ಕೊರೊನಾ ವೈರಸ್‌ ತಡೆಗೆ ಜನ ಜಾಗೃತಿ ಸಭೆ

Team Udayavani, Mar 16, 2020, 3:00 AM IST

corona-chiokka

ಶಿಡ್ಲಘಟ್ಟ: ಜಗತ್ತಿನಲ್ಲಿ ಜನರ ನೆಮ್ಮದಿ ಭಂಗ ತಂದಿರುವ ಕೊರೊನಾ ಸೋಂಕಿನ ಕುರಿತು ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಲು ತಹಶೀಲ್ದಾರ್‌ ಕೆ.ಅರುಂಧತಿ ಅಧ್ಯಕ್ಷತೆಯಲ್ಲಿ ನಾಗರಿಕರ ಹಾಗೂ ಸಂಘ ಸಂಸ್ಥೆಗಳ ಸಭೆ ಆಯೋಜಿಸಲಾಗಿತ್ತು.

ನಗರದ ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳು, ಧಾರ್ಮಿಕ ಮುಖಂಡರು, ಹೋಟೆಲ್‌ ಮಾಲಿಕರು, ರಸ್ತೆ ಬದಿ ವ್ಯಾಪಾರಿಗಳು ಹಾಗೂ ವರ್ತಕರ ಸಂಘದ ಪದಾಧಿಕಾರಿಗಳು ಪಾಲ್ಗೊಂಡು ಸಲಹೆ ಸೂಚನೆ ನೀಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ಮೂರ್ತಿ ಕೊರೊನಾ ವೈರಸ್‌ ನಿಯಂತ್ರಣದ ಬಗ್ಗೆ ಮತ್ತು ಸಾಧಕ ಬಾಧಕಗಳ ಬಗ್ಗೆ ಸಾರ್ವಜನಿಕರೊಂದಿಗೆ ಮುಕ್ತವಾಗಿ ಚರ್ಚಿಸಿ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರ ನೀಡಿ ಧೈರ್ಯ ತುಂಬಿದರು. ಕೊರೊನಾ ಬಗ್ಗೆ ಅನಾವಶ್ಯಕ ಗಾಬರಿ ಬೇಡ. ಇದೊಂದು ಅಪಾಯಕಾರಿ ವೈರಸ್‌ ಆದರೂ ಮುಂಜಾಗ್ರತೆ ವಹಿಸಿ ಸ್ವತ್ಛತೆ ಕಾಪಾಡಿಕೊಂಡು ಬಂದಲ್ಲಿ ರೋಗ ನಿಯಂತ್ರಿಸಬಹುದು ಎಂದರು.

ಆಸ್ಪತ್ರೆಗೆ ದಾಖಲಿಸಿ: ತಾಲೂಕಿನ ಯಾವುದೇ ಭಾಗದಲ್ಲೂ ಕೊರೊನಾ ವೈರಸ್‌ ಲಕ್ಷಣಗಳು ಕಂಡು ಬಂದಿಲ್ಲ. ಈ ಬಗ್ಗೆ ತಾಲೂಕಿನ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆರೋಗ್ಯ ಮತ್ತು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಕ್ತ ಸಲಹೆ ಸೂಚನೆ ನೀಡಿದ್ದು, ತಾಲೂಕಿನ ಯಾವುದೇ ಭಾಗದಲ್ಲಿ ರೋಗ ಲಕ್ಷಣದ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಲಾಗಿದೆ ಎಂದರು.

ಆರೋಗ್ಯ ಇಲಾಖೆ ಸುಪರ್ದಿಗೆ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ 15 ಹಾಸಿಗೆಗಳ ಪ್ರತ್ಯೇಕ ವಾರ್ಡ್‌ ಸಿದ್ಧಪಡಿಸಲಾಗಿದೆ. ಜೊತೆಗೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ನಗರದ ಹೊರ ವಲಯದ ವರದನಾಯಕನಹಳ್ಳಿ ಗೇಟ್‌ ಬಳಿಯ ಬಾಲಾಜಿ ಕಲ್ಯಾಣ ಮಂಟಪದಲ್ಲಿ 15 ಬೆಡ್‌ಗಳ ವಿಶೇಷ ಐಸೊಲೇಷನ್‌ ವಾರ್ಡ್‌ ಪ್ರಾರಂಭಿಸಲು ಸಿದ್ಧತೆ ನಡೆದಿದ್ದು, ಕಲ್ಯಾಣ ಮಂಟಪವನ್ನು ಆರೋಗ್ಯ ಇಲಾಖೆ ಸುಪರ್ದಿಗೆ ತೆಗೆದುಕೊಂಡಿದ್ದು, ಅಗತ್ಯ ಸಿಬ್ಬಂದಿ ಹಾಗೂ ಸಲಕರಣೆಗಳನ್ನು ಕೂಡಲೇ ಸಿದ್ಧಪಡಿಸಲು ಯೋಜನೆ ರೂಪಿಸಿರುವುದಾಗಿ ತಿಳಿಸಿದರು.

ತಹಶೀಲ್ದಾರ್‌ ಕೆ.ಅರುಂದತಿ ಮಾತನಾಡಿ, ಜಿಲ್ಲಾಧಿಕಾರಿಗಳ ಆದೇಶದಂತೆ ವಾರದಸಂತೆ, ಚಿತ್ರ ಮಂದಿರಗಳನ್ನು ಮುಚ್ಚಲು ಕ್ರಮ ಕೈಗೊಳ್ಳಲಾಗಿದೆ. ಗ್ರಾಪಂ ಅಧಿಕಾರಿಗಳು ಮತ್ತು ನಗರಸಭೆಯಲ್ಲಿ ಸ್ವತ್ಛತೆ ಕಾಪಾಡಲು ಈಗಾಗಲೇ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದರು.

ತಾಪಂ ಇಒ ಶಿವಕುಮಾರ್‌ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಾಗವೇಣಿ, ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ವಾಣಿ ಹಾಗೂ ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಸಹಿತ ಇಲಾಖೆಯ ಸಿಬ್ಬಂದಿ ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯಲ್ಲಿ ಜಾಮೀಯಾ ಮಸೀದಿ ಅಧ್ಯಕ್ಷ ಅಲಹಾಜ್‌ ತಾಜ್‌ಪಾಷ, ಕಾರ್ಯದರ್ಶಿ ಹೈದರ್‌ವಲೀ, ಡಾಲ್ಫಿನ್‌ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಶೋಕ, ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಶ್ರೀರಾಮ, ಬಾರ್‌ ಮಾಲೀಕ ಕೃಷ್ಣಪ್ಪ, ವಾಲ್ಕಿàಕಿ ಸಂಘಟನೆಯ ಗಿರೀಶ್‌ ನಾಯಕ, ಪಡಿತರ ವಿತರಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.