ಲೋಕಸಭಾ ಚುನಾವಣೆಗೆ ಕೈ, ದಳ ಮೈತ್ರಿ ಖಚಿತ

Team Udayavani, Jul 8, 2018, 7:00 AM IST

ಚಿಕ್ಕಬಳ್ಳಾಪುರ: ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್‌, ಜೆಡಿಎಸ್‌ ನಡುವೆ ಮೈತ್ರಿ ಏರ್ಪಡಲಿದೆ. ಸ್ಥಾನ ಹೊಂದಾಣಿಕೆ ಮಾಡಿಕೊಂಡು ಚುನಾವಣೆಯನ್ನು ಒಟ್ಟಾಗಿ ಎದುರಿಸಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಎಂ.ವೀರಪ್ಪ ಮೊಯ್ಲಿ ಸ್ಪಷ್ಟಪಡಿಸಿದರು.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಮೈತ್ರಿ ಸರ್ಕಾರ ರಚನೆ ವೇಳೆಯೇ ಲೋಕಸಭಾ ಚುನಾವಣೆಗೆ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳುವ ಸಂಬಂಧ ಎರಡೂ ಪಕ್ಷಗಳ ನಡುವೆ ಒಪ್ಪಂದ ಆಗಿದೆ.

ರಾಜ್ಯದಲ್ಲಿನ 28 ಸ್ಥಾನಗಳ ಪೈಕಿ 18 ರಿಂದ 20 ಸ್ಥಾನಗಳಲ್ಲಿ ಕಾಂಗ್ರೆಸ್‌ ಸ್ಪರ್ಧಿಸಲಿದ್ದು, ಉಳಿದ ಸೀಟುಗಳನ್ನು ಜೆಡಿಎಸ್‌ಗೆ ಬಿಟ್ಟು ಕೊಡಲಾಗುವುದು. ಲೋಕಸಭಾ ಚುನಾವಣೆಗೆ ಮೈಸೂರು ಭಾಗದಲ್ಲಿ ಜೆಡಿಎಸ್‌ ಹೆಚ್ಚು ಸೀಟುಗಳಿಗೆ ಬೇಡಿಕೆ ಇಟ್ಟಿದೆ ಎಂಬ ಸುದ್ದಿಗಾರರ ಪ್ರಶ್ನೆಯನ್ನು ತಳ್ಳಿ ಹಾಕಿದ ಮೊಯ್ಲಿ, ಇದು ಉಹಾಪೋಹ ಅಷ್ಟೇ ಎಂದರು.

ಸಮ್ಮಿಶ್ರ ಸರ್ಕಾರದ ಬಜೆಟ್‌ ಬಗ್ಗೆ ಕೆಲವರು ತಪ್ಪು ಕಲ್ಪನೆ ಹೊಂದಿದ್ದಾರೆ. ಕಾಂಗ್ರೆಸ್‌ ಪಕ್ಷದ ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಅಧ್ಯಕ್ಷ ಕೂಡ ನಾನೇ ಆಗಿದ್ದೇನೆ. ನಮ್ಮ ಎರಡೂ ಪಕ್ಷಗಳ ಪ್ರಣಾಳಿಕೆಯಲ್ಲಿರುವ ಅಂಶಗಳನ್ನು,ಆಶ್ವಾಸನೆಗಳನ್ನು ಸೇರಿಸಿ ಬಜೆಟ್‌ ಮಂಡನೆ ಮಾಡಲಾಗಿದೆ ಎಂದು ಇದೇ ವೇಳೆ ಅವರು ಸ್ಪಷ್ಟಪಡಿಸಿದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ