ಚಿಕ್ಕಬಳ್ಳಾಪುರ: ಕಾರು ಪಲ್ಟಿ; ತಾಯಿ ಮಗ ಸಾವು

Team Udayavani, Nov 8, 2019, 7:42 PM IST

ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ‌ ತಾಲೂಕಿನಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿರುವ ಕ್ಯಾಂಟರ್‌ಗೆ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲೇ ತಾಯಿ ಮತ್ತು ಮಗ ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ರಾಷ್ಟ್ರೀಯ ಹೆದ್ದಾರಿ 7 ರ ಯರ್ರಲಕ್ಕೇನಹಳ್ಳಿ ಕ್ರಾಸ್‌ನಲ್ಲಿ ನಡೆದಿದೆ.

ಮೃತರನ್ನು ಬಾಗೇಪಲ್ಲಿ ಪಟ್ಟಣದ ವೆಂಕಟರವಣಪ್ಪ(65), ಅಂಜಿನಮ್ಮ(85) ಎಂದು ಗುರುತಿಸಲಾಗಿದೆ.

ವೆಂಕಟರವಣಪ್ಪ ತನ್ನ ಕಾರಿನಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ತನ್ನ ಮಗನನ್ನು ನೋಡಿಕೊಂಡು ಬರಲು ಹೋಗಿದ್ದು, ಮಗನನ್ನು ನೋಡಿಕೊಂಡು ಮತ್ತೆ ಬಾಗೇಪಲ್ಲಿಗೆ ಮನೆಗೆ ವಾಪಸ್ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ