Chikkaballapur: ಜಿಲ್ಲೆಯಲ್ಲಿ ಬಾರ್‌ಗಳಾದ ಚಿಲ್ಲರೆ ಅಂಗಡಿಗಳು!

Team Udayavani, Oct 9, 2023, 5:51 PM IST

tdy-18

ಚಿಕ್ಕಬಳ್ಳಾಪುರ: ಗ್ರಾಪಂಗಳ ವ್ಯಾಪ್ತಿಯಲ್ಲಿ ಮದ್ಯದಂಗಡಿಗಳನ್ನು ತೆರೆಯುವ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಒಂದಡೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದರೂ, ಮತ್ತೂಂದಡೆ ಜಿಲ್ಲಾದ್ಯಂತ ತೀವ್ರ ಬರಗಾಲದ ನಡುವೆಯು ಅಕ್ರಮ ಮದ್ಯ ಮಾರಾಟ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ.

ಹೌದು, ಅಬಕಾರಿ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಪ್ರಸಕ್ತ ವರ್ಷದ ಏಪ್ರಿಲ್‌ನಿಂದ ಆಗಸ್ಟ್‌ ತಿಂಗಳ ವರೆಗೂ ಕೇವಲ 5 ತಿಂಗಳಲ್ಲಿ ಜಿಲ್ಲೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಅಕ್ರಮ ಮದ್ಯವನ್ನು ಅಬಕಾರಿ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದು ಬರೋಬ್ಬರಿ 1,195 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಆಂಧ್ರದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯಲ್ಲಿ ನಿತ್ಯ ಅಕ್ರಮ ಮದ್ಯ ಮಾರಾಟ ಪ್ರಕರಣಗಳು ನಡೆಯುತ್ತಿದ್ದು, ಗ್ರಾಮೀಣ ಭಾಗದ ಚಿಲ್ಲರೆ ಅಂಗಡಿಗಳೇ ಅಕ್ರಮವಾಗಿ ಮದ್ಯ ಮಾರಾಟದ ಬಾರ್‌ಗಳಾಗಿ ಪರಿವರ್ತನೆಗೊಂಡು ಗ್ರಾಮೀಣ ಭಾಗದ ಜನರಲ್ಲಿ ಮದ್ಯದ ಕಿಕ್‌ ಹೆಚ್ಚಿಸುವಲ್ಲಿ ನಿರತ ವಾಗಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮೀಣ ಭಾಗದ ಕೂಲಿ ಕಾರ್ಮಿಕರನ್ನೆ ಗುರಿಯಾಗಿಸಿಕೊಂಡು ಚಿಲ್ಲರೆ ಅಂಗಡಿಗಳಿಗೆ ನಗರ ಭಾಗದಿಂದ ಭರಪೂರ ಅಕ್ರಮ ಮದ್ಯ ಪೂರೈಸಿ ಹೆಚ್ಚಿನ ಬೆಲೆಗೆ ಮಾರಾಟ ಪ್ರಕರಣಗಳು ಹೆಚ್ಚಾಗಿದ್ದರೂ ಹೇಳ್ಳೋವರು ಕೇಳ್ಳೋವರೇ ಇಲ್ಲವಾಗಿದೆ.

ಪೊಲೀಸ್‌ ಠಾಣೆಗಳಲ್ಲಿ ನಿತ್ಯ ಪ್ರಕರಣ: ಅಬಕಾರಿ ಇಲಾಖೆ ಅಧಿಕಾರಿಗಳೇ ಅಕ್ರಮ ಮದ್ಯದ ವಿರುದ್ಧ ಸಾವಿರಾರು ಪ್ರಕರಣ ಗಳನ್ನು ದಾಖಲಿಸಿ ಲಕ್ಷಾಂತರ ರೂ. ಮೌಲ್ಯದ ಲಕ್ಷಾಂತರ ಲೀಟರ್‌ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಇದೇ ರೀತಿ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ನಿತ್ಯ ಅಕ್ರಮ ಮದ್ಯ ಮಾರಾಟ ಪ್ರಕರಣಗಳು ದಾಖಲಾಗು ತ್ತಿದ್ದು, ನಿತ್ಯ ಒಂದಲ್ಲ ಒಂದು ಠಾಣೆಯಲ್ಲಿ ಅಕ್ರಮ ಮದ್ಯ ಮಾರಾಟದ ದೂರುಗಳು ದಾಖಲಾಗುತ್ತಿದ್ದರೂ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಮಾತ್ರ ಅಕ್ರಮ ಮದ್ಯ ಸಾಗಾಟ, ಮಾರಾಟ ನಿಲ್ಲುತ್ತಿಲ್ಲ. ಒಟ್ಟಿನಲ್ಲಿ ಜಿಲ್ಲೆಯಲ್ಲಿ ತೀವ್ರ ಬರಗಾಲ ಇದ್ದು ಕುಡಿಯುವ ನೀರಿನ ಸಮಸ್ಯೆ ಹಲವು ಗ್ರಾಮಗಳನ್ನು ಬಾಧಿಸುತ್ತಿದ್ದರೂ, ಜಿಲ್ಲೆಯಲ್ಲಿ ಮಾತ್ರ ಮದ್ಯದ ಕಿಕ್‌ಗೆ ಮಾತ್ರ ಕಡಿವಾಣ ಇಲ್ಲದೇ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಪ್ರಕರಣಗಳು ಹೆಚ್ಚಾಗಿರುವುದು ಎದ್ದು ಕಾಣುತ್ತಿದೆ.

ಅಕ್ರಮ ಮದ್ಯ ಮಾರಾಟ ದಂಧೆಯಲ್ಲಿ ಜಿಲ್ಲೆಯ ಬಾಗೇಪಲ್ಲಿ, ಗೌರಿಬಿದನೂರು ಟಾಪ್‌!: ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟದಲ್ಲಿ ಆಂಧ್ರದ ಗಡಿಗೆ ಹೊಂದಿಕೊಂಡಿರುವ ಬಾಗೇಪಲ್ಲಿ ತಾಲೂಕು ಮೊದಲ ಸ್ಥಾನದಲ್ಲಿದ್ದರೆ ನಂತರದಲ್ಲಿ ಗೌರಿಬಿದನೂರು ಇದೆ. ಮೂರನೇ ಸ್ಥಾನದಲ್ಲಿ ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರ ಇದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ಪ್ರಕರಣಗಳು ಹೆಚ್ಚಾಗಿವೆ. ಪ್ರತಿ ನಿತ್ಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಅಕ್ರಮ ಮದ್ಯ ಮಾರಾಟ ಪ್ರಕರಣಗಳು ದಾಖಲಾಗಿವೆ. ಇದರಿಂದಾಗಿಯೆ ಕೂಲಿ ಕಾರ್ಮಿಕರು, ಬಡವರು ದುಡಿದಿದ್ದೆಲ್ಲಾ ಮದ್ಯಕ್ಕೆ ಖರ್ಚು ಮಾಡುವ ದುಸ್ಥಿತಿಗೆ ತಲುಪಿ ಬಡ ಕಟುಂಬಗಳು ಬೀದಿಗೆ ಬರುವಂತಾಗಿದೆ.

– ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

10

ʼರಾಮಾಯಣʼ ಸೆಟ್‌ ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ʼರಾಮಾಯಣʼ ಸೆಟ್‌ ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.