Udayavni Special

ಜಿಲ್ಲೆಯಲ್ಲಿ ಸರ್ಕಾರಿ ಸೇವೆಗಳು ಸ್ಥಗಿತ

Team Udayavani, Mar 22, 2020, 3:27 PM IST

ಜಿಲ್ಲೆಯಲ್ಲಿ ಸರ್ಕಾರಿ ಸೇವೆಗಳು ಸ್ಥಗಿತ

ಚಾಮರಾಜನಗರ: ಕೋವಿಡ್ 19 ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಈಗಾಗಲೇ ಜಾರಿಗೊಳಿಸಿದೆ. ಏಕಕಾಲದಲ್ಲಿ ಸಾರ್ವಜನಿಕರು ಒಟ್ಟಿಗೆ ಸೇರುವ ಸಂದರ್ಭ ತಪ್ಪಿಸಲು ಹಲವು ಸರ್ಕಾರಿ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಡೀಸಿ ಡಾ.ಎಂ.ಆರ್‌. ರವಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಡೀಸಿ, ಸಾರ್ವಜನಿಕರು ಸರ್ಕಾರದ ವಿವಿಧ ಸೇವೆ ಪಡೆಯುವ ಉದ್ದೇಶದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮಮಟ್ಟದ ಕಚೇರಿಗಳಿಗೆ ಭೇಟಿ ನೀಡುತ್ತಾರೆ. ಇದನ್ನು ತಪ್ಪಿಸಲು ಮುಂದಿನ ಆದೇಶದವರೆಗೆ ವಿವಿಧ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಆದೇಶಿಸಲಾಗಿದೆ. ಕಂದಾಯ ಇಲಾಖೆಯ ವಿವಿಧ ಸೇವೆ ಕಲ್ಪಿಸುವ ಅಟಲ್‌ಜೀ, ಸೇವಾ ಸಿಂಧು, ಜನಸ್ನೇಹಿ ಕೇಂದ್ರ, ಸ್ಪಂದನ, ಆಧಾರ್‌ ಕೇಂದ್ರ, ಬ್ಯಾಂಕ್‌, ಅಂಚೆ ಕಚೇರಿ, ಇತರೆ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ನೀಡುವ ಸೇವೆಗಳು ಸ್ಥಗಿತಗೊಳಿಸಲಾಗಿದೆ. ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ನೀಡುವ ಚಾಲನಾ ಪರವಾನಗಿ, ಕಲಿಯುವವರ ಪರವಾನಗಿ, ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಸ್ಥಿರ ಆಸ್ತಿ ನೋಂದಣಿ ಸೇವೆ ಸ್ಥಗಿತವಾಗಲಿವೆ ಎಂದರು.

ತುರ್ತು ಸೇವೆಗೆ ನಿರ್ಬಂಧವಿಲ್ಲ: ತುರ್ತು ಹಾಗೂ ನಿತ್ಯದ ಸೇವೆಗಳಾದ ಬ್ಯಾಂಕ್‌, ಅಂಚೆ ಕಚೇರಿ, ಕೆಎಸ್‌ಆರ್‌ಟಿಸಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸೇವೆಗಳು, ಸ್ವಚ್ಛತಾ ಕಾರ್ಯಗಳು, ನೀರು, ವಿದ್ಯುತ್‌ ಪೂರೈಕೆ, ಒಳಚರಂಡಿ ವ್ಯವಸ್ಥೆಗಳು, ಆಸ್ಪತ್ರೆ ಸೇವೆಗಳು, ಪಶು ಆಸ್ಪತ್ರೆಗಳು, ಔಷಧಿ ಅಂಗಡಿಗಳು, ಶವ ಸಂಸ್ಕಾರ, ತುರ್ತು ಸೇವೆಗಳು ನಿರ್ಬಂಧಿತ ಆದೇಶಗಳಿಗೆ ಅನ್ವಯವಾಗುವುದಿಲ್ಲ. ಹಲವು ಸೇವೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದ್ದರೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಿಲ್ಲ. ಎಲ್ಲಾ ಅಧಿಕಾರಿ, ಸಿಬ್ಬಂದಿ ಎಂದಿನಂತೆ ಕಚೇರಿಯಲ್ಲಿ ಲಭ್ಯವಿರಬೇಕು. ಸರ್ಕಾರಿ ಕಚೇರಿಗಳಿಗೆ ಅಥವಾ ಧಾರ್ಮಿಕ ಕೇಂದ್ರಗಳಿಗೆ ಸಾರ್ವಜನಿಕರು ಭೇಟಿ ನೀಡುವುದನ್ನು ಸಾಧ್ಯವಾದಷ್ಟು ಮಟ್ಟಿಗೆ ತಡೆಯುವುದು ನಮ್ಮ ಉದ್ದೇಶ. ಮೇಲ್ಕಂಡ ಸೇವೆಗಳಲ್ಲಿ ಸರ್ಕಾರ ಹಾಗೂ ನ್ಯಾಯಾಲಯಗಳಿಗೆ ಸಂಬಂಧಿಸಿದ ಪ್ರಕರಣಗಳು ಮತ್ತು ತುರ್ತು ಪ್ರಕರಣಗಳಿಗೆ ವಿನಾಯಿತಿ ನೀಡಲಾಗಿದೆ. ಆದೇಶ ಪಾಲಿಸದೇ ಇರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೋವಿಡ್ 19 ಮಣಿಸಲು ಸಾಮಾಜಿಕ ಅಂತರ & ಲಾಕ್ ಡೌನ್ ಅತೀ ದೊಡ್ಡ ಲಸಿಕೆ: ಸಚಿವ ಹರ್ಷವರ್ಧನ್

ಕೋವಿಡ್ 19 ಮಣಿಸಲು ಸಾಮಾಜಿಕ ಅಂತರ & ಲಾಕ್ ಡೌನ್ ಅತೀ ದೊಡ್ಡ ಲಸಿಕೆ: ಸಚಿವ ಹರ್ಷವರ್ಧನ್

ರಾಜ್ಯದ ಗಡಿ ದಾಟಿ ತಮಿಳುನಾಡು ಪೊಲೀಸರು ಚೆಕಿಂಗ್ ಕಾರ್ಯಾಚರಣೆಗೆ ಬೊಮ್ಮಾಯಿ ಗರಂ

ರಾಜ್ಯದ ಗಡಿ ದಾಟಿ ತಮಿಳುನಾಡು ಪೊಲೀಸರ ಚೆಕಿಂಗ್ ಕಾರ್ಯಾಚರಣೆಗೆ ಬೊಮ್ಮಾಯಿ ಗರಂ

ಭಾರತದ ಈ ಎರಡು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳತ್ತ ಮಾತ್ರ ಕೋವಿಡ್ ವೈರಸ್ ಸುಳಿದಿಲ್ಲ

ಭಾರತದ ಈ ಎರಡು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳತ್ತ ಮಾತ್ರ ಕೋವಿಡ್ ವೈರಸ್ ಸುಳಿದಿಲ್ಲ!

ನಕಲಿ ಪಾಸ್‌ ಮಾಡಿದವರ ವಿರುದ್ಧ ಕ್ರಮ: ಬಸವರಾಜ ಬೊಮ್ಮಾಯಿ

ನಕಲಿ ಪಾಸ್‌ ಮಾಡಿದವರ ವಿರುದ್ಧ ಕ್ರಮ: ಬಸವರಾಜ ಬೊಮ್ಮಾಯಿ

ಫೋರ್ಬ್ಸ್ ಪಟ್ಟಿಯಲ್ಲಿ ಅಂಬಾನಿ, ದಮನಿ

ಫೋರ್ಬ್ಸ್ ಪಟ್ಟಿಯಲ್ಲಿ ಅಂಬಾನಿ, ದಮನಿ

24ಗಂಟೆಯಲ್ಲಿ 549 ಕೋವಿಡ್ ಪ್ರಕರಣ ಪತ್ತೆ, 49 ಸಾವಿರ ವೆಂಟಿಲೇಟರ್ಸ್ ಗೆ ಬೇಡಿಕೆ

24ಗಂಟೆಯಲ್ಲಿ 549 ಕೋವಿಡ್ ಪ್ರಕರಣ ಪತ್ತೆ, 49 ಸಾವಿರ ವೆಂಟಿಲೇಟರ್ಸ್ ಗೆ ಬೇಡಿಕೆ: ಸಚಿವಾಲಯ

ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ನೀಡಲಿ:ಸಿದ್ದರಾಮಯ್ಯ

ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ನೀಡಲಿ:ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾರಾಷ್ಟ್ರದ ಕಾರ್ಮಿಕರಿಗೆ ಆಹಾರ ಪದಾರ್ಥ ವಿತರಣೆ

ಮಹಾರಾಷ್ಟ್ರದ ಕಾರ್ಮಿಕರಿಗೆ ಆಹಾರ ಪದಾರ್ಥ ವಿತರಣೆ

ಜನಜೀವನಕ್ಕೆ ಸಮಸ್ಯೆ ಆಗಬಾರದು

ಜನಜೀವನಕ್ಕೆ ಸಮಸ್ಯೆ ಆಗಬಾರದು

ಆದೇಶ ಕಟ್ಟುನಿಟ್ಟಾಗಿ ಪಾಲಿಸಿ

ಆದೇಶ ಕಟ್ಟುನಿಟ್ಟಾಗಿ ಪಾಲಿಸಿ

mandya-tdy-1

ಕೋವಿಡ್ 19 : ಗ್ರಾಮಗಳಿಗೆ ದಿಗ್ಬಂಧನ

ಅರಿವು ಮೂಡಿಸಲು ವಾಕ್‌ ಥಾನ್‌

ಅರಿವು ಮೂಡಿಸಲು ವಾಕ್‌ ಥಾನ್‌

MUST WATCH

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

ಹೊಸ ಸೇರ್ಪಡೆ

ಕೋವಿಡ್ 19 ಮಣಿಸಲು ಸಾಮಾಜಿಕ ಅಂತರ & ಲಾಕ್ ಡೌನ್ ಅತೀ ದೊಡ್ಡ ಲಸಿಕೆ: ಸಚಿವ ಹರ್ಷವರ್ಧನ್

ಕೋವಿಡ್ 19 ಮಣಿಸಲು ಸಾಮಾಜಿಕ ಅಂತರ & ಲಾಕ್ ಡೌನ್ ಅತೀ ದೊಡ್ಡ ಲಸಿಕೆ: ಸಚಿವ ಹರ್ಷವರ್ಧನ್

ರಾಜ್ಯದ ಗಡಿ ದಾಟಿ ತಮಿಳುನಾಡು ಪೊಲೀಸರು ಚೆಕಿಂಗ್ ಕಾರ್ಯಾಚರಣೆಗೆ ಬೊಮ್ಮಾಯಿ ಗರಂ

ರಾಜ್ಯದ ಗಡಿ ದಾಟಿ ತಮಿಳುನಾಡು ಪೊಲೀಸರ ಚೆಕಿಂಗ್ ಕಾರ್ಯಾಚರಣೆಗೆ ಬೊಮ್ಮಾಯಿ ಗರಂ

ಮಹಾರಾಷ್ಟ್ರ: ಎಲ್ಲಾ ಶಾಸಕರು, ಸಚಿವರ ಸಂಬಳದಲ್ಲಿ ಶೇ.30ರಷ್ಟು ಕಡಿತ: ಸಂಪುಟ ಒಪ್ಪಿಗೆ