ಮನೆ ಬಾಗಿಲಿಗೆ ಸರ್ಕಾರದ ಸೇವೆ

Team Udayavani, Nov 29, 2020, 1:54 PM IST

ಮನೆ ಬಾಗಿಲಿಗೆ ಸರ್ಕಾರದ ಸೇವೆ

ಚಿಕ್ಕಬಳ್ಳಾಪುರ: ಸಾರ್ವಜನಿಕರಿಗಾಗಿ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳನ್ನು ಪಡೆದುಕೊಳ್ಳಲು ನಾಗರಿಕರು ವಿವಿಧ ಇಲಾಖೆಗಳಿಗೆ ಅಲೆದಾಡುವುದನ್ನು ತಪ್ಪಿಸಲು ಹೋಬಳಿ ಮಟ್ಟದ ಅದಾಲತ್‌ ಹಮ್ಮಿಕೊಳ್ಳಲಾಗಿದ್ದು, ಪ್ರತಿಯೊಬ್ಬ ಅರ್ಹ ಫಲಾನುಭವಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಎಂ.ಬಿ. ಚಿಕ್ಕನರಸಿಂಹಯ್ಯ(ಚಿನ್ನಿ) ಹೇಳಿದರು.

ಶನಿವಾರ ಜಿಲ್ಲಾಡಳಿತ, ಜಿಪಂ ಹಾಗೂ ತಾಲೂಕು ಆಡಳಿತ ತಾಲೂಕಿನ ಮಂಡಿಕಲ್ಲು ಪ್ರೌಢ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ಜಿಲ್ಲಾಡಳಿತದ ನಡೆ ಗ್ರಾಮಗಳಕಡೆ’ ಶೀರ್ಷಿಕೆಯಡಿ ವಿವಿಧ ಇಲಾಖೆಗಳ ಸೇವೆಗಳನ್ನು ಒದಗಿಸಲು ಹೋಬಳಿ ಮಟ್ಟದ ಅದಾಲತ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

20 ದಿನಗಳಲ್ಲಿ ಸೇವೆ: ಜಿಲ್ಲಾ ಉಸ್ತುವಾರಿ ಸಚಿವರ ಆದೇಶದಂತೆ ಜಿಲ್ಲಾಡಳಿತ ಹಾಗೂ ಜಿಪಂ ಸಾರ್ವಜನಿಕರಿಗೆ ನೇರವಾಗಿ ವಿವಿಧಯೋಜನೆಗಳ ಸವಲತ್ತುಗಳನ್ನು ತಲುಪಿಸುವ ಸಲುವಾಗಿ ಹೋಬಳಿ ಮಟ್ಟದಲ್ಲಿ ಅದಾಲತ್‌ ಹಮ್ಮಿಕೊಂಡಿದೆ. ಅರ್ಹ ಫಲಾನುಭವಿಗೆ ಕೇವಲ 20 ದಿನಗಳಲ್ಲಿ ಸೇವೆ ಸಿಗುವಂತೆ ಮಾಡುವುದು ಹಾಗೂ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವುದು ಈ ಕಾರ್ಯ ಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.

ವಿಸ್ತರಿಸುವ ಚಿಂತನೆ: ಜಿಲ್ಲಾಧಿಕಾರಿ ಆರ್‌. ಲತಾ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರ ಚಿಂತನೆಯಂತೆ ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಹೋಬಳಿ ಮಟ್ಟದ ಅದಾಲತ್‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, 22 ದಿನಗಳ ಕಾಲ ಈ ಮಂಡಿಕಲ್ಲು ಹೋಬಳಿ ಯಲ್ಲಿ ಅದಾಲತ್‌ ನಡೆಯಲಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ವಿಸ್ತರಿಸುವ ಚಿಂತನೆ ಯಿದೆ ಎಂದರು. ಜಿಪಂ ಸಿಇಒ ಪಿ. ಶಿವ ಶಂಕರ್‌ ಮಾತನಾಡಿ, ಅದಾಲತ್‌ ಮುಖಾಂತರ ಪರಿಣಾಮಕಾರಿಯಾಗಿ ಎಲ್ಲಾ ಯೋಜನೆ ಗಳನ್ನು ಅನುಷ್ಠಾನಗೊಳಿ ಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್‌ ಸದಸ್ಯರಾದ ಪಿ.ಎನ್‌.ಕೇಶವರೆಡ್ಡಿ ಮಾತನಾಡಿ ದರು. ಕಾರ್ಯಕ್ರಮದಲ್ಲಿ ವಿವಿಧ ಇಲಾ ಖೆಯ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ವಿವರಿಸಿದರು. ನಂತರ ಗಣ್ಯರು ವಿವಿಧ ಫಲಾನುಭವಿಗಳಿಗೆ ಜಾಬ್‌ಕಾರ್ಡ್‌, ವಿಧವಾ ವೇತನಾ, ಮಂಜೂರಾತಿ ಪತ್ರ ವಿತರಿಸಿದರು. ಎಸ್ಪಿ ಮಿಥುನ್‌ ಕುಮಾರ್‌, ಉಪವಿಭಾ ಗಾಧಿ ಕಾರಿ ರಘು ನಂದನ್‌, ಜಿಪಂ ಉಪ ಕಾರ್ಯದರ್ಶಿ ನೋಮೇಶ್‌, ತಹಶೀ ಲ್ದಾರ್‌ ನಾಗ ಪ್ರಶಾಂತ್‌, ರವಿ, ಆರೋಗ್ಯಾಧಿ ಕಾರಿ ಇಂದಿರಾ ಕಬಾಡೆ ಸೇರಿದಂತೆ ಜನಪ್ರತಿ ನಿಧಿಗಳು, ಜಿಲ್ಲಾ ಮಟ್ಟದಅಧಿಕಾರಿಗಳು ಉಪಸ್ಥಿತರಿದ್ದರು.

ಅಧಿಕಾರಿ ಹಾಗೂ ಸಿಬ್ಬಂದಿಗಳು ಗ್ರಾಮಗಳಿಗೆ ಭೇಟಿ ನೀಡಿ ಮನೆ ಮನೆಗಳಿಗೆ ತೆರಳಿ ಆ ಕುಟಂಬದ ಬೇಡಿಕೆಗೆ ಅನುಗುಣವಾಗಿ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುತ್ತಾರೆ. ಅರ್ಹ ಫಲಾನುಭವಿಗೆ ಪರಿಹಾರ ಒದಗಿಸುವಕಾರ್ಯ ಮಾಡುತ್ತಾರೆ. ಗ್ರಾಪಂ ಹಾಗೂ ನಾಡಕಚೇರಿಗಳಲ್ಲೂ ಅರ್ಜಿ ಸ್ವೀಕರಿಸಲಾಗುವುದು. ಆರ್‌.ಲತಾ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.