ಚಿಕ್ಕಬಳ್ಳಾಪುರ ಜಿಲ್ಲಾಡಳಿತ ದಿಂದ ಸಿಎಂ ನೆರೆ ಪರಿಹಾರ ನಿಧಿಗೆ 50 ಲಕ್ಷ ನೆರವು
Team Udayavani, Sep 6, 2019, 6:42 PM IST
ಚಿಕ್ಕಬಳ್ಳಾಪುರ: ಇಡೀ ರಾಜ್ಯಕ್ಕೆ ಮಾದರಿಯಾಗಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಉತ್ತರ ಕರ್ನಾಟಕದಲ್ಲಿ ವಿವಿಧ ಜಿಲ್ಲೆಗಳಲ್ಲಿ ಸಂಭವಿಸಿದ್ದ ನೆರೆ ಪ್ರವಾಹ ಸಂತ್ರಸ್ತರಿಗೆ ಜಿಲ್ಲಾಡಳಿತ ಬರೋಬರಿ 50.76 ಲಕ್ಷ ರೂ. ನೆರವಿನ ಚೆಕ್ ನ್ನು ಗುರುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಅವರ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಹಸ್ತಾಂತರಿಸಿದೆ.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಎನ್.ನಾಗಾಂಬಿಕಾ ದೇವಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಾದ ಆರ್.ಲತಾ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ನಿರ್ಮಲ ಮುನಿರಾಜು, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿಗಳಾದ ಬಿ.ಫೌಜಿಯಾ ತರನ್ನುಮ್ ಅವರ ನಿಯೋಗ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.
ಕಳೆದ ಆಗಸ್ಟ್ 15,16 ರಂದು ಎರಡು ದಿನಗಳ ಕಾಲ ಜಿಲ್ಲಾದ್ಯಂತ ನೆರೆ ಪ್ರವಾಹ ಸಂತ್ರಸ್ತರ ಪರಿಹಾರಕ್ಕೆ ಜಿಲ್ಲಾಡಳಿತ, ಜಿಪಂ ವತಿಯಿಂದ ನಿಧಿ ಸಂಗ್ರಹಿಸಲಾಗಿತ್ತು. ಜಿಲ್ಲೆಯ ಜನತೆ ಉದಾರವಾಗಿ ಧನಸಹಾಯ ಮಾಡಿದ್ದರು. ಸುಮಾರು 36 ಲಕ್ಷದಷ್ಟು ಹಣ ಸಾರ್ವಜನಿಕವಾಗಿ ಸಂಗ್ರಹವಾದರೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ 17 ಲಕ್ಷ ರೂ. ಹಣ ಸಂಗ್ರಹ ವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಾಂದ್ರಮಾನ ಯುಗಾದಿಗೆ ಪ್ರಧಾನಿ, ರಾಷ್ಟ್ರಪತಿ ಸೇರಿ ಹಲವು ರಾಜಕೀಯ ಗಣ್ಯರಿಂದ ಶುಭಾಶಯ
ಕನ್ನಡದಲ್ಲಿ ಟ್ವೀಟ್ ಮಾಡಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ
ಜಾರಕಿಹೊಳಿ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್:ಸಿಡಿ ಲೇಡಿಯ ಮತ್ತೊಂದು ವಿಡಿಯೋ, ರಮೇಶ್ ಗೆ ಸಂಕಷ್ಟ
ಲಾಕ್ಡೌನ್ ಮದ್ದಲ್ಲ : ಪರೀಕ್ಷೆ, ಲಸಿಕೆ ಹೆಚ್ಚಿಸಿ: ತಜ್ಞರು, ವೈದ್ಯರ ಸಲಹೆ
ನಮ್ಮ ಅಂಜನಾದ್ರಿಯೇ ಆಂಜನೇಯನ ಜನ್ಮಸ್ಥಳ : ಸಚಿವ ಕೋಟ ಶ್ರೀನಿವಾಸ ಪೂಜಾರಿ