ವಿವಿ ಅಂಕಪಟ್ಟಿ ಹಗರಣ ತನಿಖೆಗೆ ಎಬಿವಿಪಿ ಪ್ರತಿಭಟನೆ

Team Udayavani, Dec 15, 2017, 5:14 PM IST

g.jpg

ಚಿಕ್ಕಬಳ್ಳಾಪುರ: ರಾಜ್ಯದ ವಿಶ್ವ ವಿದ್ಯಾಲಯಗಳಲ್ಲಿ ಅಂಕಪಟ್ಟಿ ಮುದ್ರಣದ ಗುತ್ತಿಗೆ ನೀಡುವ ವಿಚಾರದಲ್ಲಿ ಬೆಳಕಿಗೆ ಬಂದಿರುವ ಅಕ್ರಮಗಳನ್ನು ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿ ನಗರದಲ್ಲಿ ಎಬಿವಿಪಿ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಕ್ರಮ ಕೈಗೊಳ್ಳಿ: ನಗರದ ಮುಖ್ಯ ರಸ್ತೆಗಳಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ಅಂಬೇಡ್ಕರ್‌ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದ ಎಬಿವಿಪಿ ಕಾರ್ಯಕರ್ತರು, ವಿವಿಗಳ ಅಂಕಪಟ್ಟಿ ಅಕ್ರಮಗಳಲ್ಲಿ ಉನ್ನತ ಶಿಕ್ಷಣ ಸಚಿವರು ಭಾಗಿಯಾಗಿರುವುದು ಮೇಲ್ನೊಟಕ್ಕೆ ಕಂಡು ಬಂದಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಎಬಿವಿಪಿ ವಿಭಾಗೀಯ ಸಂಚಾಲಕ ಎನ್‌.ಮಂಜುನಾಥರೆಡ್ಡಿ ಮಾತನಾಡಿ, ರಾಜ್ಯದ ವಿಶ್ವವಿದ್ಯಾಲಯಗಳಿಂದ ಕಳಪೆ ಗುಣಮಟ್ಟದ ಅಂಕಪಟ್ಟಿಗಳನ್ನು ಮುದ್ರಿಸಲಾಗುತ್ತಿದೆ. ಒಂದೊಂದು ವಿಶ್ವವಿದ್ಯಾಲಯದಲ್ಲಿ ಒಂದೊಂದು ದ‌ರವನ್ನು ನೀಡಲಾಗುತ್ತಿದೆ ಎಂಬುದನ್ನು ಆಧರಿಸಿ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಒಂದೇ ರೀತಿಯ ಅಂಕಪಟ್ಟಿಗಳನ್ನು ಖರೀದಿಸಲು ರಾಜ್ಯ ಉನ್ನತ ಶಿಕ್ಷಣ ಇಲಾಖೆ ಟೆಂಡರ್‌ ನೀಡಿದೆ.

ಆದರೆ, ಅಂಕಪಟ್ಟಿಗಳನ್ನು ತಯಾರಿಸುವುದು, ವಿತರಿಸುವುದು ಮತ್ತು ಗುತ್ತಿಗೆ ನೀಡುವುದು ವಿವಿಗಳ ಕೆಲಸ. ವಿವಿಗಳಲ್ಲಿ ನಡೆಯುವ ಭ್ರಷ್ಟಾಚಾರವನ್ನು ತಡೆಯುವುದನ್ನು ಬಿಟ್ಟು ಸಚಿವ ಬಸವರಾಜ ರಾಯರಡ್ಡಿ ಅಧಿಕಾರ ವಹಿಸಿಕೊಂಡ ಆರಂಭದ ದಿನಗಳಿಂದಲೂ ವಿವಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕುಲಪತಿಗಳೇ ನೇರ ಕಾರಣ,

ಕುಲಪತಿಗಳು ಡಕಾಯಿತರು ಎಂಬ ವಿವಾದಾತ್ಮಕ ಹೇಳಿಕೆ ನೀಡಿ, ಎಲ್ಲಾ ವಿವಿಗಳಿಗೆ ಒಂದೇ ರೀತಿಯ ಅಂಕಪಟ್ಟಿಗಳನ್ನು ಮುದ್ರಿಸಲು ಗುತ್ತಿಗೆಯನ್ನು ಕಪ್ಪುಪಟ್ಟಿಗೆ ಸೇರಿದ ಕಂಪನಿಗೆ ಟೆಂಡರ್‌ ವಹಿಸಿರುವುದು ಹಲವು ಅಕ್ರಮಗಳಿಗೆ ಕಾರಣವಾಗಿದೆ. ಉನ್ನತ ಶಿಕ್ಷಣ ಸಚಿವರೂ ಹಗರಣದಲ್ಲಿ ಭಾಗಿಯಾಗಿರುವ ಸಂಶಯವಿದೆ ಎಂದು ಆರೋಪಿಸಿದರು.

ಬೇಕಾಬಿಟ್ಟಿ ಮುದ್ರಣ: ಈಗಾಗಲೇ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ 9 ಲಕ್ಷ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 20 ಲಕ್ಷಕ್ಕೂ ಹೆಚ್ಚು  ಅಂಕಟ್ಟಿಗಳನ್ನು ಬೇಕಾಬಿಟ್ಟಿ ಮುದ್ರಿಸಿದ ಪರಿಣಾಮವಾಗಿ ವಿವಿಯ ಗೋದಾಮುಗಳಲ್ಲಿ ಕೊಳೆಯುತ್ತಿವೆ ಎಂದರು.

ಎಬಿವಿಪಿ ಹಕ್ಕೊತ್ತಾಯಗಳೇನು?: ವಿವಿಗಳಲ್ಲಿ ಅಂಕಪಟ್ಟಿಗಳ ಮುದ್ರಣದ ವಿಚಾರದಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ನಿದ್ಯಾìಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಎಂಎಸ್‌ಐಲ್‌ಗೆ ಟೆಂಡರ್‌ ಕೊಡಬೇಕೊ ಅಥವಾ ಬೇರೆಯವರಿಗೆ ಕೊಡಬೇಕೊ ಎಂದು ತೀರ್ಮಾನಿಸುವುದನ್ನು ವಿವಿಗಳಿಗೆ ಬಿಟ್ಟು, ಅಂಕಪಟ್ಟಿಗಳ ಹೊಣೆಗಾರಿಕೆಗಾಗಿ ಯೋಜನೆ ರೂಪಿಸಬೇಕು.

ಅಂಕಪಟ್ಟಿಗಳ ಖರೀದಿಯನ್ನು ಆಯಾ ವಿವಿಗಳಿಗೆ ಬಿಡಬೇಕು. ಕುಲಪತಿಗಳೇ ವಿವಿಗಳ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ತಕ್ಷಣವೇ ವಿವಿಗಳಿಗೆ ಕುಲಪತಿಗಳನ್ನು ನೇಮಕಾತಿ ಮಾಡಿ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹು¨ªೆಗಳನ್ನು ನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಆರಂಭಿಸಬೇಕೆಂದು ಆಗ್ರಹಿಸಿ ತಹಶೀಲ್ದಾರ್‌ ಕೆ.ನರಸಿಂಹಮೂರ್ತಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಎಬಿವಿಪಿ ಮುಖಂಡರಾದ ಅಖೀಲ್‌, ವಿಜಯಕುಮಾರ್‌, ಬಾಬು, ವಿನೋಧ್‌, ಸಂತೋಷ್‌, ಸ್ನೇಹ, ಮಮತಾ, ಜಾನಕಿ, ಭವ್ಯ, ರಶ್ಮಿ ಇತರರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.