ಟಿ.ಪಿ. ಶಿವಕುಮಾರ್ ಚಾಮರಾಜನಗರ ನೂತನ ಎಸ್ಪಿ
Team Udayavani, Jan 27, 2022, 5:56 PM IST
ಚಾಮರಾಜನಗರ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಎಸ್‌ಪಿ) ಟಿ. ಪಿ. ಶಿವಕುಮಾರ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.
ಶಿವಕುಮಾರ್ ಅವರು ಬೆಂಗಳೂರಿನ ಕಾರಾಗೃಹಗಳ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಾರೆ. ಅವರನ್ನು ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಅವರ ಜಾಗಕ್ಕೆ ನಿಯುಕ್ತಗೊಳಿಸಲಾಗಿದೆ.
ದಿವ್ಯಾ ಸಾರಾ ಥಾಮಸ್ ಅವರನ್ನು ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯ ಉಪ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.