ಬಂಡೀಪುರ : ಹುಲಿಗಳ ಕಾದಾಟದಲ್ಲಿ ಗಂಡು ಹುಲಿ ಸಾವು
Team Udayavani, Apr 10, 2022, 6:16 PM IST
ಗುಂಡ್ಲುಪೇಟೆ(ಚಾಮರಾಜನಗರ) : ಸುಮಾರು 6ರಿಂದ 7 ವರ್ಷದ ಗಂಡು ಹುಲಿ ಮತ್ತೊಂದು ಹುಲಿಯ ಜೊತೆ ಕಾದಾಟ ನಡೆಸಿ ಸಾವನ್ನಪ್ಪಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವನ್ಯಜೀವಿ ವಲಯದ ಕುರುಬರಹುಂಡಿ ಶಾಖೆ-2, ಬರಗಿ ಗಸ್ತಿನ ಆರದೇವನಕಟ್ಟೆ ಅರಣ್ಯ ಪ್ರದೇಶದ ಬಳಿ ನಡೆದಿದೆ.
ಬರಗಿ ಗಸ್ತಿನ ಆರದೇವನಕಟ್ಟೆ ಅರಣ್ಯ ಪ್ರದೇಶದ ಬಳಿ ಅರಣ್ಯ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಹುಲಿಯ ಮೃತ ದೇಹ ಪತ್ತೆಯಾಗಿದೆ. ಮೃತ ಹುಲಿಯ ಎಲ್ಲಾ ಉಗುರುಗಳು, ಹಲ್ಲುಗಳು ಹಾಗೂ ಇತರೆ ಅಂಗಾಗಗಳು ಸುರಕ್ಷಿತವಾಗಿದೆ. ಸ್ಥಳಕ್ಕೆ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ. ಪರಮೇಶ್, ಇಲಾಖೆಯ ಪಶು ವೈದ್ಯಾಧಿಕಾರಿ ಡಾ. ವಾಸೀಂ ಮಿರ್ಜಾ, ಗೌರವಾನ್ವಿತ ವನ್ಯಜೀವಿ ಪರಿಪಾಲಕ ಎಂ.ಕೆ.ನಂಜುಂಡೇರಾಜೇ ಅರಸ್, ಆರ್. ರಘುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅರಣ್ಯ ಇಲಾಖೆ ಪಶು ವೈದ್ಯಾಧಿಕಾರಿ ಡಾ.ವಾಸೀಂ ಮಿರ್ಜಾ ಅವರಿಂದ ಹುಲಿಯ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿ ನಂತರ ದೇಹವನ್ನು ಸುಡಲಾಯಿತು.
ಇದನ್ನೂ ಓದಿ : ರೈತರ ಆದಾಯ ದ್ವಿಗುಣಗೊಳಿಸಲು ಕೇಂದ್ರ ಸರಕಾರದ ನೂರಾರು ಯೋಜನೆ- ಈರಣ್ಣ ಕಡಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…