ಚಿಕ್ಕಬಳ್ಳಾಪುರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭರ್ಜರಿ ರೋಡ್ ಶೋ

Team Udayavani, Nov 8, 2019, 4:11 PM IST

ಚಿಕ್ಕಬಳ್ಳಾಪುರ: ಜಿಲ್ಲೆಗೆ ಮಂಜೂರಾಗಿರುವ ವೈದ್ಯಕೀಯ ಶಿಕ್ಷಣ ಮಹಾ ವಿದ್ಯಾಲಯ ಶಂಕುಸ್ಥಾಪನೆಗೆ ಆಗಮಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಚಿಕ್ಕಬಳ್ಳಾಪುರದಲ್ಲಿ ಭರ್ಜರಿ ಸ್ವಾಗತ ಸಿಕ್ಕಿದೆ.

ರಾಮನಗರದ ಮಾಗಡಿಯಲ್ಲಿ ಸಿದ್ದಗಂಗಾ ಶ್ರೀಗಳ ಪುತ್ಥಳಿ ಅನಾವರಣ ಕಾರ್ಯಕ್ರಮ ಮುಗಿಸಿ ನೇರವಾಗಿ ಚಿಕ್ಕಬಳ್ಳಾಪುರಕ್ಕೆ ಆಗಮಿಸಿರುವ ಯಡಿಯೂರಪ್ಪ, ನಗರದ ಸರ್.ಎಂ. ವಿಶೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿರು ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಿದರು.

ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಯಡಿಯೂರಪ್ಪ ಅವರು ನಗರದ ಬಿಬಿ ರಸ್ತೆಯಲ್ಲಿ  ರೋಡ್ ಶೋ ನಡೆಸಿದ್ದು ಡಿಸಿಎಂ ಅಶ್ವತ್ಥನಾರಾಯಣ್, ಗೋವಿಂದ ಕಾರಜೋಳ, ಸಂಸದರಾದ ಎಸ್.ಮುನಿಸ್ಚಾಮಿ, ಪಿ.ಸಿ.ಮೋಹನ್, ಅನರ್ಹ ಶಾಸಕ ಡಾ.ಕೆ.ಸುಧಾಕರ್ ಸಾಥ್ ಕೊಟ್ಟಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪಗೆ ಸುಧಾಕರ್ ಅಭಿಮಾನಿಗಳು, ಕಾರ್ಯಕರ್ತರು ಕ್ರೈನ್ ಮೂಲಕ ದ್ರಾಕ್ಷಿ ಲೇಪಿತ ಬೃಹತ್ ಹೂವಿನ ಹಾರ ಹಾಕಿ ಅಭಿನಂದಿಸಲಾಯಿತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ