ಸರ್ಕಾರದಿಂದ ನೀಡುವ ಸವಲತ್ತು ಸಮರ್ಪಕವಾಗಿ ಬಳಸಿ

Team Udayavani, May 5, 2019, 3:00 AM IST

sarkaradinda

ಕೊಳ್ಳೇಗಾಲ: ಆರ್‌ಟಿಇ ನಿಂದ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡುವ ಸವಲತ್ತುಗಳು ಸಮರ್ಪಕವಾಗಿ ದೊರೆಯುವಂತೆ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಲಾಗುವುದೆಂದು ಮೈಸೂರು ಡಯಟ್‌ ಪ್ರಾಂಶುಪಾಲ ಮಹದೇವಪ್ಪ ಹೇಳಿದರು.

ನಗರದ ಗುರುಭವನದಲ್ಲಿ ಕೆರೆಯಲಾಗಿದ್ದ ವಿವಿಧ ಶಾಲೆಗಳಿಗೆ ಆರ್‌ಟಿಇ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳ ಪೋಷಕರ ಕುಂದು-ಕೊರತೆ ಸಭೆಯಲ್ಲಿ ಮಾತನಾಡಿ, ವಿದ್ಯಾರ್ಥಿಗಳಿಗೆ ಯಾವುದೇ ತರಹದ ತೊಂದರೆಗಳು ಎದುರಾಗದಂತೆ ನಿಗಾವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

ದೂರಿನ ಸುರಿಮಳೆ: ಪೋಷಕರು ಶಾಲೆಗಳಲ್ಲಿ ಸರಿಯಾಗಿ ಪುಸ್ತಕ ವಿತರಣೆ ಮಾಡುತ್ತಿಲ್ಲ. ನೋಟ್‌ ಬುಕ್‌, ಶೂ, ಸಮವಸ್ತ್ರ ಸೇರಿದಂತೆ ಸೇರಿದಂತೆ ಹಲವಾರು ಸಾಮಗ್ರಿಗಳನ್ನು ಸರಿಯಾಗಿ ವಿತರಿಸುತ್ತಿಲ್ಲ ಮತ್ತು ಆರ್‌ಟಿಇನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ಶಾಲೆಗಳಲ್ಲಿ ಪ್ರತ್ಯೇಕವಾಗಿ ಆಸನ ನೀಡುತ್ತಾರೆ. ಆರ್‌ಟಿಇ ವಿದ್ಯಾರ್ಥಿಗಳ ಓದಿನ ಬಗ್ಗೆ ಕಾಳಹಿ ವಹಿಸುತ್ತಿಲ್ಲ.

ಡೋನೇಷನ್‌ ನೀಡಿ ಬಂದಂತಹ ವಿದ್ಯಾರ್ಥಿಗಳಂತೆ ಕಾಣದೆ ಆರ್‌ಟಿಇ ವಿದ್ಯಾರ್ಥಿಗಳನ್ನು ವಿಶೇಷ ರೀತಿಯಲ್ಲಿ ನೋಡುತ್ತಾರೆ ಎಂದು ದೂರಿದರು. ಆರ್‌ಟಿಇ ವಿದ್ಯಾರ್ಥಿಗಳನ್ನು ಕಡೆಗಣಿಸುತ್ತಿರುವ ಬಗ್ಗೆ ಕ್ಷೇತ್ರದ ಶಾಸಕ ಎನ್‌.ಮಹೇಶ್‌ ಅವರು ಶಿಕ್ಷಣ ಸಚಿವರಾಗಿದ್ದ ವೇಳೆ ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಕಾಣುತ್ತಿರುವ ಬಗ್ಗೆ ಮತ್ತು

ಆರ್ಥಿಕ ವಿದ್ಯಾರ್ಥಿಗಳು ಸಹ ಹಣ ನೀಡುವಂತೆ ಒತ್ತಾಯಿಸುತ್ತಿರುವ ಬಗ್ಗೆ ದೂರುಗಳನ್ನು ನೀಡಲಾಗಿತ್ತು. ಸಚಿವರು ಹೇಳಿದರೂ ಸಹ ಖಾಸಗಿ ಶಾಲೆಯ ಆಡಳಿತ ಮಂಡಳಿಯವರು ಗಾಳಿಗೆ ತೂರಿದ್ದಾರೆ ಎಂದು ದೂರಿನ ಸುರಿಮಳೆಗೈದಿರುವುದನ್ನು ಆಲಿಸಿದ ಪ್ರಾಂಶುಪಾಲರು ಈ ರೀತಿ ನಡೆಯಲು ಅವಕಾಶ ನೀಡವುದಿಲ್ಲ ಪೋಷಕರು ಸಹಕರಿಸಬೇಕೆಂದು ಮನವಿ ಮಾಡಿದರು.

ಮಕ್ಕಳಿಗೆ ಸಲಹೆ ನೀಡಿ: ಶಾಲೆಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಹೇಳಿಕೊಡುವ ಮಾದರಿಯಲ್ಲೇ ಪಾಠ ಪ್ರವಚನಗಳು ನಡೆಯುತ್ತದೆ. ಪೋಷಕರು ತಮ್ಮ ಮಕ್ಕಳಿಗೆ ಮನೆಯಲ್ಲಿ ಹೆಚ್ಚು ಕಲಿಕೆಗೆ ಪ್ರೋತ್ಸಾಹ ನೀಡಬೇಕು. ಆಗ ಮಾತ್ರ ಮಕ್ಕಳಲ್ಲಿ ಮತ್ತಷ್ಟು ಶಿಕ್ಷಣದ ಬಗ್ಗೆ ಒಲವು ಹೆಚ್ಚಾಗುತ್ತದೆ ಎಂದು ಸಲಹೆ ನೀಡಿದರು.

ತೊಂದರೆಯಾಗದಂತೆ ನಿಗಾ: ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಪಾಟೀಲ್‌ ಮಾತನಾಡಿ, ಶಾಲೆಗಳಲ್ಲಿ ಆರ್‌ಟಿಇ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಎನ್ನಲಾದ ದೂರುಗಳ ಬಗ್ಗೆ ಜಿಲ್ಲಾ ಶಿಕ್ಷಣಾಧಿಕಾರಿಗಳ ಗಮನಕ್ಕೂ ತರಲಾಗಿದೆ. ಈ ಬಾರಿಯಿಂದ ಆರ್‌ಟಿಇ ಆಯ್ಕೆಗೆ ಸರ್ಕಾರಿ ಶಾಲೆಯ ಮೂರು ಶಾಲೆಗಳನ್ನು ಮಾತ್ರ ತೆಗೆದುಕೊಳ್ಳಲಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲೇ ವ್ಯಾಸಂಗ ಮಾಡುವಂತೆ ಸುತ್ತೋಲೆ ಹೊರಡಿಸಲಾಗಿದೆ. ಮುಂದಿನ ದಿನಗಳಲ್ಲಿ ಆರ್‌ಟಿಇ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನಿಗಾವಹಿಸಲಾಗುವುದೆಂದು ಭರವಸೆ ನೀಡಿದರು.

ಗೊಂದಲ: ಆರ್‌ಟಿಇ ವಿದ್ಯಾರ್ಥಿಗಳಿಗೆ ವಿವಿಧ ಶಾಲೆಯಲ್ಲಿ ಉಂಟಾಗುತ್ತಿರುವ ನ್ಯೂನತೆಗಳನ್ನು ಸರಿಪಡಿಸಲು ಪೋಷಕರ ಸಭೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಆಹ್ವಾನ ಮಾಡಿದ್ದು, ಬೃಹತ್‌ ಸಂಖ್ಯೆಯಲ್ಲಿ ಸೇರಿರುವ ಪೋಷಕರ ಅಳಲನ್ನು ತೊಡಿಕೊಳ್ಳಲು ಬಂದಿರುವ ಸಭೆಗೆ ಪತ್ರಿಕಾ ಮಾಧ್ಯಮದವರನ್ನು ಏಕೆ ಆಹ್ವಾನ ಮಾಡಿಲ್ಲ ಎಂದು ಪ್ರಶ್ನಿಸಿದ ಪೋಷಕರು, ಇದೊಂದು ಸಮಸ್ಯೆಗಳನ್ನು ಮುಚ್ಚುಹಾಕುವ ಕುತಂತ್ರವೇ ಎಂದು ಕೇಳಿದ ಪ್ರಶ್ನೆಗೆ ಸಭೆಯಲ್ಲಿ ಗೊಂದಲ ಉಂಟಾಯಿತು.

ಬಿಆರ್‌ಸಿ ಮಂಜುಳಾ, ಸಿಬ್ಬಂದಿ ಅಮಿತ್‌, ವರದರಾಜು, ಜಯರಾಜು ಹಾಗೂ ಪೋಷಕರು ಇದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ddd

Gundlupet; ಕಾರು-ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

Karadi-savu

Gundlupet: ಸಿಡಿಮದ್ದು ಸಿಡಿದು ಕರಡಿ ಮೃತ್ಯು

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

rape

Yelandur; ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಯುವಕನ ಬಂಧನ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.