ಮತಪಟ್ಟಿ ಪರಿಷ್ಕರಣೆ ನ.8ರವರೆಗೂ ವಿಸ್ತರಣೆ: ಡೀಸಿ


Team Udayavani, Oct 17, 2019, 3:00 AM IST

matapatti

ಚಿಕ್ಕಬಳ್ಳಾಪುರ: ಕೇಂದ್ರ ಚುನಾವಣಾ ಆಯೋಗ ಸಮಗ್ರ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ-2020ರ ಸಂಬಂಧ ಅ.15ಕ್ಕೆ ಇದ್ದ ಕೊನೇ ದಿನವನ್ನು ನ.18ವರೆಗೂ ವಿಸ್ತರಿಸಿದ್ದು ದೋಷ ರಹಿತ ಮತ ಪಟ್ಟಿ ಸಿದ್ಧಗೊಳಿಸಬೇಕೆಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಿದ್ದ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 10,17,964 ಮತದಾರರ ಪಟ್ಟಿ ಹೊಂದಿದ್ದು, ಈಗಾಗಲೇ 4,83000 ಮತದಾರ ಪಟ್ಟಿಗಳನ್ನು ಪರಿಶೀಲನೆ ನಡೆಸಲಾಗಿದೆ ಎಂದರು.

ಜ.20ಕ್ಕೆ ಅಂತಿಮ ಮತಪಟ್ಟಿ ಬಿಡುಗಡೆ: ಜಿಲ್ಲೆಯ ಬಾಕಿ ಉಳಿದ ಮತ ಪಟ್ಟಿಗಳ ಪರಿಶೀಲನೆಯನ್ನು ಕಾಲಮಿತಿಯೊಳಗೆ ಪರಿಷ್ಕರಿಸಬೇಕು. ಇದಕ್ಕೆ ವಿವಿಧ ರಾಜಕೀಯ ಪಕ್ಷಗಳು ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ಬೂತ್‌ ಮಟ್ಟದ ಏಜೆಂಟ್‌ಗಳನ್ನು ನೇಮಕ ಮಾಡಿ ಪಟ್ಟಿಗಳ ಪರಿಶೀಲನೆಗೆ ಸಹಕರಿಸಬೇಕು ಎಂದರು.

ನ.25ರೊಳಗೆ ಕರಡು ಮತದಾರರ ಪಟ್ಟಿ ಪರಿಶೀಲಿಸಲಾಗುತ್ತದೆ. ನ.25 ರಿಂದ ಡಿ.24 ರೊಳಗೆ ಆಕ್ಷೇಪಣೆ ಸಲ್ಲಿಸಬಹುದು. 2020 ಜ.10ಕ್ಕೆ ಆಕ್ಷೇಪಣೆ ವಿಲೇವಾರಿ ಮಾಡಿ ಜ.17ಕ್ಕೆ ಪಟ್ಟಿಗಳ ಪೂರಕ ತಯಾರಿಕೆ ಮಾಡಲಾಗುತ್ತದೆ. ಜ.20ಕ್ಕೆ ಪಟ್ಟಿಗಳ ಸಮಗ್ರ ಪರಿಷ್ಕರಣೆ ಮಾಹಿತಿಯನ್ನು ಅಂತಿಮವಾಗಿ ಬಿಡುಗಡೆಗೊಳಿಸಲಾಗುತ್ತದೆ ಎಂದರು.

ಪರಿಶೀಲಿಸಿಕೊಳ್ಳಿ: ಮೊಬೈಲ್‌ನಲ್ಲಿ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಅತ್ಯಂತ ಸುಲಭವಾಗಿ ತಮ್ಮ ಮತದಾರರ ಪಟ್ಟಿ ವಿವರ ಪರಿಶೀಲಿಸಿಕೊಂಡು ಸಂಬಂಧಪಟ್ಟ ದಾಖಲಾತಿಗಳನ್ನು ಆಪ್‌ಲೋಡ್‌ ಮಾಡಿಕೊಳ್ಳಬಹುದು. ಅಲ್ಲದೆ, ಕೇಂದ್ರ ಚುನಾವಣಾ ಆಯೋಗ ಸೃಷ್ಟಿಸಿರುವ ವೈಬ್‌ಸೈಟ್‌ ಮುಖಾಂತರ ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಬಹುದು. ಇದರಲ್ಲಿ ಹೆಸರು, ವಿಳಾಸ, ಭಾವಚಿತ್ರ ಮುಂತಾದ ದಾಖಲೆಗಳ ತಿದ್ದುಪಡಿ, ಸೇರ್ಪಡೆ, ವರ್ಗಾವಣೆ ಮಾಡಿಕೊಳ್ಳಬಹುದು ಎಂದು ತಿಳಿಸಿದರು.

ಸ್ಮಾರ್ಟ್‌ಫೋನ್‌, ಮೊಬೈಲ್‌ ಸಂಖ್ಯೆ ಇಲ್ಲದಿರುವವರು ಜಿಲ್ಲೆಯಲ್ಲಿ 105 ಸಾಮಾನ್ಯ ಸೇವೆ ಕೇಂದ್ರ ನಿರ್ಮಿಸಲಾಗಿದ್ದು, ಇದರಲ್ಲಿ ಬೆಂಗಳೂರು ಓನ್‌, ಕರ್ನಾಟಕ ಓನ್‌, ಬಾಪೂಜಿ ಹಾಗೂ ಆಟಲ್‌ ಜೀ ಜನಸ್ನೇಹಿ ಸೇರಿಕೊಳ್ಳುತ್ತವೆ. ಗ್ರಾಪಂ ಹಾಗೂ ಹೋಬಳಿ ಕಚೇರಿಗಳಲ್ಲಿರುವ ಸಾಮಾನ್ಯ ಕೇಂದ್ರಗಳಿಗೆ ಭೇಟಿ ನೀಡಿ ಆಧಾರ್‌ ಕಾರ್ಡ್‌, ಚಾಲನಾ ಪರವಾನಗಿ, ವಿದ್ಯುತ್‌ ಬಿಲ್‌, ಪಡಿತರ ಚೀಟಿ ದಾಖಲೆಗಳೊಂದಿಗೆ ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಬಹುದು ಎಂದರು.

ಮತ ಪಟ್ಟಿ ಪರಿಷ್ಕರಣೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಆರತಿ ಆನಂದ್‌, ಉಪವಿಭಾಗಾಧಿಕಾರಿ ಎ.ಎನ್‌.ರಘುನಂದನ್‌, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ಲಕ್ಷ್ಮೀನಾರಾಯಣರೆಡ್ಡಿ, ತಹಶೀಲ್ದಾರ್‌ ಕೆ.ನರಸಿಂಹಮೂರ್ತಿ ಇದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.