ಕಡಿಮೆ ಬೆಲೆಗೆ ಗುಣಮಟ್ಟದ ಮಾಸ್ಕ್ ಪೂರೈಕೆ

Team Udayavani, Mar 21, 2020, 3:00 AM IST

kadime-bele

ಚಾಮರಾಜನಗರ: ಕೊರೊನಾ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಧರಿಸಲಾಗುತ್ತಿರುವ ಮಾಸ್ಕ್ಗೆ ಬೇಡಿಕೆ ಹೆಚ್ಚಾಗುತ್ತಿದೆ. ಬೇಡಿಕೆ ಹೆಚ್ಚಿದಂತೆ ಮಾಸ್ಕ್ಗಳ ಬೆಲೆ ಕೂಡ ಹೆಚ್ಚಾಗುತ್ತಿದೆ. ಏತನ್ಮಧ್ಯೆ ಮಾಸ್ಕ್ಗಳ ಅವಶ್ಯಕತೆಯನ್ನರಿತ ಮಹಿಳಾ ಸ್ವ ಸಹಾಯ ಸಂಘವೊಂದು ಗುಣಮಟ್ಟದ ಮರುಬಳಕೆಯ ಮಾಸ್ಕ್ಗಳನ್ನು ತಯಾರಿಸಿ, ಕಡಿಮೆ ಬೆಲೆಯಲ್ಲಿ ಗ್ರಾಹಕರಿಗೆ ಪೂರೈಸಲು ಮುಂದಾಗಿದೆ.

ತಾಲೂಕಿನ ಗೂಳಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಭುವನೇಶ್ವರಿ ಮಹಿಳಾ ಸ್ವ ಸಹಾಯ ಸಂಘ ಈ ಉಪಕ್ರಮ ಕೈಗೊಂಡಿದೆ. ಜಿಲ್ಲಾ ಪಂಚಾಯ್ತಿಯ ಎನ್‌.ಆರ್‌.ಎಲ್‌.ಎಂ. ಯೋಜನೆಯಡಿ ಸಮುದಾಯ ಬಂಡವಾಳ ನಿಧಿ ಕಾರ್ಯಕ್ರಮದಡಿ ಸಾಲ ಸೌಲಭ್ಯ ಪಡೆದು, ಹೊಲಿಗೆ ಯಂತ್ರಗಳನ್ನು ಖರೀದಿಸಿ, ಸ್ವ ಉದ್ಯೋಗ ಭುವನೇಶ್ವರಿ ಮಹಿಳಾ ಸ್ವ ಸಹಾಯ ಸಂಘ ಸ್ವ ಉದ್ಯೋಗ ಕೈಗೊಂಡಿದೆ. ಸಂಘದ ನಾಗರತ್ನಮ್ಮ, ರಾಜಮ್ಮಣ್ಣಿ ಹಾಗೂ ಭಾಗ್ಯಮ್ಮ ಎಂಬುವವರು ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಮಾಸ್ಕ್ಗಳನ್ನು ತಯಾರಿಸುತ್ತಿದ್ದಾರೆ.

ಮಹಿಳೆಯರ ಜನಸ್ನೇಹಿ ಕ್ರಮ: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಉಂಟಾಗಿರುವ ಮಾಸ್ಕ್ಗಳ ಬೇಡಿಕೆಯನ್ನರಿತ ಈ ಮೂವರು ಮಹಿಳೆಯರು ಸಾಮಾನ್ಯರಿಗೂ ಮಾಸ್ಕ್ ದೊರೆಯುವಂತೆ ಮಾಡುವ ಉದ್ದೇಶದಿಂದ ಈ ಕೆಲಸಕ್ಕೆ ಕೈ ಹಾಕಿದ್ದಾರೆ. ಉತ್ತಮ ರೀತಿಯ ಬಟ್ಟೆ, ಹತ್ತಿ ಉಪಯೋಗಿಸಿ, ಬಳಸಲು ಸುಲಭವಾಗುವ ರೀತಿಯಲ್ಲಿ ಮಾಸ್ಕ್ಗಳನ್ನು ಹೊಲಿಯಲಾಗಿದೆ. ಮಾಸ್ಕ್ಗಳು ಗುಣಮಟ್ಟದ್ದಾಗಿದ್ದು, ಬೆಲೆಯೂ ಕೂಡ ಅತೀ ಕಡಿಮೆ ಇದೆ.

ಎಲ್ಲೆಲ್ಲಿ ಲಭ್ಯ?: ಭುವನೇಶ್ವರಿ ಮಹಿಳಾ ಸ್ವ ಸಹಾಯ ಸಂಘದ ಮಹಿಳೆಯರು ತಾವು ತಯಾರಿಸಿದ ಮಾಸ್ಕ್ಗಳನ್ನು ಆರೋಗ್ಯ ಇಲಾಖೆ ಹಾಗೂ ಇತರೆ ಔಷಧಾಲಯಗಳಿಗೆ ಕಡಿಮೆ ದರದಲ್ಲಿ ಸರಬರಾಜು ಮಾಡುತ್ತಿದ್ದಾರೆ. ಎನ್‌.ಆರ್‌.ಎಲ್‌.ಎಂ. ಯೋಜನೆಯಡಿ ಕೈಗೊಂಡಿರುವ ಚಟುವಟಿಕೆಗಳಿಗೆ ಉತ್ತೇಜಿಸಬೇಕಿದೆ. ನಾಗರತ್ನಾ ಅವರ ದೂರವಾಣಿ ಸಂಖ್ಯೆ: 6362911940 ಆಗಿದ್ದು, ಹೆಚ್ಚಿನ ವಿವರಗಳಿಗೆ ಸಂಪರ್ಕಿಸಬಹುದಾಗಿದೆ.

ಜಿಪಂನ ಎನ್‌ಆರ್‌ಎಲ್‌ಎಂ ಯೋಜನೆಯಡಿ ನಮಗೆ ಮಾಸ್ಕ್ ಹೊಲಿಯಲು ತರಬೇತಿ ನೀಡಿದ್ದಾರೆ. ಆರೋಗ್ಯ ಇಲಾಖೆ ನಿರ್ದೇಶನದಂತೆ ಮರುಬಳಕೆ ಮಾಡಬಹುದಾದ ಮಾಸ್ಕ್ ತಯಾರಿಸಲಾಗಿದೆ. ಈಗ 700 ಮಾಸ್ಕ್ ಹೊಲಿದಿದ್ದೇವೆ. ಮಾಸ್ಕ್ಗಳ ಬೆಲೆಯನ್ನು 25-30 ರೂ. ನಿಗದಿ ಮಾಡಲಾಗಿದೆ.
-ನಾಗರತ್ನಾ, ಭುವನೇಶ್ವರಿ ಸ್ವಸಹಾಯ ಸಂಘ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.