3 ತಿಂಗಳ ಬಳಿಕ ಹೋಟೆಲ್‌, ದೇಗುಲ ಆರಂಭ


Team Udayavani, Jun 8, 2020, 8:04 AM IST

3 months

ಚಿಕ್ಕಬಳ್ಳಾಪುರ: ಕೋವಿಡ್‌ 19 ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್‌ಡೌನ್‌ ಘೋಷಿಸಿದರ ಪರಿಣಾಮ 3 ತಿಂಗಳಿಂದ ಬಾಗಿಲು ಬಂದ್‌ ಮಾಡಿದ್ದ ಹೋಟೆಲ್‌, ರೆಸ್ಟೋರೆಂಟ್‌ಗಳು ಹಾಗೂ ವಿಶೇಷವಾಗಿ ಧಾರ್ಮಿಕ ದತ್ತಿ ಇಲಾಖೆಯ  ವ್ಯಾಪ್ತಿಗೆ ಒಳಪಡುವ ಎ,ಬಿ ಮತ್ತು ಸಿ ದೇವಾಲಯಗಳಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಕ್ಷಣಗಣನೆ.

ಸೋಂಕು ಹರಡದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಳೆದ ಮಾ.22 ರಿಂದ ಘೋಷಿಸಿದ ಲಾಕ್‌ಡೌನ್‌ನಿಂದಾಗಿ ಹೋಟೆಲ್‌ ಹಾಗೂ  ದೇವಾಲಯಗಳು ಬಾಗಿಲು ಮುಚ್ಚಿದ್ದವು. ಆದರೆ ಕೇಂದ್ರ ಸರ್ಕಾರ ಜೂನ್‌. 8 ರಿಂದ ದೇವಾಲಯಗಳಲ್ಲಿ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಿದ್ದು, ಅದೇ ರೀತಿ ಹೋಟೆಲ್‌ ಹಾಗೂ ರೆಸ್ಟೋರೆಂಟ್‌ಗಳ ಪುನಾರಂಭಕ್ಕೂ ಅನುಮತಿ  ನೀಡಿದೆ.

ಗ್ರಾಹಕರ ಸೇವೆಗೆ ಸಿದ್ಧತೆ: ಸೋಮವಾರದಿಂದ ಹೋಟೆಲ್‌ಗ‌ಳು ಕಾರ್ಯಾರಂಭ ಮಾಡಲಿರುವ ಹಿನ್ನೆಲೆಯಲ್ಲಿ ಭಾನುವಾರವೇ ಜಿಲ್ಲೆಯ ಹೋಟೆಲ್‌ಗ‌ಳಲ್ಲಿ ಗ್ರಾಹಕರಿಗೆ ಸೇವೆ ನೀಡಲು ಅಗತ್ಯ ಸಿದ್ಧತೆ ನಡೆಸಿಕೊಳ್ಳುತ್ತಿದ್ದ  ದೃಶ್ಯಗಳು ಕಂಡು ಬಂದವು.

ಮಾಸ್ಕ್ ಧರಿಸಿರಬೇಕು: ಆರೋಗ್ಯ ಇಲಾಖೆ ನೀಡಿರುವ ಮಾರ್ಗಸೂಚಿ ಅನ್ವಯ ಗ್ರಾಹಕರಿಗೆ ಸೇವೆ ಒದಗಿಸಲು ಹೋಟೆಲ್‌ಗ‌ಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳ ಲಾಗಿದೆ. ಗ್ರಾಹಕರು ಮಾಸ್ಕ್ ಧರಿಸಿರಬೇಕು, ಹೋಟೆಲ್‌ ಒಳಗೆ  ಪ್ರವೇಶಿಸುವ ಮುನ್ನ ಗ್ರಾಹಕರ ಉಷ್ಣಾಂಶ ಪರೀಕ್ಷೆಗೆ ಥರ್ಮಲ್‌ ಸ್ಕ್ರೀನಿಂಗ್‌ ವ್ಯವಸ್ಥೆ ಮಾಡಲಾಗಿದೆ. ಸ್ಯಾನಿಟೈಸರ್‌ ವ್ಯವಸ್ಥೆ ಸಹ ಕಲ್ಪಿಸಲಾಗುವುದು ಎಂದು ನಗರದ ಎಂಜಿ ರಸ್ತೆಯಲ್ಲಿರುವ ಅಂಭಾ ಭವಾನಿ ಹೋಟೆಲ್‌ ಮಾಲೀಕ  ಶ್ರೀಧರ್‌ ಮೂರ್ತಿ ‘ಉದಯವಾಣಿ’ ಗೆ ತಿಳಿಸಿದರು.

ಹೋಟೆಲ್‌ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ 6 ಮಂದಿ ಕೂರುವ ಕಡೆ 4 ಮಂದಿ, ನಾಲ್ವರು ಕೂರುವ ಕಡೆ ಇಬ್ಬರಿಗೆ ಅವಕಾಶ ಕಲ್ಪಿಸಲಾಗುವುದು. ಹೋಟೆಲ್‌ನಲ್ಲಿ ಕೆಲಸ ಮಾಡುವ ಬಾಣಸಿಗರ ಹಾಗೂ ಊಟ,  ತಿಂಡಿ ನೀಡುವ ಸಹಾಯಕರಿಗೂ ಮಾಸ್ಕ್, ಸ್ಯಾನಿಟೈಸರ್‌ ಬಳಸುವಂತೆ ಸೂಚಿಸಲಾಗಿದೆ ಎಂದರು.

ದೇವಾಲಯಗಳ ಸ್ವಚ್ಛತೆ: ದೇವಾಲಯಗಳಿಗೆ ದರ್ಶನಕ್ಕೆ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ದೇವಾಲಯ ಸಮಿತಿಗಳು ದೇವಾಲಯಗಳಲ್ಲಿ ಸ್ವಚ್ಛತೆ, ನೈರ್ಮಲ್ಯಕ್ಕೆ ಆದ್ಯತೆ ನೀಡಿವೆ. ಜನಸಂ ದಣಿ ಸೇರುವ ಉತ್ಸವಗಳಾದ ಬ್ರಹ್ಮರಥೋತ್ಸವ, ಜಾತ್ರೆ ಮತ್ತಿತರ ವಿಶೇಷ ಪೂಜೆ, ಇತರೆ ಉತ್ಸವ ನಡೆಯುವ ಸೇವೆ ಗಳನ್ನು ತಾತ್ಕಾಲಿಕವಾಗಿ ಮುಂದಿನ ಆದೇಶದವರೆಗೆ ನಿಷೇಧಿಸಲಾಗಿದೆ.

ಭಕ್ತಾದಿಗಳು ಮಾಸ್ಕ್ ಧರಿಸಿದರೆ ಮಾತ್ರ ದೇವಾಲಯಕ್ಕೆ ಪ್ರವೇಶವಿರುತ್ತದೆ. ಭಕ್ತರು ಪಾದರಕ್ಷೆಗಳನ್ನು ಪ್ರತ್ಯೇಕ ಸ್ಥಳಗಳಲ್ಲಿ ಬಿಡಬೇಕು. ದರ್ಶನಕ್ಕೆ ಮುಂದಿನ ಆದೇಶದವರೆಗೆ 65 ವಯಸ್ಸಿನ ವೃದ್ಧರು ಹಾಗೂ 10 ವರ್ಷದ ಒಳಗಿನ  ಮಕ್ಕಳು, ಗರ್ಭಿಣಿ ಸ್ತ್ರೀಯರಿಗೆ ಅವಕಾಶವಿಲ್ಲ.
-ಆರ್‌.ಲತಾ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.