ಪರಾಭವ ಬಳಿಕವೂ ನಾಯಕರ ಕೆಸರೆರೆಚಾಟ!

Team Udayavani, Jun 12, 2023, 4:03 PM IST

ಪರಾಭವ ಬಳಿಕವೂ ನಾಯಕರ ಕೆಸರೆರೆಚಾಟ!

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆ ಮುಗಿದು ಫ‌ಲಿತಾಂಶ ಪ್ರಕಟವಾಗಿ ಬರೋಬ್ಬರಿ ತಿಂಗಳು ಸಮೀಪಿಸುತ್ತಿದೆ. ಆದರೆ ರಾಜಕೀಯ ಪಕ್ಷಗಳ ನಾಯಕರ ಮಧ್ಯೆ ಮಾತ್ರ ಮಾತಿನ ಸಮರ ನಿಲ್ಲದೇ ಮುಂದುವರೆದಿದೆ.

ಹೌದು, ವಿಧಾನಸಭೆ ಚುನಾವಣೆ ಬಳಿಕ ಕ್ಷೇತ್ರದಲ್ಲಿ ಬೀಡುಬಿಟ್ಟು ತಮ್ಮ ತಮ್ಮ ಸೋಲಿನ ಬಗ್ಗೆ ಕಾರಣಗಳನ್ನು ಹುಡುಕುತ್ತಿರುವ ಪಕ್ಷಗಳ ನಾಯಕರು, ಈಗ ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಯಾರು ನಿರೀಕ್ಷಿಸದ ಫ‌ಲಿತಾಂಶ ಹೊರ ಬಿದ್ದು ಕಾಂಗ್ರೆಸ್‌ ಗೆಲುವಿನ ಕೇಕೆ ಹಾಕಿದರೆ, ಜೆಡಿಎಸ್‌ ಇದೇ ಮೊದಲ ಬಾರಿಗೆ ಕಳೆದ 4 ಬಾರಿ ಚುನಾವಣೆಯಲ್ಲಿ ಪಡೆದ ಮತದಾನಕ್ಕೆ ಹೋಲಿಸಿದರೆ ಈ ಬಾರಿ ಕಳಪೆ ಸಾಧನೆ ತೋರಿರುವುದು ಚರ್ಚೆಗೆ ಗ್ರಾಸವಾಗಿದೆ.

ಜೆಡಿಎಸ್‌-ಬಿಜೆಪಿ ಟಾಕ್‌ ವಾರ್‌: ಇದರ ಮಧ್ಯೆ ಕ್ಷೇತ್ರದಲ್ಲಿ ಜೆಡಿಎಸ್‌ ಹಾಗೂ ಬಿಜೆಪಿ ನಾಯಕರು ಪರಸ್ಪರ ನಿಂದನೆಯಲ್ಲಿ ತೊಡಗಿ ಕೆಸರೆರೆಚಾಟದಲ್ಲಿ ತೊಡಗಿರುವುದು ಎದ್ದು ಕಾಣುತ್ತಿದೆ. ಮಾಜಿ ಸಚಿವ ಸುಧಾಕರ್‌ ತಂದೆ ಕೇಶವರೆಡ್ಡಿ ನಮ್ಮ ಸೋಲಿಗೆ ಜೆಡಿಎಸ್‌ ನಾಯಕರು ಕಾರಣ, ಅವರ ಷಡ್ಯಂತ್ರ ಎಂದು ಆರೋಪಿಸಿದರೆ, ಜೆಡಿಎಸ್‌ ಅದಕ್ಕೆ ಪ್ರತಿರೋಧವಾಗಿ ಸುಧಾಕರ್‌ ಅಧಿಕಾರದಲ್ಲಿದ್ದಾಗ ನಮ್ಮ ಕಾರ್ಯಕರ್ತರ ಮೇಲೆ ಹೆಚ್ಚು ಪೊಲೀಸ್‌ ಕೇಸ್‌, ರೌಡಿಶೀಟರ್‌ ಕೇಸ್‌ ದಾಖಲು ಮಾಡಿಸುತ್ತಿದ್ದರು. ಅದಕ್ಕೆ ಸ್ಥಳೀಯ ಕಾರ್ಯಕರ್ತರು ಸುಧಾಕರ್‌ರನ್ನು ಸೋಲಿಸಲು ಕಾಂಗ್ರೆಸ್‌ಗೆ ಮತ ಹಾಕಿರಬಹುದೆಂದು ಹೇಳುವ ಮೂಲಕ ಬಿಜೆಪಿ ನಾಯಕರಿಗೆ ಟಾಂಗ್‌ ನೀಡುತ್ತಿದ್ದಾರೆ. ಉಳಿದ ಕ್ಷೇತ್ರಗಳಲ್ಲಿ ಕೂಡ ಸೋತ ಅಭ್ಯರ್ಥಿಗಳು ಸೋಲಿನ ಹುಡುಕಾಟದಲ್ಲಿ ತೊಡಗಿ ಗೆದ್ದ ಅಭ್ಯರ್ಥಿಗಳ ವಿರುದ್ಧ ಆರೋಪ, ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಚಿಂತಾವಣಿಯಲ್ಲಿ ಜೆಡಿಎಸ್‌ ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಕೂಡ ಅಲ್ಪಸಂಖ್ಯಾತರು ನಮ್ಮ ಕೈ ಹಿಡಿಯಲಿಲ್ಲ ಎಂದು ಪರೋಕ್ಷವಾಗಿ ಹೇಳಿಕೆ ಕೊಟ್ಟಿದ್ದಾರೆ.

ಗೌರಿಬಿದನೂರಲ್ಲಿ ಹಣದ ಹೊಳೆ ಹರಿಯಿತು ಎಂದು ಶಾಸಕ ಪುಟ್ಟಸ್ವಾಮಿಗೌಡರ ಗೆಲುವಿನ ಬಗ್ಗೆ ಪರಾಜಿತ ಅಭ್ಯರ್ಥಿ ಎನ್‌.ಎಚ್‌. ಶಿವಶಂಕರರೆಡ್ಡಿ ಹೇಳುತ್ತಿದ್ದಾರೆ. ಶಿಡ್ಲಘಟ್ಟದಲ್ಲಿ ನಾಯಕರ ನಡುವೆ ಶೀತಲಸಮರ ತಾರಕಕ್ಕೇರಿದೆ. ಆತ್ಮಾವಲೋಕನ ಸಭೆ ರಣಾಂಗಣವಾಗಿ ಮಾರ್ಪಟ್ಟು ಕೈ ಕಾರ್ಯಕರ್ತರ ನಡುವೆ ಕುರ್ಚಿ ಎಸೆಯುವ ಹಂತಕ್ಕೆ ಗಲಾಟೆ ನಡೆದಿದೆ. ಹೀಗೆ ಜಿಲ್ಲೆಯಲ್ಲಿ ಚುನಾವಣೆ ಮುಗಿದರೂ ಸೋತ, ಗೆದ್ದ ನಾಯಕರ ನಡುವೆ ಮಾತಿನ ಸಮರ ಮುಂದುವರೆದಿವೆ.

ಸುಧಾಕರ್‌ ವಿರುದ್ಧ ಎಂಟಿಬಿ ನಾಗರಾಜ್‌ ವಾಗ್ಧಾಳಿ: ಇತ್ತೀಚೆಗೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಆಂತರಿಕ ಸಭೆಯಲ್ಲಿ ನನ್ನ ಸೋಲಿಗೆ ಚಿಕ್ಕಬಳ್ಳಾಪುರ ಡಾ.ಕೆ.ಸುಧಾಕರ್‌ ಕಾರಣ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್‌ ಆರೋಪಿಸಿದ್ದಾರೆ. ಅಲ್ಲದೇ ಹೊಸಕೋಟೆಯಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ನೇರವಾಗಿ, ಆರೋಗ್ಯ ಸಚಿವರಾಗಿದ್ದ ಡಾ.ಕೆ.ಸುಧಾಕರ್‌ ಮೇಲೆ ಬಾಣ ಬಿಟ್ಟು ತಮ್ಮ ಸೋಲಿಗೆ ಸುಧಾಕರ್‌ ಕಾರಣ ಹಾಗೂ ಬೊಮ್ಮಾಯಿ ಕಾರಣ ಎಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ಆ ಮೂಲಕ ತಮ್ಮ ಸೋಲಿನ ಬಗ್ಗೆ ಮೌನ ಮುದಿರು ಮಾತನಾಡಿರುವ ಎಂಟಿಬಿ ನಾಗರಾಜ್‌, ಒಂದು ಕಾಲಕ್ಕೆ ತುಂಬ ಆಪ್ತರಾಗಿದ್ದ ಡಾ.ಕೆ. ಸುಧಾಕರ್‌ ವಿರುದ್ಧ ಕೆಂಡಮಂಡಲ ಆಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.