Glass house: ಕೆರೆಯಂಗಳದಲ್ಲಿ ಗಾಜಿನ ಮನೆ ಉಳಿಸಿಕೊಳ್ಳಲು ಕಸರತ್ತು

Team Udayavani, Oct 26, 2023, 4:11 PM IST

Glass house: ಕೆರೆಯಂಗಳದಲ್ಲಿ ಗಾಜಿನ ಮನೆ ಉಳಿಸಿಕೊಳ್ಳಲು ಕಸರತ್ತು

ಚಿಕ್ಕಬಳ್ಳಾಪುರ: ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಗೆ ಅಂಟಿಕೊಂಡಿರುವ ಅಮಾನಿ ಗೋಪಾಲಕೃಷ್ಣ ಕೆರೆಯಲ್ಲಿ ಬರೋಬ್ಬರಿ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿ ಬಳಕೆಯಾಗದೇ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಗಾಜಿನ ಮನೆಯನ್ನು ಕೆರೆಯಂಗಳದಲ್ಲಿಯೆ ಉಳಿಸಿಕೊಳ್ಳಲು ಜಿಲ್ಲಾಡಳಿತ ಕರಸತ್ತು ನಡೆಸುತ್ತಿದೆ.

ಕಳೆದ 2019 ರಲ್ಲಿ ಜಿಲ್ಲೆಗೆ ಭವ್ಯವಾದ ಗಾಜಿನ ಮನೆ ನಿರ್ಮಾಣ ಆಗಬೇಕೆಂಬ ಪರಿಕಲ್ಪನೆಯೊಂದಿಗೆ ನಗರದ ಅಮಾನಿ ಗೋಪಾಲಕೃಷ್ಣ ಕೆರೆಯಲ್ಲಿ ಸುಮಾರು 6,725 ಚದರ ಅಡಿಗಳಲ್ಲಿ ಲೋಕೋಪಯೋಗಿ ಇಲಾಖೆ ನಿರ್ಮಿಸಿರುವ ಗಾಜಿನ ಮನೆ ಬರೋಬ್ಬರಿ 4 ವರ್ಷದಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದೆ.

ನೀರು ನಿಂತು ಗಾಜಿನ ಮನೆ ಮೂಲೆಗುಂಪು: ಗಾಜಿನ ಮನೆ ನಿರ್ಮಾಣದ ಸಂದರ್ಭದಲ್ಲಿ ಅಮಾನಿ ಗೋಪಾಲಕೃಷ್ಣ ಕೆರೆಯಲ್ಲಿ ಹನಿ ನೀರು ಇರಲಿಲ್ಲ. ಕೆರೆಯಂಗಳದಲ್ಲಿ ಗಾಜಿನ ಮನೆ ನಿರ್ಮಾಣ ಮಾಡಿ ಬಟಾನಿಕಲ್‌ ಪಾಕ್‌ ನಿರ್ಮಿಸಿದರೆ ಹೆಚ್ಚು ಪ್ರವಾಸಿಗರನ್ನು ಸೆಳೆಯುವುದರ ಜತೆಗೆ ನಗರ ವಾಸಿಗಳ ವಾಯು ವಿಹಾರ ಜತೆಗೆ ಸರ್ಕಾರಿ ಸಭೆ, ಸಮಾರಂಭ, ಫ‌ಲಪುಷ್ಪ ಪ್ರದರ್ಶನ ಮತ್ತಿತರ ಕಾರ್ಯಕ್ರಮಗಳ ಆಯೋಜನೆಗೆ ಸೂಕ್ತವಾಗಿರುತ್ತದೆಂದು ಹೇಳಿ ಆಗ 3.25 ಕೋಟಿ ರೂ.ವೆಚ್ಚದಲ್ಲಿ ಗಾಜಿನ ಮನೆ ತಲೆ ಎತ್ತಿತ್ತು. ಆದರೆ ನಿರ್ಮಾಗೊಂಡ ಕೇಲವೇ ತಿಂಗಳಿಗೆ ಜಿಲ್ಲೆಗೆ ಸರ್ಕಾರ ಹರಿಸಿದ ಹೆಬ್ಟಾಳ ನಾಗವಾರ ಸಂಸ್ಕರಿಸಿದ ತ್ಯಾಜ್ಯ ನೀರು ಸಂಗ್ರಹಕ್ಕೆ ಅಮಾನಿ ಗೋಪಾಲಕೃಷ್ಣ ಕರೆಯನ್ನು ಬಳಸಿಕೊಂಡ ಪರಿಣಾಮ ಗಾಜಿನ ಮನೆ ಸುತ್ತಲೂ ತ್ಯಾಜ್ಯ ನೀರು ಸಂಗ್ರಹವಾಗಿ ಗಾಜಿನ ಮನೆ ಬಳಕೆಗೆ ಯೋಗ್ಯವಾಗದೇ ಹಲವು ವರ್ಷಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದೆ.

ತಜ್ಞರ ಅಭಿಪ್ರಾಯ ಕೇಳಿರುವ ಜಿಲ್ಲಾಡಳಿತ: ಗಾಜಿನ ಮನೆಯನ್ನು ಸಾರ್ವಜನಿಕ ಹಿತಾಸಕ್ತಿ ಹಿನ್ನಲೆಯಲ್ಲಿ ಸಾರ್ವಜನಿಕರ ಬಳಕೆಗೆ ಮುಕ್ತ ಮಾಡಲು ಜಿಲ್ಲಾಡಳಿತ ಚಿಂತನೆ ನಡೆಸಿದ್ದು, ವಿಶೇಷವಾಗಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಾ.ಎಂ.ಸಿ.ಸುಧಾಕರ್‌, ಗಾಜಿ ಮನೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸಿ ಸಾರ್ವಜನಿಕರಿಗೆ ಬಳಸುವ ಯೋಜನೆ ರೂಪಿಸಿದ್ದಾರೆ. ಹೀಗಾಗಿ ಸದ್ಯದಲೇ 4 ವರ್ಷದಿಂದ ಕಾಮಗಾರಿ ಮುಗಿದರೂ ನೆನಗುದಿಗೆ ಬಿದ್ದಿರುವ ಗಾಜಿನ ಮನೆ ಕೇಲವೇ ತಿಂಗಳಲ್ಲಿ ಸಾರ್ವಜನಿಕರು ಬಳಕೆಗೆ ಲಭ್ಯವಾಗುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ವಹಿಸಲಿದೆ.

ಇದರ ಸಂಬಂಧ ನಿರ್ಮಾಣಗೊಂಣಡಿರುವ ಗಾಜಿನ ಮನೆ ಬಳಕೆ ಬಗ್ಗೆ ತಜ್ಞರಿಂದ ಸಾಧ್ಯತಾ ವರದಿ ಕೇಳಿದ್ದು, ವರದಿ ಕೈ ಸೇರಿದ ಬಳಿಕ ಗಾಜಿನ ಮನೆ ಸೇವೆಗೆ ಸಿಗಲಿದೆ. ಕೆರೆಯಂಗಳದಲ್ಲಿ ಖಾಸಗಿ ಹಾಗೂ ವಾಣಿಜ್ಯ ಕಟ್ಟಡ ಇಲ್ಲದ ಕಾರಣ ಗಾಜಿನ ಮನೆಯನ್ನು ಕೆರೆಯಂಗಳದಲ್ಲಿ ಉಳಿಸಿಕೊಳ್ಳಲು ಜಿಲ್ಲಾಡಳಿತ ಯೋಜನೆ ರೂಪಿಸಿದೆಂದು ಲೋಕೋಪಯೋಗಿ ಇಲಾಖೆ ಅಧಿಕಾರಿಯೊಬ್ಬರು ಉದಯವಾಣಿಗೆ ತಿಳಿಸಿದರು. ●ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.