ಬಂಡೀಪುರ ಹೆಬ್ಬಾಗಿಲಿನಲ್ಲಿ ನಿಂತ ಐರಾವತ: ಎರಡು ಗಂಟೆಗೆ ಹೆಚ್ಚು ಟ್ರಾಫಿಕ್ ಜಾಮ್
Team Udayavani, Nov 27, 2020, 2:51 PM IST
ಗುಂಡ್ಲುಪೇಟೆ (ಚಾಮರಾಜನಗರ): ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಹೆಬ್ಬಾಗಿಲಿನಲ್ಲಿ ಗೇಟ್ ಗೆ ಅಳವಡಿಸಲಾಗಿದ್ದ ಕಬ್ಬಿಣದ ಪಟ್ಟಿ ಐರಾವತ ಬಸ್ ನ ಆಕ್ಸಲ್ ಗೆ ಸಿಕ್ಕಿಹಾಕಿಕೊಂಡ ಪರಿಣಾಮ ಎರಡು ಗಂಟೆಗೂ ಅಧಿಕ ಸಮಯ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಬೆಳಗ್ಗೆ ಆರು ಗಂಟೆಗೆ ಸಂಚಾರ ಸ್ಥಗಿತವಾದರೂ ಸಾರಿಗೆ ಅಧಿಕಾರಿಗಳು ಸ್ಥಳಕ್ಕೆ ಬಂದಿರಲಿಲ್ಲ. ಅರಣ್ಯ ಇಲಾಖೆ ಅಧಿಕಾರಿಗಳು ಕೂಡಾ ಯಾವುದೇ ಕ್ರಮ ಕೈಗೊಳ್ಳದ ಕಾರಣ ವಾಹನ ದಟ್ಟಣೆ ಹೆಚ್ಚಾಗಿತ್ತು.
ಮೇಲುಕಾಮನಹಳ್ಳಿಯಿಂದ ಬಂಡೀಪುರದವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಅರಣ್ಯ ಪ್ರದೇಶದಲ್ಲಿ ಸಂಚಾರ ಬಂದ್ ಆಗಿದ್ದರಿಂದ ಪ್ರಯಾಣಿಕರ ಪರದಾಡುವಂತಾಗಿತ್ತು.
ಇದನ್ನೂ ಓದಿ:ಬಾಗಲಕೋಟೆ ಡಿಸಿಸಿ :ಅಡ್ಡ ಮತದಾನದಿಂದ ಕಡಿಮೆ ಸ್ಥಾನ ಹೊಂದಿದ್ದರೂ ಅಧಿಕಾರ ಪಡೆದ ಕಾಂಗ್ರೆಸ್
ನಂತರ ಸ್ಥಳಕ್ಕೆ ತೆರಳಿದ ಹೈವೇ ಪ್ಯಾಟ್ರೋಲ್ ವಾಹನ ಚಾಲಕ ಮಹದೇವಸ್ವಾಮಿ ಐರಾವತ ಬಸ್ ಕೆಳಗೆ ಸಿಲುಕಿದ್ದ ಕಬ್ಬಿಣದ ಪಟ್ಟಿಯನ್ನು ಬಿಡಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444