ಚಿಕ್ಕಬಳ್ಳಾಪುರದಲ್ಲಿ 50 ಸಾವಿರ ಸದಸ್ಯತ್ವದ ಗುರಿ

Team Udayavani, Apr 11, 2022, 3:04 PM IST

Untitled-1

ಚಿಕ್ಕಬಳ್ಳಾಪುರ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ ಪಕ್ಷದ ನೂತನ ಸದಸ್ಯರನ್ನು ಡಿಜಿಟಲ್‌ ತಂತ್ರಜ್ಞಾನದ ಮೂಲಕ ನೋಂದಣಿ ಮಾಡಿಕೊಳ್ಳುತ್ತಿದ್ದು, ಮಾರ್ಚ್‌ 31ರ ಮಾಸಾಂತ್ಯದವರೆಗೆ ಸುಮಾರು ಸಾವಿರದಷ್ಟು ನೂತನ ಸದಸ್ಯರ ಡಿಜಿಟಲ್‌ ನೋಂದಣಿ ಆಗಿದೆ ಎಂದು ಕೆಪಿಸಿಸಿ ಸದಸ್ಯ ವಿನಯ್‌ ಎನ್‌ (ಶ್ಯಾಮ್‌) ತಿಳಿಸಿದರು.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಕಾಂಗ್ರೆಸ್‌ ಪಕ್ಷದ ಡಿಜಿಟಲ್‌ ಸದಸ್ಯತ್ವ ನೋಂದಣಿ ಕಾರ್ಯಕ್ರಮದಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ನೂರಾರು ಗ್ರಾಮಗಳಲ್ಲಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಡಿಜಿಟಲ್‌ ತಂತ್ರಜ್ಞಾನದ ಮೂಲಕ ಸದಸ್ಯತ್ವ ನೋಂದಣಿಯಲ್ಲಿ ಕಾಂಗ್ರೆಸ್‌ ಮುಖಂಡರುಗಳು ಪಾಲ್ಗೊಂಡಿದ್ದು, ನಾನೂ ಸಹ ಅನೇಕ ಗ್ರಾಮಗಳಿಗೆ ಭೇಟಿ ನೀಡಿ ಸದಸ್ಯತ್ವ ನೋಂದಣಿ ಮಾಡಿಕೊಳ್ಳುತ್ತಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಈ ಸದಸ್ಯತ್ವ ಅಭಿಯಾನದ ಸಂಖ್ಯೆ ಸುಮಾರು 50 ಸಾವಿರ ಮುಟ್ಟಲಿದೆ ಎಂದರು.

ಸದಸ್ಯತ್ವ ಅಭಿಯಾನ ಯಶಸ್ವಿ ಸಾಧ್ಯತೆ: ಕಾಂಗ್ರೆಸ್‌ ಸದಸ್ಯತ್ವ ಅಭಿಯಾನ ಇನ್ನೂ ಹೆಚ್ಚು ಯಶಸ್ವಿ ಕಾಣುತ್ತಿತ್ತು. ಆದರೆ, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರು, ಸಚಿವ ಡಾ.ಕೆ.ಸುಧಾಕರ್‌ ಆಡಳಿತದ ವೈಖರಿ ಹಾಗೂ ಹಿಟ್ಲರ್‌ ನಂತೆ ವರ್ತಿಸುತ್ತಿರುವ ಕಾರಣ ಕಾಂಗ್ರೆಸ್‌ ಪಕ್ಷಕ್ಕೆ ಸದಸ್ಯರಾಗಲು ಅನೇಕ ಕಡೆ ಸದಸ್ಯರುಗಳು ಹಿಂಜರಿಯುತ್ತಿದ್ದಾರೆ ಎಂದು ಆರೋಪಿಸಿದರು.

 ಶರವೇಗದಲ್ಲಿ ಸದಸ್ಯತ್ವ ನೋಂದಣಿ: ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅತ್ಯಂತ ಕಡಿಮೆ ನೋಂದಣಿ ಆಗಿರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಈ ಕ್ಷೇತ್ರದಲ್ಲಿ ಇಲ್ಲಿನ ಎಲ್ಲಾ ಮುಖಂಡರುಗಳು ಐವತ್ತು ಸಾವಿರಕ್ಕೂ ಹೆಚ್ಚು ನೂತನ ಸದಸ್ಯರನ್ನು ಕಾಂಗ್ರೆಸ್‌ ಪಕ್ಷಕ್ಕೆ ಡಿಜಿಟಲ್‌ ಮೂಲಕ ನೋಂದಣಿ ಮಾಡಿಸಬೇಕು ಎಂದು ಆದೇಶಿಸಿದ್ದರು.

ಅವರ ಆದೇಶದ ಮೇರೆಗೆ ನಂತರದ ದಿನಗಳಲ್ಲಿ ಶರವೇಗದಲ್ಲಿ ಡಿಜಿಟಲ್‌ ಮೂಲಕ ಸದಸ್ಯತ್ವ ನೋಂದಣಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಇನ್ನೂ ಎರಡು ವಾರಗಳ ಕಾಲ ಈ ನೋಂದಣಿ ಕಾರ್ಯಕ್ರಮದ ಅವಧಿ ವಿಸ್ತರಣೆ ಆಗಿರುವುದರಿಂದ ಮತ್ತಷ್ಟು ಹೆಚ್ಚು ಸದಸ್ಯರನ್ನು ಕಾಂಗ್ರೆಸ್‌ ಪಕ್ಷಕ್ಕೆ ನೋಂದಾಯಿಸಲು ಅವಕಾಶ ಲಭ್ಯವಾಗಿದೆ ಎಂದು ಹೇಳಿದರು.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕೆಪಿಸಿಸಿ ಸದಸ್ಯ ವಿನಯ್‌ ಎನ್‌ ಶ್ಯಾಮ್‌ ಕಾಂಗ್ರೆಸ್‌ ಡಿಜಿಟಲ್‌ ಸದಸ್ಯತ್ವ ಅಭಿಯಾನ ನಡೆಯಿತು.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.