ಮಗು ಅಪಹರಿಸಿದ್ದ ಮಹಿಳೆ ಬಂಧನ

Team Udayavani, Jun 18, 2020, 5:08 AM IST

magu-bandhana

ಚಾಮರಾಜನಗರ: ನಗರದ ಜಿಲ್ಲಾಸ್ಪತ್ರೆಯಲ್ಲಿ ನವಜಾತ ಶಿಶುವನ್ನು ಅಪಹರಿಸಿದ್ದ ಮಹಿಳೆಯನ್ನು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಹುಣಸೂರಿನ ನಾಲ್‌ಬಾನ್‌ ಬೀದಿ ನಿವಾಸಿ ವಸಂತ ಅವರ ಪತ್ನಿ  ರಂಜಿತಾ ಮಗು ಅಪರಹಣಕ್ಕೆ ಯತ್ನಿಸಿದ ಮಹಿಳೆ.

ನಗರದ ಜಿಲ್ಲಾಸ್ಪತ್ರೆಯಲ್ಲಿ ಕೊಳ್ಳೇಗಾಲ ತಾಲೂಕು ಪಾಳ್ಯದ ಮುತ್ತಮ್ಮಳಿಗೆ ಜೂ.13ರಂದು ಗಂಡು ಮಗು ಜನಿಸಿತ್ತು. ಬುಧವಾರ ಮಗುವಿಗೆ ಹುಷಾರಿಲ್ಲವೆಂದು ಅಜ್ಜಿ ಆಸ್ಪತ್ರೆಗೆ  ತಂದಿದ್ದಾರೆ. ಅದೇ ವಾರ್ಡಿನಲ್ಲಿ ಓಡಾಡುತ್ತಿದ್ದ ರಂಜಿತಾ ಅಜ್ಜಿಯನ್ನು ಪರಿಚಯಿಸಿಕೊಂಡಿದ್ದಾಳೆ. ಕೆಲ ಸಮಯ ಮಗು ಎತ್ತಿಕೊಳ್ಳುವೆ, ನೀವು ವೈದ್ಯರಿದ್ದಾರೆಯೇ ಎಂದು ನೋಡಿಕೊಂಡು ಬನ್ನಿ ಎಂದು ಅಜ್ಜಿಗೆ ಹೇಳಿದ್ದಾಳೆ.

ಅಜ್ಜಿ ಇತ್ತ  ಬರುತ್ತಿದ್ದಂತೆಯೇ ಮಗುವನ್ನು ಎತ್ತಿಕೊಂಡು ಪರಾರಿಯಾಗಿದ್ದಾಳೆ. ಅಜ್ಜಿ ವಾಪಸ್‌ ಬಂದು ನೋಡಿದಾಗ ಅಲ್ಲಿ ಆ ಮಹಿಳೆ ಇಲ್ಲದಿರುವುದು ಕಂಡು ಗಾಬರಿಯಾಗಿ ವೈದ್ಯರಿಗೆ ವಿಷಯ ತಿಳಿಸಿದ್ದಾರೆ. ವೈದ್ಯರು ಪೊಲೀಸರಿಗೆ ವಿಷಯ ತಿಳಿಸಿದಾಗ  ತಕ್ಷಣ ಕಾರ್ಯಪ್ರವೃತ್ತರಾದ ಪಟ್ಟಣ ಠಾಣೆ ಇನ್ಸ್‌ಪೆಕ್ಟರ್‌ ನಾಗೇಗೌಡ ಮತ್ತು ಸಿಬ್ಬಂದಿ ಆಸ್ಪತ್ರೆ ಮುಂದೆ ಇರುವ ಆಟೋ ಚಾಲಕರನ್ನು ವಿಚಾರಿಸಿದ್ದಾರೆ.

ಆಟೋ ಚಾಲಕನೊಬ್ಬ ಮಗುವಿನೊಂದಿಗೆ ಬಂದ ಮಹಿಳೆಯನ್ನು  ಹುಣಸೂರಿಗೆ ಹೋಗುವ ಬಸ್‌ ನಿಲ್ದಾಣದ ಬಳಿ ಬಿಟ್ಟಿದ್ದಾಗಿ ತಿಳಿಸಿದ್ದಾನೆ. ಬಳಿಕ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಹೋದಾಗ ಹುಣಸೂರಿನ ಬಸ್‌ ಹೋಗಿರುವ ವಿಷಯ ತಿಳಿಸಿದ್ದಾರೆ. ಕೂಡಲೇ ಪೊಲೀಸರು ಹುಣಸೂರಿನ ಪೊಲೀಸರಿಗೆ  ಚಾಮರಾಜನಗರದಿಂದ ಬರುವ ಬಸ್‌ ತಪಾಸಣೆ ಮಾಡುವಂತೆ ಸೂಚಿಸಿದ್ದಾರೆ.

ಹುಣಸೂರಲ್ಲಿ ಪೊಲೀಸರು ಮಗುವಿನೊಂದಿಗೆ ಇಳಿದ ಮಹಿಳೆಯನ್ನು ವಶಕ್ಕೆ ಪಡೆದು ನಗರ ಪೊಲೀಸರಿಗೆ ಮಾಹಿತಿ ನೀಡಿದ್ದು, ಅದೇ ಮಗು  ಎಂದು  ದೃಢಪಟ್ಟಿದೆ. ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ಪಟ್ಟಣ ಠಾಣೆ ಇನ್‌ಪೆಕ್ಟರ್‌ ನಾಗೇಗೌಡ ತಿಳಿಸಿದರು.

ಟಾಪ್ ನ್ಯೂಸ್

ಸಚಿವ ಜೋಶಿ

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸಚಿವ ಜೋಶಿ

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.