ಚಿಕ್ಕಬಳ್ಳಾಪುರ ಲಾಕ್ ಡೌನ್: ರಸ್ತೆಗಿಳಿದ ವಾಹನ ಸವಾರರಿಗೆ ಪೊಲೀಸ್ ಲಾಠಿ ರುಚಿ

Team Udayavani, Mar 24, 2020, 3:43 PM IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ‌ ಕೋವಿಡ್-19 ವೈರಸ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ ಲಾಕ್ ಡೌನ್ ಗೆ ಜನರಿಂದ ನಿರೀಕ್ಷಿತ ಸ್ಪಂದನೆ ಸಿಗುತ್ತಿಲ್ಲ.

ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕರು ತರಕಾರಿ, ಹೂ, ಇತರ ಸಾಮಾಗ್ರಿಗಳ ಖರೀದಿಗೆ ಮುಂದಾಗಿದ್ದಾರೆ.

ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ‌ಎಂದಿನಂತೆ ವಹಿವಾಟು ನಡೆಯುತ್ತಿತ್ತು. ಪೊಲೀಸರು ಅಲ್ಲಲ್ಲಿ ಇದ್ದು ಜನರ ದಟ್ಟಣೆ ನಿಯಂತ್ರಣಕ್ಕೆ‌ ಹರಸಾಹಸ ಪಡುವಂತಾಗಿದೆ.

ಲಾಕ್ ಡೌನ್ ದಿಕ್ಕರಿಸಿ ರಸ್ತೆಗೆ ಇಳಿದ ವಾಹನ ಸವಾರರಿಗೆ ಪೊಲೀಸರು‌ ಲಾಠಿ‌ ರುಚಿ ತೋರಿಸುವ ಮೂಲಕ ಬುದ್ದಿವಾದ ಹೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನ ಸೆಕ್ಷನ್ 144 ಜಾರಿಯಲ್ಲಿ ‌ಇದ್ದರೂ ಗುಂಪು ಗುಂಪುಗಳಾಗಿ ಅಗತ್ಯ ವಸ್ತುಗಳ ಖರೀದಿಗೆ ಮುಗಿ ಬಿದ್ದಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ