ಮತದಾರರ ಪಟ್ಟಿಗೆ ಸೇರ್ಪಡೆ
Team Udayavani, Aug 8, 2020, 12:14 PM IST
ಶಿಡ್ಲಘಟ್ಟ: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ-2020ರ ಸಂಬಂಧ ಆ.7 ರಂದು ಜಿಲ್ಲಾದ್ಯಂತ ಕರಡು ಮತದಾರರ ಪಟ್ಟಿಗಳನ್ನು ಆಯಾ ತಾಲೂಕಿನ ಪ್ರಮುಖ ಸ್ಥಳಗಳಲ್ಲಿ ಹಾಗೂ ಎಲ್ಲಾ ಮತ ಕೇಂದ್ರಗಳಲ್ಲಿ ಪ್ರಚುರ ಪಡಿಸಲಾಗುತ್ತಿದೆ.
ಸಾರ್ವಜನಿಕರು ಹಕ್ಕು ಮತ್ತು ಆಕ್ಷೇಪಣೆಗಳನ್ನು ಆಗಸ್ಟ್ 14ರೊಳಗೆ ಸಲ್ಲಿಸಬೇಕೆಂದು ಉಪವಿ ಭಾಗಾ ಧಿಕಾರಿ ಎ.ಎನ್.ರಘುನಂದನ್ ತಿಳಿಸಿದ್ದಾರೆ. ಮತದಾರರ ಹೆಸರು ತಾವು ವಾಸವಿರುವ ಕ್ಷೇತ್ರದ ವ್ಯಾಪ್ತಿಯಲ್ಲಿ ಇರದೆ ಬೇರೆ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ, ಆ ಬಗ್ಗೆ ಆಕ್ಷೇಪಣೆ ಸಲ್ಲಿಸಬಹುದು. ನಗರ ಪ್ರದೇಶದ ಮತದಾರರ ಹೆಸರನ್ನು ಗ್ರಾಮ ಪಂಚಾಯಿತಿಗೆ ತಯಾರಿಸಲಾಗಿರುವ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಮಾತ್ರ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ವಿಧಾನಸಭಾ ಕ್ಷೇತ್ರದಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೇ, ಗ್ರಾಮ ಪಂಚಾಯಿತಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಿದ್ದಲ್ಲಿ ಮಾತ್ರ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದಿದ್ದಾರೆ. ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿದ್ದು, ಗ್ರಾಪಂ ಕರಡು ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಬಿಟ್ಟು ಹೋಗಿದ್ದಲ್ಲಿ ಪರಿಶೀಲಿಸಿ ಕೊಂಡು ಆ.14 ರೊಳಗಾಗಿ ಸಂಬಂಧಪಟ್ಟ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪ ಯೋಗಪಡಿಸಿ ಕೊಂಡು ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ನೋಂದಣಾಧಿಕಾರಿಗಳಿಗೆ, ನಿರ್ದಿಷ್ಟಾಧಿಕಾರಿಗಳಿಗೆ ಸಲ್ಲಿಸ ಬಹುದೆಂದು ಎಸಿ ಎ.ಎನ್.ರಘುನಂದನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ