6 ವರ್ಷ ಬಳಿಕ ಸುವರ್ಣಾವತಿ ಜಲಾಶಯ ಭರ್ತಿ

ಸುವರ್ಣಾವತಿ ವ್ಯಾಪ್ತಿಗೊಳಪಟ್ಟ 13 ಕೆರೆಗಳಿಗೆ ನೀರು „ ಡ್ಯಾಂನಿಂದ 600 ಕ್ಯುಸೆಕ್‌ ನೀರು ನಾಲೆಗೆ ಬಿಡುಗಡೆ

Team Udayavani, Nov 15, 2021, 3:29 PM IST

ನದಿ ಭರ್ತಿ

ಚಾಮರಾಜನಗರ: ತಮಿಳುನಾಡಿನ ದಿಂಬಂ, ಸತ್ಯಮಂಗಲ, ರಾಜ್ಯದ ಬಿಆರ್‌ಟಿ ಅರಣ್ಯ ಪ್ರದೇಶದಲ್ಲಿ ಸತತ ಮಳೆ ಬೀಳುತ್ತಿರುವ ಕಾರಣ, ತಾಲೂಕಿನ ಸುವರ್ಣಾವತಿ ಜಲಾಶಯ ಭರ್ತಿಯಾಗಿದ್ದು, 600 ಕ್ಯುಸೆಕ್‌ ನೀರನ್ನು ನದಿ ಹಾಗೂ ನಾಲೆಗೆ ಬಿಡಲಾಗುತ್ತಿದೆ.

ಸುವರ್ಣಾವತಿ ಜಲಾಶಯ ಭರ್ತಿಯಾಗಲು ಕೇವಲ 5 ಇಂಚು ಬಾಕಿಯಿದ್ದ ಕಾರಣ, ಭಾನುವಾರ ಬೆಳಗಿನ ಜಾವ ನೀರು ಹೊರ ಬಿಡಲಾಯಿತು. ಮೂರು ಕ್ರೆಸ್ಟ್‌ ಗೇಟ್‌ಗಳ ಪೈಕಿ 2 ಕ್ರೆಸ್ಟ್‌ ಗೇಟ್‌ಗಳ ಮೂಲಕ 450 ಕ್ಯುಸೆಕ್‌ ನೀರನ್ನು ನದಿಗೆ, 150 ಕ್ಯುಸೆಕ್‌ ನೀರನ್ನು ನಾಲೆಗೆ ಬಿಡಲಾಗಿದೆ.

ನಾಲೆಗೆ ಬಿಡಲಾಗೀರು ಸುವರ್ಣಾವತಿ ವ್ಯಾಪ್ತಿಗೊಳಪಟ್ಟ 13 ಕೆರೆಗಳಿಗೆ ಹರಿಯುತ್ತಿದೆ. ಸುವರ್ಣಾವತಿ ಜಲಾಶಯದ ಗರಿಷ್ಠ ಮಟ್ಟ 2,455 ಅಡಿಯಿದ್ದು, ಶನಿವಾರ ರಾತ್ರಿ 2,454.5 ಅಡಿಗೆ ತಲುಪಿದ ಕಾರಣ ಭಾನುವಾರ ಬೆಳಗಿನ ಜಾವ ಗೇಟ್‌ ತೆರೆದು ನೀರು ಹರಿಸಲಾಯಿತು.

ತಮಿಳುನಾಡಿನ ದಿಂಬಂ, ಬೇಡಗುಳಿ ಸೇರಿದಂತೆ ಬಿಆರ್‌ಟಿ ಅರಣ್ಯ ಪ್ರದೇಶದಲ್ಲಿ ಉತ್ತಮ ಮಳೆಯಾದರೆ ಈ ಜಲಾಶಯಕ್ಕೆ ನೀರು ಹರಿದು ಬರುತ್ತದೆ. ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿರುವುದರಿಂದ ಒಳಹರಿವು ಹೆಚ್ಚಾಯಿತು. 5 ಇಂಚು ಬಾಕಿಯಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ನೀರು ಹರಿಸಲಾಗಿದೆ.

ಇದನ್ನೂ ಓದಿ:- ಒಳನಾಡು ಮೀನುಗಾರಿಕೆಗೆ ಜಿಲ್ಲೆ ಪರಿಸರ ಸೂಕ್ತ

ನೆರೆಯ ತಮಿಳುನಾಡು, ಬಿಆರ್‌ಟಿ ಅರಣ್ಯ ಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ ಮಳೆಯಾಗುತ್ತಿರುವುದರಿಂದ ತಾಲೂಕಿನ ಸುವರ್ಣಾವತಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ನದಿ ಹಾಗೂ ನಾಲೆಗೆ ಸುವರ್ಣಾವತಿಯಿಂದ ನೀರು ಹೊರಬಿಟ್ಟ ಹಿನ್ನೆಲೆಯಲ್ಲಿ ಭಾನುವಾರ ನೂರಾರು ಮಂದಿ ಸ್ಥಳಕ್ಕೆ ಭೇಟಿ ನೀಡಿ, ಆ ಅಪರೂಪದ ದೃಶ್ಯವನ್ನು ಕಣ್ತುಂಬಿಕೊಂಡರು. ಸುಮಾರು 6 ವರ್ಷ ಬಳಿಕ ಡ್ಯಾಂ ಭರ್ತಿಯಾಗಿದೆ. ಸುವರ್ಣಾವತಿ ಜಲಾಶಯವು 1.26 ಟಿಎಂಸಿ ನೀರು ತುಂಬುವ ಸಾಮರ್ಥ್ಯ ಹೊಂದಿದೆ.

ಸುವರ್ಣಾವತಿ, ಚಿಕ್ಕಹೊಳೆ ಅವಳಿ ಜಲಾಶಯ – ಸುವರ್ಣಾವತಿ ಜಲಾಶಯದಿಂದ ಸುಮಾರು 2 ಕಿ.ಮೀ. ದೂರದಲ್ಲಿರುವ ಚಿಕ್ಕಹೊಳೆಯ ಗರಿಷ್ಠ ಮಟ್ಟ 2,474 ಅಡಿ. ಈಗ 2,469 ಅಡಿಗಳಷ್ಟು ನೀರು ತುಂಬಿದೆ. ಇನ್ನೂ 5 ಅಡಿ ನೀರು ಹರಿದು ಬಂದರೆ ಚಿಕ್ಕಹೊಳೆ ಜಲಾಶಯವೂ ತುಂಬುತ್ತದೆ. ತಮಿಳುನಾಡಿನ ತಲಮಲೈ, ತಾಳವಾಡಿ, ಕೊಂಗಳ್ಳಿ ಬೆಟ್ಟ ಸುತ್ತಮುತ್ತಲಿನ ಪ್ರದೇಶಗಳು ಈ ಜಲಾಶಯದ ಜಲಾನಯನ ಪ್ರದೇಶಗಳಾಗಿವೆ. ಈ ಭಾಗದಲ್ಲಿ ಮಳೆಯಾಗುತ್ತಿರುವ ಕಾರಣ ಚಿಕ್ಕಹೊಳೆಗೆ ನೀರು ಹರಿದುಬರುತ್ತಿದೆ. ಭಾನುವಾರ 100 ಕ್ಯುಸೆಕ್‌ ಒಳ ಹರಿವು ಇತ್ತು. ಸುವರ್ಣಾವತಿ ಮತ್ತು ಚಿಕ್ಕಹೊಳೆ ಜಲಾಶಯಗಳನ್ನು ಅವಳಿ ಜಲಾಶಯಗಳು ಎಂದೇ ಕರೆಯಲಾಗುತ್ತದೆ. ಈ ಡ್ಯಾಂ 1.26 ಟಿಎಂಸಿ ಸಾಮಾರ್ಥ್ಯ ಹೊಂದಿದೆ.

ಟಾಪ್ ನ್ಯೂಸ್

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.