ಬಿಜೆಪಿಯಿಂದಲೇ ಮುಂದಿನ ಚುನಾವಣೆಗೆ ಸ್ಪರ್ಧೆ: ಎಂಟಿಬಿ ನಾಗರಾಜ್

ಪುತ್ರನಿಗೆ ಪಕ್ಷದಿಂದ ಟಿಕೆಟ್ ನೀಡಬೇಕೆಂದು ಮನವಿ ಮಾಡುತ್ತೇನೆ...

Team Udayavani, Oct 12, 2022, 5:07 PM IST

1—dsadadadad

ಚಿಕ್ಕಬಳ್ಳಾಪುರ : ‘ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ ಜೋಡೋ’ ಯಾತ್ರೆಯಿಂದ ನಮಗೆ ಯಾವುದೇ ರೀತಿಯ ತೊಂದರೆ ಇಲ್ಲ. ಬದಲಿಗೆ ಇನ್ನೂ ಧೈರ್ಯ ಬಂದಿದೆ ರಾಜ್ಯದ ಜನರ ನಾಡಿಮಿಡಿತವನ್ನು ಅರಿತಿದ್ದೇವೆ. ಮುಂಬರುವ 2023ರ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ’ ಎಂದು ರಾಜ್ಯ ಪೌರಾಡಳಿತ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ’ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ ಜೋಡೋ ಯಾತ್ರೆಯಿಂದ ಬಿಜೆಪಿ ಪಕ್ಷಕ್ಕೆ ಯಾವುದೇ ಭಯವಿಲ್ಲ ಬದಲಿಗೆ ಧೈರ್ಯ ಬಂದಿದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಜನಪರ ಯೋಜನೆಗಳನ್ನು ಜನರ ಮುಂದಿಟ್ಟುಕೊಂಡು 2023ರ ಚುನಾವಣೆ ಎದುರಿಸಿ ಮತ್ತೊಮ್ಮೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರವನ್ನು ನಡೆಸುತ್ತೇವೆ’ ಎಂದರು.

‘ರಾಜ್ಯದಲ್ಲಿ ಸುಮಾರು ವರ್ಷಗಳ ಬಳಿಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಳ ಮಾಡುವ ನಿರ್ಧಾರವನ್ನು ತೆಗೆದು ಕೊಂಡಿದ್ದೇವೆ ಆದಷ್ಟು ಬೇಗ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಮೀಸಲಾತಿಯನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರಲ್ಲದೆ ಒಳ ಮೀಸಲಾತಿ ವಿಚಾರದಲ್ಲೂ ಸಹ ಗಂಭೀರವಾಗಿ ಚರ್ಚೆ ನಡೆಸಿದ್ದೇವೆ’ ಎಂದು ಸ್ಪಷ್ಟಪಡಿಸಿದರು.

ಎಸ್ಸಿ-ಎಸ್ಟಿ ಸೇರಿದಂತೆ ಇತರೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ ಬೇಡಿಕೆ ಹೆಚ್ಚಾಗಿದೆ ವಿಶೇಷವಾಗಿ ಕುರುಬ ಸಮುದಾಯದವರಿಗೆ ಮೀಸಲಾತಿ ನೀಡಬೇಕೆಂಬ ಒತ್ತಾಯ ವರ್ಷಗಳಿಂದ ಕೇಳಿಬರುತ್ತಿದೆ ಅವರಿಗೂ ಸಹ ಮೀಸಲಾತಿ ನೀಡುವ ವಿಚಾರದಲ್ಲಿ ಸರ್ಕಾರ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು 70 ವರ್ಷದ ರಾಜಕಾರಣಿಗಳಿಗೆ ಪಕ್ಷದ ವರಿಷ್ಠರು ಟಿಕೆಟ್ ನಿರಾಕರಿಸಿದರೆ ತಮ್ಮ ಪುತ್ರನಿಗೆ ಪಕ್ಷದಿಂದ ಟಿಕೆಟ್ ನೀಡಬೇಕೆಂದು ಮನವಿ ಮಾಡುತ್ತೇನೆ ಹೊರತು ಯಾವುದೇ ಕಾರಣಕ್ಕೂ ಬೇರೆ ಪಕ್ಷಗಳಿಗೆ ಪಕ್ಷಾಂತರ ಮಾಡುವ ಜಾಯಮಾನ ನನ್ನದಲ್ಲ ೩೯ ವರ್ಷದಿಂದ ರಾಜಕಾರಣವನ್ನು ಮಾಡಿಕೊಂಡು ಬಂದಿದ್ದೇನೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂಬುದು ಶುದ್ಧ ಸುಳ್ಳು ಬಿಜೆಪಿಯಲ್ಲಿದ್ದೇನೆ ಮುಂದೆಯೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎನ್ ಎನ್ ನಾಗರಾಜ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಶಂಕರ್ ಜೆಕೆ ಕೃಷ್ಣಾರೆಡ್ಡಿ ಬಾಗೇಪಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದಾರೆ: ಬಸವರಾಜ ಬೊಮ್ಮಾಯಿ

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Uddav-2

Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್‌

1-aaaaa

Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.