ಹಾಸ್ಟೆಲ್‌ನಲ್ಲಿ ಏಕರೂಪದ ಊಟೋಪಾಹಾರ


Team Udayavani, May 26, 2019, 3:00 AM IST

hostel

ಕೊಳ್ಳೇಗಾಲ: ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಏಕ ಮಾದರಿ ಊಟ ಮತ್ತು ಉಪಾಹಾರ ವಿತರಣೆ ಮಾಡಲಾಗುವುದು ಎಂದು ರಾಜ್ಯ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ನೋಡಲ್‌ ಅಧಿಕಾರಿ ಸರಸ್ವತಿ ಹೇಳಿದರು.

ನಗರದ ಮೆಟ್ರಿಕ್‌ ನಂತರದ ಸರ್ಕಾರಿ ವಿದ್ಯಾರ್ಥಿ ನಿಲಯಕ್ಕೆ ಶನಿವಾರ ಭೇಟಿ ನೀಡಿ, ಕಚೇರಿ ಆವರಣದಲ್ಲಿ ಸಸಿ ನೆಟ್ಟು, ಕಡತಗಳ ಪರಿಶೀಲನೆ ನಡೆಸಿ ಮಾತನಾಡಿದರು.

ಇದೇ ವೇಳೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಾರಿಯ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ವಿದ್ಯಾರ್ಥಿಗಳಲ್ಲಿ ಒಂದೇ ಮಾದರಿಯ ಊಟ ಮತ್ತು ಉಪಾಹಾರಗಳನ್ನು ನೀಡಲಾಗುವುದು. ಈ ಹಿಂದೆ ನಗರ ಮತ್ತು ತಾಲೂಕು ಕೇಂದ್ರಗಳಲ್ಲಿ ಊಟ-ಉಪಾಹಾರಗಳಲ್ಲಿ ಗುಣಮಟ್ಟ ಕಾಣುತ್ತಿಲ್ಲ ಎಂಬ ದೂರುಗಳು ಕೇಳಿದ್ದವು.

ಹೀಗಾಗಿ, ಇಂತಹ ದೂರುಗಳಿಗೆ ಕಡಿವಾಣ ಹಾಕಲು ಏಕಮಾದರಿಯ ಊಟ-ಉಪಾಹಾರ ವಿತರಣೆಗೆ ಪಟ್ಟಿ ಸಿದ್ಧಪಡಿಸಲಾಗಿದೆ. ಅದನ್ನು ಪ್ರತಿ ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ಅಳವಡಿಸಬೇಕು. ಪಟ್ಟಿಯಲ್ಲಿ ನಮೂದಿಸಿರುವಂತೆ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಊಟ ಮತ್ತು ಉಪಾಹಾರ ಕಡ್ಡಾಯವಾಗಿ ವಿತರಣೆಯಾಗುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಬೇಸಿಗೆ ರಜಾ ಕಳೆಯುತ್ತಿದ್ದಂತೆ ಎಲ್ಲಾ ಶಾಲಾ ಕಾಲೇಜುಗಳಲ್ಲಿ ನೊಂದಣಿ ಕಾರ್ಯ ಆರಂಭವಾಗುತ್ತದೆ. ಅದೇ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಬರುವ ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯಕ್ಕೆ ಹೆಸರು ನೊಂದಾಯಿಸಿಕೊಳ್ಳುತ್ತಾರೆ.

ಅವರಿಗೆ ನಿಲಯದಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ನೀಡಲಾಗುವುದು. ವಾರದಲ್ಲಿ ಒಂದು ದಿನ ಮಾಂಸಹಾರ ಮತ್ತು ಆಲ್ಲೇಟ್‌ ಬ್ರೇಡ್‌ ಸಹ ನೀಡಲು ಕ್ರಮಕೈಗೊಂಡಿದ್ದು, ವಿದ್ಯಾರ್ಥಿಗಳು ಊಟ ಮತ್ತು ಉಪಹಾರದಲ್ಲಿಯಾವುದೇ ತರಹದ ಆಡಚಣೆ ಉಂಟಾಗದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ತರಬೇತಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪದವಿ ಬಳಿಕ ಯುಪಿಎಸ್‌ಸಿ, ಕೆಎಎಸ್‌, ಬ್ಯಾಂಕಿಂಗ್‌ ಪರೀಕ್ಷೆಯಲ್ಲಿ ಕುಳಿತುಕೊಳ್ಳಲು ದೆಹಲಿಯ ವಾಜಿರಾಮ್‌ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಉಚಿತ ತರಬೇತಿ ಕೊಡಿಸಲಾಗುತ್ತಿದೆ ಎಂದು ಹೇಳಿದರು.

ವಿದೇಶದಲ್ಲಿ ಶಿಕ್ಷಣ: ಉನ್ನತ ಶಿಕ್ಷಣವನ್ನು ಅತಿ ಹಿಂದುಳಿದ ವಿದ್ಯಾರ್ಥಿಗಳು ವಿದೇಶಗಳಲ್ಲಿ ವಿದ್ಯಾಭ್ಯಾಸ ಮಾಡಲು ಮುಂದೆ ಬಂದರೆ, ವಿದೇಶದಲ್ಲಿ ಶಿಕ್ಷಣವನ್ನು ಕೊಡಿಸಲು ಸಮಾಜ ಕಲ್ಯಾಣ ಇಲಾಖೆ ನೆರವು ನೀಡಲಿದ್ದು, ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದರು.

ವಾರ್ಡನ್‌ ಭರ್ತಿ: ತಾಲೂಕಿನಲ್ಲಿ ಸರ್ಕಾರದ 20 ಹಾಸ್ಟೆಲ್‌ಗ‌ಳಿಗೆ ಕೇವಲ 8 ಜನರು ನಿಲಯ ಪಾಲಕರು ಇದ್ದು, ಸರ್ಕಾರ ಈಗಾಗಲೇ ನಿಲಯ ಪಾಲಕರ ಭರ್ತಿ ಮಾಡಿದೆ. ನೂತನವಾಗಿ ನೇಮಕಗೊಂಡಿರುವ ನಿಲಯ ಪಾಲಕರನ್ನು ಕೂಡಲೇ ಭರ್ತಿ ಮಾಡಲಾಗುವುದೆಂದರು.

ಜಿಲ್ಲೆಯ ನೋಡೆಲ್‌ ಅಧಿಕಾರಿಯಾಗಿ ನೇಮಕಗೊಂಡು, ಪ್ರತಿ ತಿಂಗಳಿಗೊಮ್ಮೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿರುವ ಹಾಸ್ಟೆಲ್‌ಗ‌ಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿಲಯಗಳಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ದೊರಕಿಸಿಕೊಡಲು ಪ್ರಮಾಣೀಕ ಪ್ರಯತ್ನ ಮಾಡಲಾಗುವುದೆಂದರು.

ಅಂಬೇಡ್ಕರ್‌ ಭವನ: ಸರ್ಕಾರಿ ವಸತಿ ನಿಲಯಕ್ಕೆ ಭೇಟಿಯ ಬಳಿಕ ನಗರದ ಅಂಬೇಡ್ಕರ್‌ ಸಮುದಾಯ ಭವನಕ್ಕೆ ಭೇಟಿ ನೀಡಿ, ಭವನ ಪೂರ್ಣಗೊಳಿಸಲು ಎರಡು ಕೋಟಿ ರೂ. ಅಂದಾಜಿನಲ್ಲಿ ತಯಾರಿಸಿರುವ ಅಂದಾಜು ಪಟ್ಟಿ ಸಹ ಕಚೇರಿಗೆ ಬಂದಿದ್ದು, ಕೂಡಲೇ ಅನುದಾನ ಬಿಡುಗಡೆಗೊಳಿಸಿ, ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದೆಂದರು.

ಭೇಟಿಯ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ಉಪ ನಿರ್ದೇಶಕಿ ಜಯಕಾಂತ, ಕಚೇರಿಯ ವ್ಯವಸ್ಥಾಪಕ ಮಂಜುನಾಥ್‌, ನಿಲಯ ಪಾಲಕರಾದ ಮಂಜುಳ, ವಿಜಯ್‌ಕುಮಾರ್‌, ಸಿಗ್ಬತ್ತುಲ್ಲಾ, ಪ್ರಭಾರ ಪಾಲಕಿ ಲಕ್ಷ್ಮಿ ಮತ್ತು ಸಿಬ್ಬಂದಿವರ್ಗ ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.