ಮಲಗು ಕಂದ ಜೋಗುಳ ಗೀತೆ ಮೆಚ್ಚಿದ ಮೋದಿ

ಮನ್‌ ಕಿ ಬಾತ್‌ನಲ್ಲಿ ಚಾಮರಾಜನಗರದ ಮಂಜುನಾಥ್‌ ಹೆಸರು ಪ್ರಸ್ತಾಪಿಸಿ ಪ್ರಶಂಸಿಸಿದ ಪ್ರಧಾನ ಮಂತ್ರಿ

Team Udayavani, Feb 27, 2023, 12:30 PM IST

TDY-9

ಚಾಮರಾಜನಗರ: ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯ ರಾಷ್ಟ್ರಮಟ್ಟದಲ್ಲಿ ನಡೆಸಿದ ಪೆನ್‌ ಎ ಲೋರಿ (ಜೋಗುಳ ಗೀತೆ ರಚನೆ) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಜಿಲ್ಲೆಯ ಬಿ.ಎಂ. ಮಂಜುನಾಥ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ಮನ್‌ ಕಿ ಬಾತ್‌ನಲ್ಲಿ ಪ್ರಶಂಸಿಸಿದ್ದಾರೆ.

ಭಾನುವಾರ ನಡೆದ ಮನ್‌ ಕಿ ಬಾತ್‌ ನಲ್ಲಿ, ಈ ವಿಷಯವನ್ನು ಪ್ರಸ್ತಾಪಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು, ಜೋಗುಳ ಗೀತೆ ಸ್ಪರ್ಧೆಯಲ್ಲಿ ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಬಿ.ಎಂ. ಮಂಜುನಾಥ ಪ್ರಥಮ ಬಹುಮಾನ ಪಡೆದಿದ್ದಾರೆ. ಕನ್ನಡದಲ್ಲಿ ಅವರ ಬರೆದ ಮಲಗು ಕಂದ ಕವಿತೆಗೆ ದೊರಕಿದೆ. ಈ ಜೋಗುಳ ಗೀತೆಗೆ ಅವರ ತಾಯಿ, ಅಜ್ಜಿ ಹಾಡುತ್ತಿದ್ದ ಜೋಗುಳಗಳೇ ಸ್ಫೂರ್ತಿಯಾಗಿವೆ. ಇದನ್ನು ಕೇಳಿದರೆ ನಿಮಗೂ ಆನಂದವಾಗುತ್ತದೆ ಎಂದು ಮೋದಿ ಹೇಳಿ ದ್ದಾರೆ.

ಬಳಿಕ ಈ ಜೋಗುಳದ ನಾಲ್ಕು ಸಾಲುಗಳನ್ನು ಕೇಳಿಸಲಾಗುತ್ತದೆ. 2022ರ ಫೆಬ್ರವರಿಯಲ್ಲಿ ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ರಂಗೋಲಿ ಸ್ಪರ್ಧೆ, ದೇಶಭಕ್ತಿ ಗೀತೆ ಹಾಗೂ ಜೋಗುಳ ಗೀತ ರಚನೆ ಸ್ಪರ್ಧೆಗಳನ್ನು amritmahotsav.nic.in ಆನ್‌ ಲೈನ್‌ ಪೋರ್ಟಲ್‌ ಮೂಲಕ ಆಹ್ವಾನಿಸಲಾಗಿತ್ತು. ಮಂಜುನಾಥ್‌ ಅವರು ಮಲಗು ಕಂದ ಶೀರ್ಷಿಕೆಯ ಜೋಗುಳ ಗೀತೆಯನ್ನು ರಚಿಸಿ ಆನ್‌ ಲೈನ್‌ ಮೂಲಕ ಕಳುಹಿಸಿಕೊಟ್ಟಿದ್ದರು. ಸ್ಪರ್ಧೆ ಮೂರು ಹಂತದಲ್ಲಿ ನಡೆದಿತ್ತು. ಮೊದಲಿಗೆ ಜಿಲ್ಲಾ ಮಟ್ಟದಲ್ಲಿ ಆಯ್ಕೆ ಯಾದ ಮೂವರನ್ನು ರಾಜ್ಯ ಮಟ್ಟಕ್ಕೆ, ರಾಜ್ಯ ಮಟ್ಟದಲ್ಲಿ ಆಯ್ಕೆಯಾದ ಮೂವರನ್ನು ರಾಷ್ಟ್ರಮಟ್ಟಕ್ಕೆ ಆಯ್ಕೆ ಮಾಡಲಾಗಿತ್ತು. ಜಿಲ್ಲಾ ಮಟ್ಟದಲ್ಲಿ ಎಸ್‌. ಚನ್ನಬಸಪ್ಪ ಎಂಬುವರು ಪ್ರಥಮ, ಬಿ.ಎಂ. ಮಂಜುನಾಥ್‌ ದ್ವಿತೀಯ ಹಾಗೂ ವಿ.ಎನ್‌. ಪುನೀತ್‌ ಕುಮಾರ್‌ ತೃತೀಯ ಸ್ಥಾನ ಪಡೆದಿದ್ದರು.

ಕರ್ನಾಟಕ ರಾಜ್ಯ ಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಬಿ.ಎಂ. ಮಂಜುನಾಥ್‌ ಪ್ರಥಮ, ದಿಶಾ ಎಸ್‌ ನಾಯರ್‌ ದ್ವಿತೀಯ ಹಾಗೂ ಎಸ್‌. ಸರಸ್ವತಿ ಸ್ಥಾನ ಪಡೆದು ಆಯ್ಕೆಯಾಗಿದ್ದರು. ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಬಿ.ಎಂ. ಮಂಜುನಾಥ್‌ ಪ್ರಥಮ, ಅಸ್ಸಾಮ್‌ ನ ದಿನೇಶ್‌ ಗೋವಾಲ ದ್ವಿತೀಯ, ದಾದ್ರಾ ನಗರ ಹವೇಲಿಯ ಶೀತಲ್‌ ರಮೇಶ್‌ ತೃತೀಯ, ಒಡಿಸ್ಸಾದ ಶಿಶಿರಕುಮಾರ್‌ ನಾಲ್ಕನೇ ಹಾಗೂ ಮಣಿಪುರದ ತಿಂಗುಜಮ್‌ ಡಯಾನ ಐದನೇ ಸ್ಥಾನ ಪಡೆದಿದ್ದರು. ಇದರಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದವರಿಗೆ 6 ಲಕ್ಷ ರೂ., ನಂತರದ ವಿಜೇತರಿಗೆ 5, 4, 3, 2 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ.

ನನ್ನ ಜೀವನದ ಅವಿಸ್ಮರಣೀಯ ಕ್ಷಣ ಅದು : ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಬಾಳಗುಣಸೆ ಗ್ರಾಮದ ಬಿ.ಎಂ.ಮಂಜುನಾಥ್‌ ಅವರು ಮನ್‌ ಕಿ ಬಾತ್‌ ನಲ್ಲಿ ಪ್ರಧಾನಿಯವರು ತಮ್ಮ ಹೆಸರು ಪ್ರಸ್ತಾಪಿಸಿದ ಬಗ್ಗೆ ಉದಯವಾಣಿಯೊಂದಿಗೆ ಮಾತನಾಡಿ, ನನ್ನ ಜೀವನದ ಅವಿಸ್ಮರಣೀಯ ಕ್ಷಣ ಅದು. ಮಂಟೇಸ್ವಾಮಿ ನೆಲದಲ್ಲಿ ಹುಟ್ಟಿದ್ದಕ್ಕೆ ಸಾರ್ಥಕ ಅನಿಸಿತು ಎಂದರು. ಇಷ್ಟು ದೊಡ್ಡ ಮಟ್ಟದ ನಗದು ಬಹುಮಾನಕ್ಕೆ ಆಯ್ಕೆಯಾಗುತ್ತೇನೆ ಎಂದುಕೊಂಡಿರಲಿಲ್ಲ. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಬಹುದು ಎಂದು ಕೊಂಡಿದ್ದೆ. ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ, ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆ ಎನಿಸಿದೆ ಎಂದರು.

ಇನ್ನೂ ಬಹುಮಾನ ನೀಡುವ ಕಾರ್ಯಕ್ರಮ ನಿಗದಿಯಾಗಿಲ್ಲ. ಆ ಬಗ್ಗೆ ಇನ್ನೂ ಮಾಹಿತಿ ಬಂದಿಲ್ಲ ಎಂದು ತಿಳಿಸಿದರು. ಬಾಳಗುಣಸೆ ಮಂಜುನಾಥ್‌ ಅವರು ಚಿತ್ತ ಚಿತ್ತಾರದ ಹೂವು ಎಂಬ ಕವನ ಸಂಕಲನ ಹಾಗೂ ಶಾಪ ಎಂಬ ನಾಟಕದ ಪುಸ್ತಕಗಳನ್ನು ಹೊರತಂದಿದ್ದಾರೆ. ಇನ್ನೆರಡು ಕೃತಿಗಳು ಅಚ್ಚಿನ ಹಂತದಲ್ಲಿವೆ. ಪ್ರಸ್ತುತ ಕೊಳ್ಳೇಗಾಲದಲ್ಲಿ ಜೀವ ವಿಮಾ ಪ್ರತಿನಿಧಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

-ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.