
ಅಪೌಷ್ಟಿಕತೆ ನಿರ್ಮೂಲನೆಗೆ ಶ್ರಮಿಸಲು ಸಲಹೆ
Team Udayavani, Sep 20, 2020, 3:23 PM IST

ಚಿಕ್ಕಬಳ್ಳಾಪುರ: ರಾಷ್ಟ್ರದಲ್ಲಿ ಪೊಲಿಯೋ ನಿರ್ಮೂಲನೆಯಾದಂತೆ ಅಪೌಷ್ಟಿಕತೆಯೂ ನಿರ್ಮೂಲನೆಯಾಗಬೇಕು. ಆ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ಅಪೌಷ್ಟಿಕತೆ ನಿವಾರಣೆ ಮಾಡಲು ಕೈಜೋಡಿಸಬೇಕಿದೆ ಎಂದು ಪ್ರಗತಿ ಪರ ರೈತ ಎಚ್.ಕೆ ಸುರೇಶ್ ತಿಳಿಸಿದರು.
ಶಿಡ್ಲಘಟ್ಟ ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ, ಜ್ಞಾನ ವಿಕಾಸ ಕೇಂದ್ರದ ವತಿಯಿಂದ ನಡೆದ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಿಳೆಯರು ಮತ್ತು ಮಕ್ಕಳಲ್ಲಿ ರಕ್ತಹೀನತೆ ತಡೆಯಲು ಪೌಷ್ಟಿಕ ಆಹಾರ ಸೇವಿಸಬೇಕು. ತಾಯಿ ಮತ್ತು ಮಗುವಿನ ಉತ್ತಮ ಆರೋಗ್ಯ, ಸ್ವಾಸ್ಥ್ಯ ಸಮಾಜದ ಪ್ರತಿಬಿಂಬವಾಗಿದ್ದು, ಪೌಷ್ಟಿಕ ಆಹಾರ ಸೇವಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕು ಎಂದರು.
ಜ್ಞಾನ ವಿಕಾಸ ಕೇಂದ್ರದ ಸಮನ್ವಯ ಅಧಿಕಾರಿ ಲಕ್ಷ್ಮೀ ಮಾತನಾಡಿ, ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪೋಷಣ್ ಅಭಿಯಾನ ಜಾಥಾ ಮೂಲಕ ಗರ್ಭಿಣಿಯರು, ಮಕ್ಕಳು ಹಾಗೂಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ಕುರಿತು ಜಾಗೃತಿ ಮೂಡಿಸಲಿದ್ದೇವೆ. ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಲ್ಲಿನ ಅಪೌಷ್ಟಿಕತೆ ನಿವಾರಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಪೋಷಣ್ ಅಭಿಯಾನ ಮಾಸಾಚ ರಣೆ ಹಮ್ಮಿಕೊಂಡಿದ್ದು, ಈ ಯೋಜನೆಯ ಪ್ರಯೋಜನ ಅರ್ಹರಿಗೆ ತಲುಪುವಂತಾಗಬೇಕು ಎಂದರು.
ಒಕ್ಕೂಟದ ಅಧ್ಯಕ್ಷೆ ಆರತಿ, ಸುಶೀಲಮ್ಮ, ಜ್ಞಾನ ವಿಕಾಸ ಕೇಂದ್ರದ ಎಲ್ಲಾ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
