ಚಿಕ್ಕಬಳ್ಳಾಪುರ: 169 ಆರ್‌ಟಿಇ ಸೀಟು

Team Udayavani, Jun 12, 2020, 7:17 AM IST

rte avakasha

ಚಿಕ್ಕಬಳ್ಳಾಪುರ: ರಾಜ್ಯದ ಪ್ರತಿಷ್ಠಿತ ಶಾಲೆಗಳಲ್ಲಿ ಬಡ ಮಕ್ಕಳಿಗೆ ಪ್ರವೇಶಾವಕಾಶ ಕಲ್ಪಿಸುವ ದಿಸೆಯಲ್ಲಿ ಪ್ರತಿ ವರ್ಷ ಆರ್‌ಟಿಇ ಮುಖಾಂತರ ಭರ್ತಿ ಮಾಡುವ ಸೀಟುಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿತಗೊಳ್ಳುತ್ತಿದ್ದು, ಈ ವರ್ಷ ಜಿಲ್ಲೆಗೆ 44 ಶಾಲೆಗಳಲ್ಲಿ ಕೇವಲ 169 ಸೀಟು ಭರ್ತಿಗೆ ಶಿಕ್ಷಣ ಇಲಾಖೆ ಅವಕಾಶ ಕಲ್ಪಿಸಿದೆ. ರಾಜ್ಯದಲ್ಲಿ ಕೋವಿಡ್‌ 19 ಲಾಕ್‌ಡೌನ್‌ ಪರಿಣಾಮ ಈ ವರ್ಷ ಯಾವ ತಿಂಗಳಿಗೆ ಶೈಕ್ಷಣಿಕ ವರ್ಷ ಆರಂಭಿಸಬೇಕೆಂದು ಶಿಕ್ಷಣ ಇಲಾಖೆ ಗೊಂದಲ  ದಲ್ಲಿರುವಾಗಲೇ ಆರ್‌ಟಿಇ ಸೀಟು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ದೊರೆ  ತಿದ್ದು, ಕಳೆದ ಬುಧವಾರದಿಂದಲೇ ಪೋಷಕರು ಆರ್‌ಟಿಇ ಸೀಟು ಸಿಗುವ ಮಹತ್ವಕಾಂಕ್ಷೆ ಹೊತ್ತು ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.

42 ಸೀಟು ಕಡಿತ: ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಿಲ್ಲೆಯಲ್ಲಿ ಬರೋಬ್ಬರಿ 42 ಆರ್‌ ಟಿಇ ಸೀಟುಗಳು ಕಡಿತವಾಗಿದೆ. 2019-20ನೇ ಸಾಲಿನಲ್ಲಿ ಜಿಲ್ಲೆಗೆ ಒಟ್ಟು 211 ಆರ್‌ಟಿಇ ಸೀಟುಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದ ಶಿಕ್ಷಣ ಇಲಾಖೆ ಈ ವರ್ಷ ಒಟ್ಟು  169 ಸೀಟುಗಳಿಗೆ ಮಾತ್ರ ಅವಕಾಶ ಕಲ್ಪಿಸಿದ್ದು ಜಿಲ್ಲೆಯ ಒಟ್ಟು 44 ಖಾಸಗಿ ಶಾಲೆಗಳಲ್ಲಿ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಿದೆ.

ಭಾರೀ ಸಂಖ್ಯೆಯಲ್ಲಿ ಕಡಿತ: ಹಿಂದಿನ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಸಿಎಂ ಆಗಿದ್ದ  ಕುಮಾರಸ್ವಾಮಿ ಆರ್‌ಟಿಇ ಮಾರ್ಗಸೂಚಿಗಳಿಗೆ ಸರ್ಜರಿ ಮಾಡಿ ಸರ್ಕಾರಿ ಶಾಲೆಗಳನ್ನು ಉಳಿಸುವ ದಿಸೆಯಲ್ಲಿ ಆರ್‌ಟಿಇ ಸೀಟುಗಳ ಸಂಖ್ಯೆ ಲಕ್ಷಾಂತರ ಸಂಖ್ಯೆಯಲ್ಲಿ ಕಡಿತಗೊಳಿಸಿದ ಪರಿಣಾಮ ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿ  ಆರ್‌ಟಿಇ ಸೀಟು ಭಾರೀ ಪ್ರಮಾಣದಲ್ಲಿ ಕುಸಿದಿದೆ. 2018-19 ರಲ್ಲಿ ಜಿಲ್ಲೆಗೆ ಒಟ್ಟು 2,750 ಸೀಟುಗಳು ಆರ್‌ಟಿಇನಡಿ ಲಭ್ಯವಾಗಿದ್ದವು. 2019-20ನೇ ಸಾಲಿನಲ್ಲಿ 211 ಸೀಟುಗಳು ಮಾತ್ರ ಹಂಚಿಕೆ ಆಗಿದ್ದವು. ಈ ವರ್ಷ ಬರೀ 169  ಸೀಟುಗಳು ನಿಗದಿಯಾಗಿವೆ.

ಪೋಷಕರಲ್ಲಿ ನಿರಾಶೆ: ವರ್ಷದಿಂದ ವರ್ಷಕ್ಕೆ ಸರ್ಕಾರ ಆರ್‌ಟಿಇ ಸೀಟುಗಳ ಸಂಖ್ಯೆ ಕಡಿಮೆಗೊಳಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಮುಂದಾಗಿರುವುದು ಒಂದೆಡೆ ಸಮಾಧಾನ ತಂದರೂ  ತಮ್ಮ ಮಕ್ಕಳನ್ನು ಪ್ರತಿಷ್ಠಿತ ಶಾಲೆಗಳಲ್ಲಿ ಆರ್‌ಟಿಇ ಮೂಲಕ ಓದಿಸಬೇಕೆಂಬ ಹಂಬಲ ಹೊಂದಿದ್ದ ಬಡ ವಿದ್ಯಾರ್ಥಿಗಳ ಪೋಷಕರಲ್ಲಿ ಸಹಜವಾಗಿಯೇ ಸೀಟು ಕಡಿತ ತೀವ್ರ ನಿರಾಶೆ ಮೂಡಿಸಿದೆ.

ಜಿಲ್ಲೆಗೆ ಈ ವರ್ಷ ಆರ್‌ಟಿಇನಡಿ ಒಟ್ಟು 44 ಶಾಲೆಗಳಲ್ಲಿ 169 ಸೀಟುಗಳ ಭರ್ತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ. ಇಲಾಖೆ ಮಾರ್ಗಸೂಚಿಯಂತೆ ಸೀಟು ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಅರ್ಜಿ ಸಲ್ಲಿಕೆ ಕಾರ್ಯ  ಈಗಾಗಲೇ ಶುರುವಾಗಿದೆ. ಜೂನ್‌ 22ರ ವರೆಗೂ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ.
-ಎಸ್‌.ಜಿ.ನಾಗೇಶ್‌, ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.