ಚಿಕ್ಕಬಳ್ಳಾಪುರ: ಮತ್ತೆ ಅಪ್ಪಳಿಸಿದ ಕೋವಿಡ್‌-19


Team Udayavani, Jun 18, 2020, 6:36 AM IST

chikka-appalisitu

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇದುವರೆಗೂ ಕೋವಿಡ್‌ 19 ಸೋಂಕು ಕಾಣಿಸಿಕೊಂಡಿದ್ದ 152 ಮಂದಿ ಪೈಕಿ 150 ಮಂದಿ ಕೋವಿಡ್‌ -19ನಿಂದ ಸಂಪೂರ್ಣ ಗುಣಮುಖರಾಗಿ ಹಸಿರು ವಲಯದತ್ತ ಹೆಜ್ಜೆ ಹಾಕಿದ್ದ ಜಿಲ್ಲೆಗೆ ಮತ್ತೆ ಕೋವಿಡ್‌ 19  ಸೋಂಕು ಅಪ್ಪಳಿಸಿದ್ದು, ಇನ್ನಷ್ಟು ಸೋಂಕಿತರ ಸಂಖ್ಯೆ ಹೆಚ್ಚಾಗುವ ಆತಂಕ ಮೂಡಿಸಿದೆ.

ಒಂದೇ ದಿನ ಜಿಲ್ಲೆಯ ಗೌರಿಬಿದನೂರು, ಶಿಡ್ಲಘಟ್ಟ ಹಾಗೂ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ತಲಾ ಒಂದೊಂದು ಕೋವಿಡ್‌ 19 ಪ್ರಕರಣಗಳು ಕಂಡು ಬಂದಿದ್ದು, ಇದುವರೆಗೂ ಸೋಂಕು ಕಾಣಿಸಿಕೊಳ್ಳದೇ ಹಸಿರು ವಲಯವಾಗಿದ್ದ ಶಿಡ್ಲಘಟ್ಟ ತಾಲೂಕಿನಲ್ಲಿ ಕೋವಿಡ್‌-19 ಕಾಣಿಸಿ ಕೊಳ್ಳುವ ಮೂಲಕ ಆ ತಾಲೂಕಿನ ಜನರಲ್ಲಿ ತಲ್ಲಣ ಮೂಡಿಸಿದ್ದು, ಗುಡಿಬಂಡೆ ತಾಲೂಕು ಹೊರತುಪಡಿಸಿ ಈಗ ಜಿಲ್ಲೆಯ ಎಲ್ಲಾ ತಾಲೂಕು ಗಳಿಗೂ ಕೋವಿಡ್‌ 19 ಪ್ರವೇಶ ಮಾಡಿದೆ.

ಸೋಂಕಿತರು 155 ಏರಿಕೆ : ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 152ಕ್ಕೆ ಸೀಮಿತವಾಗಿದ್ದ ಕೋವಿಡ್‌-19 ಸೋಂಕಿತರು ಸಂಖ್ಯೆ ಇದೀಗ 155 ದಾಟಿದೆ. ಮುಂಬೈನಿಂದ ಆಗಮಿಸಿರುವ ಮೂವರಿಗೆ ಪಾಸಿಟಿವ್‌ ಬಂದಿರುವುದರಿಂದ ಜಿಲ್ಲೆಯಲ್ಲಿ  ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಾಗಿದೆ. ಸೋಂಕಿತರ ಪೈಕಿ ಇಬ್ಬರು 56 ವರ್ಷದ ಹಾಗೂ 25 ವರ್ಷದ ಮಹಿಳೆ, 20 ವರ್ಷದ ಯುವಕನಲ್ಲಿ ಕೋವಿಡ್‌ 19 ಕಾಣಿಸಿ ಕೊಂಡಿದೆ. ಮೂವರನ್ನು ನಗರದ ಹಳೆ ಜಿಲ್ಲಾಸ್ಪತ್ರೆಯಲ್ಲಿ ಸ್ಥಾಪಿಸಿರುವ  ಕೋವಿಡ್‌ -19 ಐಸೋಲೇಷನ್‌ ವಾರ್ಡ್‌ನಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.

ಮಹಾರಾಷ್ಟ್ರದಿಂದ ಜಿಲ್ಲೆಗೆ ಇದುವರೆಗೂ 385 ಮಂದಿ ನಾಗರಿಕರು ಆಗಮಿಸಿದ್ದು, ಆ ಪೈಕಿ 383 ಮಂದಿಯನ್ನು ಗಂಟಲು ದ್ರವದ ಪರೀಕ್ಷೆಗೆ  ಒಳಪಡಿಸಿದ್ದು ಅವರಲ್ಲಿ 120 ಮಂದಿಗೆ ಪಾಸಿಟೀವ್‌ ಬಂದಿದ್ದರೆ, 249 ಮಂದಿಗೆ ನೆಗೆಟಿವ್‌ ಬಂದಿದೆ. ಉಳಿದ 14 ಜನರ ಪರೀಕ್ಷೆಯ ಫ‌ಲಿತಾಂಶ ಬರಬೇಕಿದೆ. ಜಿಲ್ಲೆಯಲ್ಲಿ ಒಟ್ಟಾರೆ ಇದುವರೆಗೂ 12,3 87 ಮಂದಿಗೆ ಗಂಟಲು ದ್ರವದ ಮಾದರಿ  ಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, 12,024 ಮಂದಿಗೆ ನೆಗೆಟಿವ್‌ ಬಂದಿದೆ. 155 ಪಾಸಿಟಿವ್‌ ಬಂದಿದ್ದು, ಇಬ್ಬರು ಸೋಂಕಿ ನಿಂದ ಮೃತಪಟ್ಟರೆ ಮತ್ತೂಬ್ಬರು ಕೋವಿಡ್‌ ಅಲ್ಲದ ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ ಗೌರಿಬಿದನೂರು, ಚಿಕ್ಕಬಳ್ಳಾಪುರ ಹಾಗೂ ಶಿಡ್ಲಘಟ್ಟ ತಾಲೂಕಿನಲ್ಲಿ ತಲಾ ಒಂದೊಂದು ಪ್ರಕರಣ ಕಂಡು ಬಂದಿದ್ದು, ಸೋಂಕಿ ತರ ಸಂಪರ್ಕಕ್ಕೆ ಬಂದಿದ್ದ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಮಾಡುವ ಕಾರ್ಯ ನಡೆದಿದೆ. ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 155 ಕೋವಿಡ್‌ 19 ಪಾಸಿಟಿವ್‌ ಪ್ರಕರಣಗಳು ಕಂಡು ಬಂದಿವೆ.
-ಡಾ.ಯೋಗೇಶ್‌ಗೌಡ, ಜಿಲ್ಲಾ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.