ಚಿಕ್ಕಬಳ್ಳಾಪುರ ದ್ವಿತೀಯ ಹಂತದ ಗ್ರಾ.ಪಂ.ಚುನಾವಣೆ : ಶೇಕಡ 89.58 ಮತದಾನ

Team Udayavani, Dec 27, 2020, 10:25 PM IST

ಚಿಕ್ಕಬಳ್ಳಾಪುರ ದ್ವಿತೀಯ ಹಂತದ ಗ್ರಾ.ಪಂ.ಚುನಾವಣೆ : ಶೇಕಡ 89.58 ಮತದಾನ

ಚಿಕ್ಕಬಳ್ಳಾಪುರ : ತೀವ್ರ ಕುತೂಹಲ ಕೆರಳಿಸಿದ ಚಿಕ್ಕಬಳ್ಳಾಪುರ ಜಿಲ್ಲೆಯ ಮೂರು ತಾಲೂಕುಗಳ ದ್ವಿತೀಯ ಹಂತದ ಗ್ರಾ.ಪಂ. ಚುನಾವಣೆ ಶಾಂತಿಯುವಾಗಿ ನಡೆದಿದ್ದು ಸುಮಾರು 90 ರಷ್ಟು ಮತದಾನ ದಾಖಲಾಗಿದೆ.

ಜಿಲ್ಲೆಯ ಗೌರಿಬಿದನೂರು, ಚಿಕ್ಕಬಳ್ಳಾಪುರ ಹಾಗೂ ಗುಡಿಬಂಡೆ ತಾಲೂಕಿನ 68 ಗ್ರಾ.ಪಂ.ಗಳ 1042 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 1,53,448 ಪುರುಷರು, 1,48,422 ಮಹಿಳೆಯರು ಸಹಿತ 301870 ಮತದಾರರು ಮತ ಚಲಾಯಿಸಿ ಅಭ್ಯರ್ಥಿಗಳ ಭವಿಷ್ಯವನ್ನು ಮತಪೆಟ್ಟಿಗೆಯಲ್ಲಿ ಭದ್ರಗೊಳಿಸಿದ್ದಾರೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಅತ್ಯಾಧಿಕ 91.28%,ಗೌರಿಬಿದನೂರು ತಾಲೂಕಿನಲ್ಲಿ 88.67% ಹಾಗೂ ಗುಡಿಬಂಡೆ ತಾಲೂಕಿನಲ್ಲಿ 89.24% ಮತದಾನ ದಾಖಲಾಗಿದೆ.

ಚಿಕ್ಕಬಳ್ಳಾಪುರ ತಾಲೂಕಿನ 23 ಗ್ರಾ.ಪಂ.ಗಳಿಗೆ 341 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಅದರಲ್ಲಿ 50844 ಪುರುಷರು ಹಾಗೂ 49091 ಮಹಿಳೆಯರು ಸಹಿತ 99935 ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರು ತಮ್ಮ ತಂದೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೇಶವರೆಡ್ಡಿ ಅವರೊಂದಿಗೆ ಪೆರೇಸಂದ್ರ ಗ್ರಾಮದಲ್ಲಿ ಮತದಾನ ಮಾಡಿದರು. ಅದೇ ರೀತಿ ರಾಜ್ಯ ಮಾವು ಅಭಿವೃದ್ದಿ ನಿಗಮದ ಅಧ್ಯಕ್ಷ ಕೆವಿ ನಾಗರಾಜ್ ಅವರು ತಮ್ಮ ಪತ್ನಿಯೊಂದಿಗೆ ಕಣಜೇನಹಳ್ಳಿ ಗ್ರಾಮದಲ್ಲಿ ಮತದಾನ ಮಾಡಿದರು.

ಇದನ್ನೂ ಓದಿ:ವಿಷ್ಣುವರ್ಧನ್‌ ಪ್ರತಿಮೆ ಧ್ವಂಸ ಖಂಡಿಸಿ ನಟ ಕಿಚ್ಚ ಸುದೀಪ್‌ ಟ್ವೀಟ್‌

ಗೌರಿಬಿದನೂರು ತಾಲೂಕಿನಲ್ಲಿ 37 ಗ್ರಾ.ಪಂ.ಗಳ 586 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 85654 ಪುರುಷರು, 82850 ಮಹಿಳೆಯರು ಸಹಿತ 168504 ಮತದಾರರು ಮತ ಚಲಾಯಿಸಿದ್ದಾರೆ. ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಶಾಸಕ ಎನ್‍ಹೆಚ್ ಶಿವಶಂಕರ್‍ರೆಡ್ಡಿ ಅವರು ತಾಲೂಕಿನಲ್ಲಿ ಕೆಲವೊಂದು ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ.

ಗುಡಿಬಂಡೆ ತಾಲೂಕಿನ 08 ಗ್ರಾ.ಪಂ.ಗಳ 115 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 16950 ಪುರುಷರು 16481 ಮಹಿಳೆಯರು ಸೇರಿದಂತೆ 33431 ಮತದಾರರು ತಮ್ಮ ಹಕ್ಕುಗಳನ್ನು ಚಲಾಯಿಸಿದ್ದಾರೆ. ಜಿಲ್ಲೆಯ ಮೂರು ತಾಲೂಕುಗಳಲ್ಲಿ ನಡೆದ ದ್ವಿತೀಯ ಹಂತೆದ ಗ್ರಾ.ಪಂ. ಚುನಾವಣೆ ಶಾಂತಿಯುತವಾಗಿ ನಡೆದಿದ್ದು, ಚುನಾವಣೆ ಅಂಗವಾಗಿ ಮತದಾನ ಮಾಡಲು ಬರುವ ಮತದಾರರಿಗೆ ಮತಗಟ್ಟೆ ಕೇಂಧ್ರದ ಬಳಿ ಆಶಾ ಕಾರ್ಯಕರ್ತರು ಥರ್ಮಲ್‍ಸ್ಕ್ಯಾನರ್‍ಗಳ ಮೂಲಕ ಆರೋಗ್ಯ ತಪಾಸಣೆ ಮಾಡಲು ಅನುವು ಮಾಡಿಕೊಟ್ಟರು.

ಸಾಮಾನ್ಯವಾಗಿ ವಿಧಾನಸಭೆಯ ಚುನಾವಣೆಯ ಮಾದರಿಯಲ್ಲಿ ನಡೆದ ಗ್ರಾ.ಪಂ. ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಕೊನೆಯ ಕ್ಷಣವರೆಗೂ ಸಹ ಮತದಾರರ ಮನ ವೊಲಿಸುವ ಕಸರತ್ತು ನಡೆಸಿದರು. ಆಟೋ ಕಾರುಗಳಲ್ಲಿ ಮತದಾರರನ್ನು ಕರೆ ತಂದು ಪುನಃ ಮನೆಗಳಿಗೆ ವಾಪಸ್ ಬಿಟ್ಟು ಬರುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿ ಕಂಡು ಬಂದಿತು.

ಮತದಾನ ಕೇಂದ್ರದ ಸಮೀಪ ಮತದಾರರಿಗೆ ಮಾರ್ಗದರ್ಶನ ಮಾಡಲು ವಿವಿಧ ಪಕ್ಷಗಳ ಕಾರ್ಯಕರ್ತರುಗಳ ಮುಖಂಡರು ಪ್ರತ್ಯೇಕ ಶಾಮಿಯಾನಗಳನ್ನು ಹಾಕಿದರು. ಮತದಾನ ಮಾಡಲು ಮತಗಟ್ಟೆಗೆ ತೆರಳುತ್ತಿದ್ದ ಮತದಾರರನ್ನು ಬೆಂಬಲಿಸುವಂತೆ ಮನವಿ ಮಾಡುತ್ತಿದ್ದರು.

ಜಿಲ್ಲೆಯ ಶಿಡ್ಲಘಟ್ಟ, ಚಿಂತಾಮಣಿ ಹಾಗೂ ಬಾಗೇಪಲ್ಲಿ ತಾಲೂಕಿನಲ್ಲಿ ಪ್ರಥಮ ಹಂತದಲ್ಲಿ ಮತದಾನ ಶಾಂತಿಯುತವಾಗಿ ನಡೆದಿದ್ದು ಭಾನುವಾರದಂದು ನಡೆದ ದ್ವಿತೀಯ ಹಂತದಲ್ಲಿ ಜಿಲ್ಲೆಯ ಗೌರಿಬಿದನೂರು, ಚಿಕ್ಕಬಳ್ಳಾಪುರ ಹಾಗೂ ಗುಡಿಬಂಡೆ ತಾಲೂಕಿನಲ್ಲಿಯೂ ಸಹ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ ಚುನಾವಣೆ ಶಾಂತಿಯುತವಾಗಿ ನಡೆದಿದೆ ಜಿಲ್ಲೆಯಲ್ಲಿ ಪಾರದರ್ಶಕವಾಗಿ ಹಾಗೂ ನ್ಯಾಯಸಮ್ಮುತವಾಗಿ ಚುನಾವಣೆ ನಡೆಸಲು ಜಿಲ್ಲಾಡಳಿತ ಕೈಗೊಂಡಿದ್ದ ಕ್ರಮಗಳಿಂದ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಶಾಂತಿಯುತ ಮತದಾನ ನಡೆದಿದೆ.

ಅಪರ ಜಿಲ್ಲಾಧಿಕಾರಿ ಅಮರೇಶ್ ಅವರು ನಂದಿ, ಸುಲ್ತಾನಪೇಟೆ, ಯಲುವಹಳ್ಳಿ ಮತಗಟ್ಟೆ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಈ ಬಾರಿಯ ಗ್ರಾ.ಪಂ. ಚುನಾವಣೆಯಲ್ಲಿ ಮತದಾರರು ಉತ್ಸಾಹದಿಂದ ಪಾಲ್ಗೊಂಡಿರುವುದು ಸಂತಸಗೊಂಡಿದೆ. ಈ ಹಿಂದೆ ಸುಮಾರು ಶೇ.90 ರಷ್ಟು ಮತದಾನ ದಾಖಲಾಗಿತ್ತು ಅದು ದಾಟಿದರೆ ರಾಜ್ಯದಲ್ಲಿ ದ್ವಿತೀಯ ಅಥವಾ ತೃತೀಯ ಸ್ಥಾನವನ್ನು ಜಿಲ್ಲೆ ಪಡೆದುಕೊಳ್ಳಲಿದೆ ಎಂದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದ ಗ್ರಾ.ಪಂ.ಯ ಚುನಾವಣೆಯಲ್ಲಿ ಅಗಲಗುರ್ಕಿ ಗ್ರಾಮ ಪಂಚಾಯಿತಿಯ ಜಡಲತಿಮ್ಮನಹಳ್ಳಿ ಮತಗಟ್ಟೆ ಕೇಂದ್ರಕ್ಕೆ ರಾಧಮ್ಮ ಎಂಬ ವಿಕಲಚೇತನ ಮಹಿಳೆಯೊಬ್ಬರು ಯಾರ ಸಹಾಯವೂ ಇಲ್ಲದೆ ಮನೆಯಿಂದ ಮತಗಟ್ಟೆಗೆ ತೆವಲುಕೊಂಡು ಬಂದು ತಮ್ಮ ಹಕ್ಕು ಚಲಾಯಿಸುವ ಮೂಲಕ ಮಾದರಿಯಾಗಿದ್ದಾರೆ.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.