲಾಗುವುದು ಎಂದು ಮುಖ್ಯ ಮಂತ್ರಿಯ ವರು ಬೆಟ್ಟಕ್ಕೆ ಬಂದಿದ್ದಾಗ ಭರವಸೆ ನೀಡಿ ದ್ದರು. ಅದಕ್ಕೆ ಬಜೆಟ್‌ನಲ್ಲಿ ಅನುದಾನವನ್ನೇನೂ ನೀಡಿಲ್ಲ. ಹನೂರು ಜಿಲ್ಲೆಯ ಹೊಸ ತಾಲೂಕಾಗಿದೆ.ಸುಗಮ ಕಾರ್ಯನಿರ್ವಹಣೆಗಾಗಿ 10 ಕೋಟಿ ರೂ. ವೆಚ್ಚದಲ್ಲಿ ಮಿನಿ ವಿಧಾನ ಸೌಧ ಕಟ್ಟಡ ನಿರ್ಮಾಣಕ್ಕೆಈಗಾಗಲೇ ಪ್ರಸ್ತಾವ ಕಳುಹಿಸಲಾಗಿತ್ತು. ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 112 ಮತ್ತು 209 ಸಂಪರ್ಕಿಸುವ ಸಂತೆಮರಹಳ್ಳಿ ಮೂಗೂರು ಕ್ರಾಸ್‌ ವರೆಗಿನ 7 ಕಿ.ಮೀ. ರಸ್ತೆಯನ್ನು 18 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಯೋಜನೆ ಪ್ರಸ್ತಾವನೆಯನ್ನು ರಾಜ್ಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಕಳುಹಿಸಲಾಗಿತ್ತು.

ಯಳಂದೂರಿನ 30 ಹಾಸಿಗೆಗಳ ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ 15.3 ಕೋಟಿ ರೂ ವೆಚ್ಚದ ಪ್ರಸ್ತಾವ ಈಗಾಗಲೇ ಕಳು ಹಿಸಲಾಗಿತ್ತು. ಇವು ಅಧಿಕೃತವಾಗಿ ಜಿಲ್ಲಾಧಿಕಾರಿಯವರೇ ಮಂಡಿ ಸಿದ್ದ ಪ್ರಸ್ತಾವಗಳು. ಇದರ ಬಗ್ಗೆ ಬಜೆಟ್‌ನಲ್ಲಿ ಯಾವುದೇ ಚಕಾರ ಇಲ್ಲ

ಹೊಸ ಬಸ್‌ ನಿಲ್ದಾಣ :

ನಗರದಲ್ಲಿ ಈಗಿರುವ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಚಿಕ್ಕದಾಗಿದ್ದು, ವಿಶಾಲವಾದ ಹೈಟೆಕ್‌ ಬಸ್‌ ನಿಲ್ದಾಣವನ್ನು ಸಂತೆಮರಹಳ್ಳಿ ರಸ್ತೆಯ ರೇಷ್ಮೆ ಇಲಾಖೆ ಕಟ್ಟಡದ ಆವರಣದಲ್ಲಿ ನಿರ್ಮಿಸಲು ಅನುದಾನ ನಿರೀಕ್ಷಿಸಲಾಗಿತ್ತು.

ಪ್ರವಾಸಿತಾಣಗಳ ಅಭಿವೃದ್ಧಿಗೆ ಅನುದಾನ: ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫ‌ುಲ ಅವಕಾಶಗಳಿದ್ದು, ಪ್ರವಾಸಿ ತಾಣಗಳ ಅಭಿವೃದ್ಧಿ ಮತ್ತು ಪ್ರವಾಸಿಗರನ್ನು ಆಕರ್ಷಿಸುವ ಯೋಜನೆಗಳನ್ನು ರೂಪಿಸಿ ಅಭಿವೃದ್ಧಿ ಪಡಿಸಲು ನೂರಾರು ಕೋಟಿ ರೂ.ಗಳ ಅನುದಾನದ ಅಗತ್ಯವಿತ್ತು.ಕೈಗಾರಿಕಾ ಪ್ರದೇಶ ಅಭಿವೃದ್ಧಿ: ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ತಾಲೂಕಿನಬದನಗುಪ್ಪೆ-ಕೆಲ್ಲಂಬಳ್ಳಿ ಪ್ರದೇಶದಲ್ಲಿ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿ ಪಡಿಸಲು ಸ್ಥಳಮೀಸಲಿರಿಸಲಾಗಿದೆ. ಅಲ್ಲಿಗೆ ರಸ್ತೆ, ಬೀದಿದೀಪ ಇನ್ನಿತರ ಮೂಲಸೌಕರ್ಯ ಒದಗಿಸಲಾಗಿದೆ. ಅದರೆ ಇನ್ನೂ ಅಲ್ಲಿ ಕೈಗಾರಿಕೆಗಳು ಸ್ಥಾಪನೆಗೊಂಡಿಲ್ಲ. ಅದಕ್ಕಾಗಿ ನೂತನ ಬಜೆಟ್‌ನಲ್ಲಿ ಅನುದಾನ ನಿರೀಕ್ಷೆ ಮಾಡಲಾಗಿತ್ತು. ಈ ಎಲ್ಲ ನಿರೀಕ್ಷೆಗಳನ್ನು ಮುಖ್ಯಮಂತ್ರಿಯವರು ನಿರೀಕ್ಷೆಯಾಗೇ ಉಳಿಸಿದ್ದಾರೆ.

ಪ್ರವಾಸೋದ್ಯಮಕ್ಕೆ  ಅನುದಾನ ಇಲ್ಲ,ಕೈಗಾರಿಕೆ ಪ್ರದೇಶಕ್ಕೆ  ದಂಬಡಿ ಹಣವಿಲ್ಲ  :

ಸಮ್ಮಿಶ್ರ ಸರ್ಕಾರದಲ್ಲಿ ಎನ್‌. ಮಹೇಶ್‌ ಶಿಕ್ಷಣ ಸಚಿವರಾಗಿದ್ದಾಗ ಜಿಲ್ಲೆಯ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಗೆ 79.92 ಕೋಟಿ ರೂ. ಬಿಡುಗಡೆ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈಗ ಕೊಠಡಿಗಳ ನಿರ್ಮಾಣ ಸೇರಿದಂತೆ ಜಿಲ್ಲೆಯ ಶಾಲೆಗಳ ಅಭಿವೃದ್ಧಿಗೆ 100 ಕೋಟಿ ರೂ. ಗಳ ಅನುದಾನ ಅಗತ್ಯವಿದೆ. ಅದನ್ನು ಬಜೆಟ್‌ನಲ್ಲಿ ನೀಡಬೇಕು ಎಂಬ ಕೋರಲಾಗಿತ್ತು. ಕಾನೂನು ಕಾಲೇಜು: ಜಿಲ್ಲೆಯಲ್ಲಿಸರ್ಕಾರಿ ಕಾನೂನು ಕಾಲೇಜು ಆರಂಭವಾಗಲು ರಾಜ್ಯ ಸರ್ಕಾರ ಅನುದಾನ ನೀಡಿಲ್ಲ.

ವಿಶ್ವವಿದ್ಯಾನಿಲಯ: ನಗರದ ಡಾ. ಅಂಬೇಡ್ಕರ್‌ಸ್ನಾತಕೋತ್ತರ ಕೇಂದ್ರವನ್ನು ವಿಶ್ವವಿದ್ಯಾಲಯವಾಗಿ ಮಾಡುವ ಉದ್ದೇಶದಿಂದ ಸ್ಥಾಪಿಸಲಾಗಿದೆ. ಇದ ರಿಂದ ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಸಹಾಯಕವಾಗು ತ್ತದೆ. ಆದ್ದರಿಂದ ಇದನ್ನು ವಿವಿಯಾಗಿಪರಿವರ್ತಿಸ ಬೇಕು ಎಂಬ ಬೇಡಿಕೆ ಶೈಕ್ಷಣಿಕ ವಲಯದಲ್ಲಿತ್ತು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ: ಚಾಮರಾಜನಗರ, ಗುಂಡ್ಲುಪೇಟೆ ತಾಲೂಕಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಕಾರ್ಯಗತವಾಗಿದೆ. ಹನೂರು ತಾಲೂಕಿಗೆಇನ್ನೂ ಜಾರಿಯಾಗಿಲ್ಲ. ಆ ತಾಲೂಕಿನ 291 ಹಳ್ಳಿಗಳಿಗೆ 414 ಕೋಟಿ ರೂ. ಗಳ ಯೋಜನೆ ರೂಪಿಸಲಾಗಿತ್ತು.

ಕಾವೇರಿ 2ನೇ ಹಂತ: ಜಿಲ್ಲಾ ಕೇಂದ್ರ ಚಾಮರಾಜ ನಗರಕ್ಕೆ ತಿ.ನರಸೀಪುರದಿಂದ ಕಾವೇರಿ ನೀರುಪೂರೈಸಲಾಗುತ್ತಿದ್ದು, ಈಗಿನ ಜನಸಂಖ್ಯೆಗೆ ಈ ನೀರು ಸಾಲುತ್ತಿಲ್ಲ. ಹೀಗಾಗಿ ಪಟ್ಟಣಕ್ಕೆ ಎರಡನೇ ಹಂತದಕಾವೇರಿ ಕುಡಿಯುವ ನೀರಿನ ಯೋಜ® ಯನ್ನುನಿರೀಕ್ಷಿಸಲಾಗಿದೆ. ಮಾಲಂಗಿಯಿಂದ ಪೈಪುಗಳ ಮೂಲಕ ನೀರು ಪೂರೈಸುವ ಈ ಯೋಜನೆಗೆ 220ಕೋಟಿ ರೂ. ಅಂದಾಜು ತಯಾರಿಸಲಾಗಿದೆ. ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

 

ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.