ಕೊಂಗಳ ಕೆರೆಗೆ ಒತ್ತುವರಿದಾರರ ವಕ್ರದೃಷ್ಟಿ

Team Udayavani, Apr 28, 2019, 3:00 AM IST

kongala

ಕೊಳ್ಳೇಗಾಲ: ನಗರದ ಹೃದಯ ಭಾಗದಲ್ಲಿರುವ ಕಾವೇರಿ ಮತ್ತು ಕಬಿನಿ ನಾಲಾ ನಿಗಮಕ್ಕೆ ಸೇರಿದ ಬೃಹತ್‌ ಕೊಂಗಳಕೆರೆ ಒತ್ತುವರಿಗೆ ಸಿಲುಕಿ ಅಭಿವೃದ್ಧಿ ಇಲ್ಲದೆ ಅನಾಥವಾಗಿದ್ದು, ನಗರದ ಎಲ್ಲಾ ಕೊಳಚೆ ನೀರು ಶೇಖರಣೆಗೊಂಡು ಗಿಡ-ಗಂಟಿಗಳೊಂದಿಗೆ ಕೊಳೆತು ಗಬ್ಬುನಾರುತ್ತಿದೆ.

ಕಾವೇರಿ ಮತ್ತು ಕಬಿನಿ ನಾಲಾ ನಿಗಮಕ್ಕೆ ಸೇರಿದ ಕೊಂಗಳಕೆರೆ ಸುಮಾರು 75 ಎಕರೆ ಪ್ರದೇಶದಷ್ಟು ಬೃಹತ್ತಾದ ಕೆರೆಯಲ್ಲಿ ಆಳೆತ್ತರಕ್ಕೆ ಗಿಡ-ಗಂಟಿಗಳು ಬೆಳೆದು ನಿಂತಿವೆ. ನಗರದ ವಿವಿಧ ಬಡಾವಣೆಗಳಲ್ಲಿ ಬಳಸಿ ಹೊರ ಬಿಡುವ ಕೊಳಚೆ ನೀರು ಒಳಚರಂಡಿ ಹಾಗೂ ಚರಂಡಿ ಕೊಳಚೆಯ ನೀರು ಕೆರೆಗೆ ಹರಿದು ಹೋಗುತ್ತಿದೆ.

ಹೀಗಾಗಿ ಕೆರೆಯಲ್ಲಿ ಸಂಪೂರ್ಣ ಶೇಖರಣೆಗೊಂಡು ಗಬ್ಬುನಾರುತ್ತಿದ್ದು, ಬೇರೆಡೆಗಳಿಂದ ನಗರಕ್ಕೆ ಆಗಮಿಸುವ ಪ್ರಯಾಣಿಕರಿಗೆ ಗಬ್ಬು ವಾಸನೆ ಸ್ವಾಗತ ಕೋರುತ್ತದೆ.

ಅನೈರ್ಮಲ್ಯ: ಬೃಹತ್ತಾದ ಕೆರೆಗೆ ಒಳಚರಂಡಿ ಮತ್ತು ಚರಂಡಿ ಕೊಳಚೆ ನೀರು ಹರಿದು ಬಂದು ಸೇರುತ್ತಿದೆ. ಘನತ್ಯಾಜ್ಯ ಕೆರೆ ಸೇರುತ್ತಿದೆ. ಇದರಿಂದ ಗಿಡ-ಗಂಟಿಗಳು ಹೆಚ್ಚಾಗಿ ಬೆಳೆದು ನಿಂತು ಕೊಳಚೆ ನೀರಿನಿಂದ ಕೊಳೆತ ಸಸಿಗಳು ದುವಾರ್ಸನೆಯಿಂದ ಕೂಡಿದ್ದು, ಕೆರೆಯಲ್ಲಿ ಕ್ರಿಮಿಕೀಟಗಳ ಬಾಧೆ ಹೆಚ್ಚಾಗಿದೆ.

ಅಕ್ರಮ ಒತ್ತುವರಿ: ನಗರದ ಬಸ್‌ ನಿಲ್ದಾಣದ ಬಳಿ ಇರುವ ಬೃಹತ್‌ ಕೊಂಗಳಕೆರೆ ಹಲವಾರು ಸಾರ್ವಜನಿಕರು ಮತ್ತು ಇನ್ನಿತರ ಸಂಘ-ಸಂಸ್ಥೆಗಳು ಅಕ್ರಮ ಒತ್ತುವರಿ ಮಾಡಿಕೊಂಡು ಭಾರೀ ಗಾತ್ರದ ಮನೆಗಳು, ಅಂಗಡಿಗಳು ಮತ್ತು ಲಾಡ್ಜ್ಗಳು ಇನ್ನಿತರ ಅಂಗಡಿಗಳನ್ನು ನಿರ್ಮಿಸಿಕೊಂಡಿದ್ದಾರೆ. ಆದರೆ, ಅಧಿಕಾರಿಗಳು ಕಣ್ಣಿದ್ದು, ಕುರುಡರಂತೆ ಅಕ್ರಮ ಒತ್ತುವರಿ ತೆರವು ಮಾಡಲಾರದೆ ಕೈಚೆಲ್ಲಿರುವುದು ಅಕ್ರಮ ಒತ್ತುವರಿಗೆ ಪುಷ್ಟಿ ನೀಡಿದಂತೆ ಆಗಿದೆ.

ಸರ್ವೆ ಇಲಾಖೆ: ಕೆರೆಯನ್ನು ಅಳತೆ ಮಾಡಿದ ಸರ್ವೆ ಇಲಾಖೆ ಅಧಿಕಾರಿಗಳು ಸುಮಾರು 11 ಎಕರೆಯಷ್ಟು ಪ್ರದೇಶ ಸ್ಮಶಾನಗಳಿಗೆ ಮತ್ತು ಉಳಿದಂತೆ ದಿನನಿತ್ಯ ಅಕ್ರಮ ಒತ್ತುವರಿ ದಂಧೆ ಹೆಚ್ಚಾಗಿಯೇ ನಡೆಯುತ್ತಿದೆ ಎಂದು ಸರ್ವೆ ಇಲಾಖೆಯಲ್ಲಿ ದೂರು ದಾಖಲಾಗಿದೆ.

ಕಳೆದ 8 ವರ್ಷಗಳ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಹರ್ಷಗುಪ್ತ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಧುಕರ್‌ ಶೆಟ್ಟಿ ಅವರ ಅವಧಿಯಲ್ಲಿ ಅಕ್ರಮ ಒತ್ತುವರಿ ತೆರವು ಮಾಡುವಂತೆ ಸರ್ವೆ ಇಲಾಖೆ ವತಿಯಿಂದ ಸಂಪೂರ್ಣ ಸರ್ವೆ ಕಾರ್ಯ ನಡೆಸಿ ಕೆರೆ ಎಲ್ಲೆ ಗುರುತು ಮಾಡಿದರೂ ಕೆಲವರು ಎಲ್ಲೆ ಮೀರಿ ಅಕ್ರಮ ಒತ್ತುವರಿಗೆ ಮುಂದಾಗಿದ್ದಾರೆ.

ನೀಲಿನಕ್ಷೆ: ಕಳೆದ 2004ರಲ್ಲಿ ಕ್ಷೇತ್ರದ ಶಾಸಕರಾಗಿದ್ದ ಎಸ್‌.ಬಾಲರಾಜ್‌ ಅವರು ಕೊಂಗರಕೆರೆ ಅಭಿವೃದ್ಧಿ ಮಾಡುವ ಸಲುವಾಗಿ ಬೃಹತ್ತಾದ ಕೆರೆಯ ಸ್ಥಳದಲ್ಲಿ ಬಸ್‌ ನಿಲ್ದಾಣ, ಸ್ವಿಮ್ಮಿಂಗ್‌ಪೂಲ್‌, ವಾಕಿಂಗ್‌ ಪಾರ್ಕ್‌, ಸರ್ಕಾರಿ ನೌಕರರ ವಸತಿ ಗೃಹ, ವಾಣಿಜ್ಯ ಸಂಕೀರ್ಣ ಸೇರಿದಂತೆ ವಿವಿಧ ಅಭಿವೃದ್ಧಿಗೆ ನೀಲಿನಕ್ಷೆಯೊಂದನ್ನು ತಯಾರಿಸಿ ಅಭಿವೃದ್ಧಿಗೆ ಮುಂದಾಗುತ್ತಿದ್ದಂತೆ, ಸರ್ವೋಚ್ಚ ನ್ಯಾಯಾಲಯ ಯಾವುದೇ ಕೆರೆ, ಕಟ್ಟೆ, ಗೋಮಾಳ ಒತ್ತುವರಿ ಮಾಡಬಾರದು ಮತ್ತು ಅಂತರ್ಜಲ ಹೆಚ್ಚಿಸಬೇಕೆಂದು ಮಹತ್ವದ ಆದೇಶವೊಂದನ್ನು ಪ್ರಕಟಿಸುತ್ತಿದ್ದಂತೆ ಕೆರೆ ಅಭಿವೃದ್ಧಿ ಕುಂಠಿತವಾಯಿತು.

ಕಳೆದ 2010ರಲ್ಲಿ ಕೊಳ್ಳೇಗಾಲ ವಿಧಾನಸಭೆಗೆ ನಡೆದ ಉಪ ಚುನಾವಣೆಯಲ್ಲಿ ಜಿ.ಎನ್‌.ನಂಜುಂಡಸ್ವಾಮಿ ಆಯ್ಕೆಗೊಂಡು ಕೆರೆಯ ಅಭಿವೃದ್ಧಿಗೆ ಪ್ರಯತ್ನಿಸಿದರೂ ನ್ಯಾಯಾಲಯದ ಆದೇಶದಿಂದ ಶಾಸಕರು ಅಭಿವೃದ್ಧಿ ಮಾಡದೆ ಹಿಂಜರಿದ ಕಾರಣ ಕೆರೆ ಅಭಿವೃದ್ಧಿಗೆ ಮರೀಚಿಕೆಯಾಯಿತು.

ನೀರು: ಬೃಹತ್ತಾದ ಕೆರೆಗೆ ಕಬಿನಿ ನಾಲೆಯಿಂದ ನೀರು ಹರಿದು ಬಂದು ಕೆರೆಯಲ್ಲಿ ಶೇಖರಣೆಗೊಂಡು ಮುಡಿಗುಂಡ, ಹಂಪಾಪುರ, ಮೋಳೆ, ಅಣಗಳ್ಳಿ ಸೇರಿ ಹಲವಾರು ಗ್ರಾಮಗಳಲ್ಲಿರುವ ಸಾವಿರಾರು ಎಕರೆ ಜಮೀನುಗಳಿಗೆ ಈ ಕೆರೆಯಿಂದಲೇ ನೀರು ಪೂರೈಕೆಯಾಗುತ್ತಿತ್ತು. ಕೆರೆಯಲ್ಲಿ ಹೂಳೆತ್ತದೆ ನನೆಗುದಿಗೆ ಬಿದ್ದಿರುವುದರಿಂದ ಮಳೆಗಾಲದಲ್ಲಿ ಹೆಚ್ಚು ನೀರು ಶೇಖರಣೆಯಾಗಲು ತೊಂದರೆಯಾಗಿದೆ. ರೈತರಿಗೆ ಈ ಹಿಂದೆ ಸಿಗುತ್ತಿದ್ದಷ್ಟು ನೀರು ಕೆರೆಯಿಂದ ಲಭ್ಯವಿಲ್ಲದೆ ರೈತರು ಹಲವಾರು ಬೆಳೆ ಬೆಳೆಯಲು ಹೋಗಿ ಕೈಸುಟ್ಟಿ ಕೊಂಡ ಹಲವಾರು ನಿದರ್ಶನಗಳಿವೆ.

7 ಕೋಟಿ ರೂ.ಗೆ ಪ್ರಸ್ತಾವನೆ: ಕೊಳ್ಳೇಗಾಲ ನಗರದ ಕೊಂಗಳಕೆರೆ, ತಟ್ಟೆಕೆರೆ, ಚಿಕ್ಕರಂಗನಾಥಕೆರೆ ಹೂಳೆತ್ತಿ ಅಭಿವೃದ್ಧಿ ಮಾಡಲು ಸುಮಾರು 7 ಕೋಟಿ ರೂ. ಅಂದಾಜಿನಲ್ಲಿ ಪ್ರಸ್ತಾವನೆಯನ್ನು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ರಿಗೆ ಸಲ್ಲಿಸಲಾಗಿದೆ. ಅನುದಾನ ಮಂಜೂರಾಗುತ್ತಿದ್ದಂತೆ ಅಭಿವೃದ್ಧಿಗೆ ಚಾಲನೆ ನೀಡಲಾಗುವುದೆಂದು ಶಾಸಕ ಎನ್‌.ಮಹೇಶ್‌ ಪ್ರತಿಕ್ರಿಯಿಸಿದ್ದಾರೆ.

ಕೊಂಗರಕೆರೆ, ಮುಡಿಗುಂಡ ಕೆರೆ, ಚಿಕ್ಕರಂಗನಾಥಕೆರೆ ಹೂಳೆತ್ತಿ ಅಭಿವೃದ್ಧಿ ಮಾಡುವ ಸಲುವಾಗಿ ಸುಮಾರು 2ಕೋಟಿ ರೂ. ಅಂದಾಜಿನಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರ ಮಂಜೂರಾತಿ ನೀಡುತ್ತಿದ್ದಂತೆ ಡಿಪಿಆರ್‌ ಮಾಡಿ ಅಭಿವೃದ್ಧಿ ಮಾಡಲಾಗುವುದು.
-ರಘು, ಕಾವೇರಿ ಮತ್ತು ಕಬಿನಿ ನಾಲಾ ವಿಭಾಗ ನಿಗಮದ ಕಾರ್ಯಪಾಲಕ ಅಭಿಯಂತರ

ಪಟ್ಟಭದ್ರ ಹಿತಾಸಕ್ತಿಗಳು ಮತ್ತು ರಾಜಕಾರಣಿಗಳ ಬೆಂಬಲಿಗರು ಅಕ್ರಮ ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿ ತೆರವಿಗೆ ಮುಂದಾಗಿದ್ದ ಜಿಲ್ಲಾಧಿಕಾರಿ ಹರ್ಷಗುಪ್ತ ಅವರನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಿಸಿದ್ದರು. ಅಧಿಕಾರಿಗಳು ಕೂಡಲೇ ಅಕ್ರಮ ಒತ್ತುವರಿ ತೆರವು ಮಾಡಬೇಕಿದೆ.
-ನಟರಾಜ, ತಾಲೂಕು ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ

* ಡಿ.ನಟರಾಜು

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.