ಮಲೆ ಮಾದಪ್ಪನ ದರ್ಶನ ಪಡೆದು ಕಾಲ್ನಡಿಗೆಯಲ್ಲಿಯೇ ನಾಗಮಲೆಗೆ ತೆರಳಿದ ಯತೀಂದ್ರ ಸಿದ್ಧರಾಮಯ್ಯ
Team Udayavani, Nov 28, 2020, 7:18 PM IST
ಹನೂರು(ಚಾಮರಾಜನಗರ): ಪ್ರಸಿದ್ದ ಧಾರ್ಮಿಕ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟ ಮತ್ತು ನಾಗಮಲೆ ಕ್ಷೇತ್ರಗಳಿಗೆ ವರುಣಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪುತ್ರ ಯತೀಂದ್ರ ಸಿದ್ಧರಾಮಯ್ಯ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಶುಕ್ರವಾರ ತಡರಾತ್ರಿಯೇ ಆಗಮಿಸಿದ್ದ ಯತೀಂದ್ರ ಸಿದ್ಧರಾಮಯ್ಯ ರಾಷ್ಟ್ರಪತಿ ಭವನ (ಅತಿಥಿ ಗೃಹ) ದಲ್ಲಿ ವಾಸ್ತವ್ಯ ಹೂಡಿದ್ದರು. ಬಳಿಕ ಬೆಳ್ಳಂಬೆಳಗ್ಗೆಯೇ 6 ಗಂಟೆಯ ವೇಳೆಗೆ ಮಲೆ ಮಾದಪ್ಪನ ದರ್ಶನ ಪಡೆದರು. ಬಳಿಕ ನಾಗಮಲೆಗೆ ತೆರಳುವ ಇಂಗಿತ ವ್ಯಕ್ತಪಡಿಸಿದ ಯತೀಂದ್ರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್ ಮತ್ತು ಗ್ರಾ.ಪಂ ಮಾಜಿ ಉಪಾಧ್ಯಕ್ಷ ಮಾದೇಶ್ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರ ಜೊತೆ ಇಂಡಿಗನತ್ತ ಗ್ರಾಮದವರೆಗೆ ಜೀಪ್‍ನಲ್ಲಿ ತೆರಳಿ ಬಳಿಕ ಕಾಲ್ನಡಿಗೆಯ ಮೂಲಕ ಶ್ರೀ ನಾಗಮಲೆ ಕ್ಷೇತ್ರಕ್ಕೆ ತೆರಳಿ ಸ್ವಾಮಿಯ ದರ್ಶನ ಪಡೆದರು.
ಬಳಿಕ ನಾಗಮಲೆ ಕ್ಷೇತ್ರದಿಂದ ಬೆಟ್ಟ ಇಳಿದು ವಾಹನದ ಮೂಲಕ ಗೋಪಿನಾಥಂಗೆ ತೆರಳಿ ಅಲ್ಲಿಂದ ಮಲೆ ಮಹದೇಶ್ವರ ಬೆಟ್ಟ ತಲುಪಿದರು.
ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ: ಈ ವೇಳೆ ಯತೀಂದ್ರ ಸಿದ್ಧರಾಮಯ್ಯ ಆಗಮಿಸಿರುವುದನ್ನು ತಿಳಿದ ಕೆಲ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಅವರನ್ನು ಮಾತನಾಡಿಸಲು ಶ್ರೀ ಕ್ಷೇತ್ರದಲ್ಲಿ ಕಾದು ಕುಳಿತಿದ್ದರು. ಈ ವೇಳೆಗೆ ಆಗಮಿಸಿದ ಯತೀಂದ್ರ ಕುಶಲೋಪರಿ ವಿಚಾರಿಸಿ ಔಪಚಾರಿಕ ಚರ್ಚೆ ನಡೆಸಿ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ಕಿವಿಮಾತು ಹೇಳಿದರು. ಈ ವೇಳೆ ಕೆಲ ಮುಖಂಡರು ಕಾರ್ಯಕರ್ತರು ಸೆಲ್ಫಿ ತೆಗೆದುಕೊಳ್ಳಲು, ಭಾವಚಿತ್ರ ತೆಗೆಸಿಕೊಳ್ಳಲು ಮುಗಿಬಿದ್ದದ್ದು ಕಂಡುಬಂದಿತು. ಬಳಿಕ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮರಾಠ ಸಮಾಜದವರು ಕರ್ನಾಟಕದಲ್ಲಿ ಖುಷಿಯಿಂದಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್
ಹಳ್ಳಿಹಕ್ಕಿ ‘ಸಚಿವ’ ಆಸೆಗೆ ತಣ್ಣೀರೆರಚಿದ ಕೋರ್ಟ್: ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ
ಬೆಳಗಾವಿಯಲ್ಲಿ ಅಧಿವೇಶನ ನಡೆಸದ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ:ಭಿತ್ತಿಪತ್ರ ಪ್ರದರ್ಶನ
ಮಹಾರಾಷ್ಟ್ರ ಸಿಎಂ ‘ಬೆಳಗಾವಿ’ ಹೇಳಿಕೆ: ರಾಜ್ಯದ ನಾಯಕರ ಖಂಡನೆ, ಸಚಿವೆ ಜೊಲ್ಲೆ ಎಚ್ಚರಿಕೆ
ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು: ಡಿಸಿಎಂ ಲಕ್ಷ್ಮಣ ಸವದಿ