ಚಿಕ್ಕಬಳ್ಳಾಪುರ: 17 ಶಾಲೆಗೆ ಅಭಿವೃದ್ಧಿ ಭಾಗ್ಯ
ಶಾಸಕರಕ್ಷೇತ್ರಾಭಿವೃದ್ಧಿ ನಿಧಿಯಿಂದ ಅಭಿವೃದ್ಧಿ, ನೆಲಕಚ್ಚಿದ ಶಾಲೆ ಅಭಿವೃದ್ಧಿಗೊಳಿಸಿ ಅಗತ್ಯ ಮೂಲ ಸೌಕರ್ಯ
Team Udayavani, Dec 8, 2020, 2:48 PM IST
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಸರ್ಕಾರಿ ಕನ್ನಡ ಶಾಲೆಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದ್ದು ಅದರಲ್ಲಿ ಪ್ರಮುಖವಾಗಿ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿ ಯಿಂದ ಶಾಲೆ ಅಭಿವೃದ್ಧಿಗೆ ಳಿಸುವ ಯೋಜನೆ ಕೈಗೆತ್ತಿಕೊಂಡಿದೆ.
ಚಿಕ್ಕಬಳ್ಳಾಪುರಜಿಲ್ಲೆಯ ಉಸ್ತುವಾರಿ ಸಚಿವಡಾ.ಕೆ. ಸುಧಾಕರ್ ಅವರು 5 ಶಾಲೆ ಹಾಗೂ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳ ಶಾಸಕರು ತಲಾ 03ಶಾಲೆ ದತ್ತು ತೆಗೆದುಕೊಂಡಿದ್ದು ಅದನ್ನು ತಮ್ಮ ಕ್ಷೇತ್ರಾಭಿವೃದ್ಧಿ ನಿಧಿಯಿಂದ ಅಭಿವೃದ್ಧಿಗೊಳಿಸಲು ಅಂದಾಜು ಪಟ್ಟಿ ಸಿದ್ಧಪಡಿಸಿ ಸರ್ಕಾರಕ್ಕೆ ಕಳುಹಿಸಿಕೊಟ್ಟಿದ್ದಾರೆ. ಇದರಿಂದ ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ಅಭಿವೃದ್ಧಿ ಭಾಗ್ಯ ಒದಗಿ ಬಂದಂತಾಗಿದೆ.
50 ಶಾಲೆ-ಅಂಗನವಾಡಿ ಕೇಂದ್ರ ಅಭಿವೃದ್ಧಿ: ರಾಜ್ಯದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ ಸ್ಥಾನ ಪಡೆಯುವ ಮೂಲಕ ಹೊಸ ಇತಿಹಾಸ ಸೃಷ್ಟಿ ಮಾಡಿತು. ಹೀಗಾಗಿ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಶೈಕ್ಷಣಿಕ ಕೇಂದ್ರವನ್ನಾಗಿಸಲು ಯೋಜನೆ ಸಿದ್ಧಪಡಿಸಿ ಅನುಷ್ಠಾನಗೊಳಿಸುವ ಹಂತದಲ್ಲಿದೆ. ಈ ಹಿಂದೆ ಚಿಕ್ಕ ಬಳ್ಳಾಪುರ ಜಿಪಂ ಸಿಇಒ ಆಗಿ ಕರ್ತವ್ಯ ನಿರ್ವ ಹಿಸಿದ ಬಿ.ಫೌಝಿಯಾ ತರುನುಮ್ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯ ಸುಮಾರು50 ಶಾಲೆ ಮತ್ತುಅಂಗನವಾಡಿ ಕೇಂದ್ರಗಳನ್ನು ಮಾದರಿಯಾಗಿ ಅಭಿವೃದ್ಧಿಗೊಳಿ ಸಲು ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.
ಹಾಗೆಯೇ, ಜಿಲ್ಲೆಯ ಮುದ್ದೇನಹಳ್ಳಿಯ ಸರ್ಕಾರಿ ಪ್ರೌಢಶಾಲೆಯನ್ನುಮಾದರಿಯಾಗಿ ಅಭಿವೃದ್ಧಿಗೊಳಿಸಿ ರಾಜ್ಯದ ಗಮನ ಸೆಳೆಯುವಂತೆ ಮಾಡಿದ್ದು ವಿಶೇಷ.ಜಿಲ್ಲೆಯ ಸರ್ಕಾರಿ ಶಾಲೆಗಳನ್ನು ದಾನಿಗಳನೆರವಿನೊಂದಿಗೆ ಅಭಿವೃದ್ಧಿಗೊಳಿಸುವ ಪ್ರಯತ್ನ ಮುಂದುವರಿದಿದ್ದು ಇದೀಗ ಸರ್ಕಾರ ಶಾಸಕರುಮತ್ತು ಸಚಿವರ ಮೂಲಕ ಸರ್ಕಾರಿ ಕನ್ನಡ ಶಾಲೆ ದತ್ತು ಪಡೆದು ಅಭಿವೃದ್ಧಿಗೊಳಿಸಲು ಮುಂದಾಗಿರುವುದು ಉತ್ತಮ ಕಾರ್ಯ ಎಂದು ತಿಳಿಸಿದರು.
ಜಿಲ್ಲೆಯ ಬಹುತೇಕ ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಬಂದ್ ಮಾಡಲಾಗಿದೆ. ಶಾಲೆಗಳು ಆರಂಭಗೊಳ್ಳುವ ಮುನ್ನ ಸಕಲ ಸೌಲಭ್ಯ ಒದಗಿಸಿವೆ. ಈ ನಿಟ್ಟಿನಲ್ಲಿ ದತ್ತುಕಾರ್ಯಕ್ರಮ ಯಶಸ್ವಿಯಾಗಲಿದೆ ಎಂಬ ಆಶಾ ಭಾವನೆ ಪೋಷಕರಲ್ಲಿ ಮೂಡಿದೆ. ಸರ್ಕಾರಿ ಶಾಲೆಗಳಿಗೆ ಹೊಸ ರೂಪ: ಸಾಮಾನ್ಯವಾಗಿ ಸರ್ಕಾರಿ ಶಾಲೆಗಳಲ್ಲಿ ಮೂಲಭೂತಸೌಕರ್ಯಗಳ ಕೊರತೆ ಎದ್ದು ಕಾಣುತ್ತದೆ. ಜತೆಗೆಗುಣಮಟ್ಟದ ಶಿಕ್ಷಣ ಲಭ್ಯವಿಲ್ಲ. ವಿಶೇಷವಾಗಿ ಕಲಿಕೆಗೆ ಪೂರಕ ವಾತಾವರಣ ಅಲ್ಲಿರುವುದಿಲ್ಲ ಎಂಬ ದೂರು ಸರ್ವೇ ಸಾಮಾನ್ಯವಾಗಿತ್ತು. ಆದರೆ, ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಶಿಕ್ಷಕರ ಶ್ರಮದಿಂದ ಸರ್ಕಾರಿ ಶಾಲೆಗಳೂ ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲ ಎಂಬುದನ್ನುಸಾಬೀತು ಪಡಿಸಲು ಮುಂದಾಗಿದ್ದಾರೆ. ಇನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆ ಉತ್ತಮ ಸಾಧನೆಮಾಡಿದ ಬಳಿಕ ಸರ್ಕಾರಿ ಶಾಲೆಗಳಿಗೆ ಒಂದು ರೀತಿಯ ಹೊಸ ರೂಪ ಬಂದಂತಾಗಿದೆ.
ಶಾಸಕರು ದತ್ತು ತೆಗೆದುಕೊಂಡ ಜಿಲ್ಲೆ ಶಾಲೆಗಳ ವಿವರ : ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ಸಚಿವ ಡಾ ಕೆ.ಸುಧಾಕರ್ ಅವರು ತಮ್ಮ ಕ್ಷೇತ್ರ ವ್ಯಾಪ್ತಿಗೆ ಬರುವ ಪೆರೇಸಂದ್ರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಗೌರಿಬಿದನೂರು ತಾಲೂಕು ಮಂಚೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ದಿಬ್ಬೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗಂಗರೆಕಾಲುವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಮಂಡಿಕಲ್ ಕರ್ನಾಟಕ ಪಬ್ಲಿಕ್ ಶಾಲೆಯನ್ನು ದತ್ತು ಪಡೆದಿದ್ದಾರೆ. ಈ ಶಾಲೆಗಳಲ್ಲಿ ಹೊಸ ಕೊಠಡಿಗಳ ನಿರ್ಮಾಣಶಾಲೆಗಳಕೊಠಡಿಗಳ ದುರಸ್ತಿ ಮೂಲಭೂತ ಸೌಲಭ್ಯ ಕಲ್ಪಿಸಲು ಒತ್ತು ನೀಡಲಾಗಿದೆ. ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇ-ತಿಮ್ಮಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಶೆಟ್ಟಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆ, ಶಿಡ್ಲಘಟ್ಟದ ಕೋಟೆ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ತೆಗೆದು ಕೊಳ್ಳಲಾಗಿದೆ. ಅದೇ ರೀತಿ ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ ಕುರುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೇಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಗೌರಿಬಿದನೂರು ಕೋಟೆ ಕರ್ನಾಟಕ ಪಬ್ಲಿಕ್ ಶಾಲೆಯನ್ನು ದತ್ತು ತೆಗೆದುಕೊಳ್ಳಲಾಗಿದೆ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿಗೂಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗುಡಿಬಂಡೆಯ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ಬಾಗೇಪಲ್ಲಿಯ ಸರ್ಕಾರಿ ಕನ್ನಡ ಮಾದರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ, ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಬಟ್ಲಹಳ್ಳಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಆನೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕೈವಾರದ ಕರ್ನಾಟಕ ಪಬ್ಲಿಕ್ ಶಾಲೆ ದತ್ತು ತೆಗೆದುಕೊಳ್ಳಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರು ತಮ್ಮಕ್ಷೇತ್ರಾಭಿವೃದ್ಧಿ ನಿಧಿಯಿಂದ ಸರ್ಕಾರಿಶಾಲೆ ದತ್ತು ಪಡೆದು ಅಭಿವೃದ್ಧಿ ಗೊಳಿಸಲು ಮುಂದಾಗಿದ್ದಾರೆ. ಇದರಿಂದ ಮಕ್ಕಳಕಲಿಕೆಗೆ ಪ್ರೋತ್ಸಾಹ ಮತ್ತು ಉತ್ತೇಜನ ನೀಡಿದಂತಾಗುತ್ತದೆ. – ನಾಗೇಶ್, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ
ಶಿಡ್ಲಘಟ್ಟದ ಸರ್ಕಾರಿ ಬಾಲಕಿಯರ ಶಾಲೆಯನ್ನು ಶಾಸಕರು ದತ್ತು ಪಡೆದಿರುವುದು ಸ್ವಾಗತಾರ್ಹ. ಶಿಥಿಲ ವ್ಯವಸ್ಥೆಯಲ್ಲಿರುವ ಕೊಠಡಿ ಅಭಿವೃದ್ಧಿಗೊಳಿಸಿ ಶಾಲೆ ಒಳಗೆ ಅಕ್ರಮ ಪ್ರವೇಶವನ್ನು ತಡೆಗಟ್ಟಲುಕಾಂಪೌಂಡ್ ಗೋಡೆ ಹೆಚ್ಚಿಸಲುಕ್ರಮ ಕೈಗೊಳ್ಳಬೇಕಾಗಿದೆ. – ವೆಂಕಟೇಶ್, ಅಧ್ಯಕ್ಷರು, ಶಾಲಾ ಅಭಿವೃದ್ಧಿ ಸಮಿತಿ ಶಿಡ್ಲಘಟ್ಟ
ಎಂ.ಎ.ತಮೀಮ್ ಪಾಷ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444