ಕೋವಿಡ್ 19 ಹೊಡೆತಕ್ಕೆ ಕ್ಯಾಪ್ಸಿಕಾಂ ಮಣ್ಣುಪಾಲು

Team Udayavani, Apr 1, 2020, 2:56 PM IST

ಕೋವಿಡ್ 19 ಹೊಡೆತಕ್ಕೆ ಕ್ಯಾಪ್ಸಿಕಾಂ ಮಣ್ಣುಪಾಲು

ಶಿಡ್ಲಘಟ್ಟ: ಕೋವಿಡ್ 19 ಸೋಂಕು ಹರಡುವ ಭೀತಿಯಿಂದ ಜನರು ತತ್ತರಿಸಿದ್ದು, ಮತ್ತೂಂದೆಡೆ ದೇಶಿಯ ವಸ್ತುಗಳು ವಿದೇಶಕ್ಕೆ ರಫ್ತು ಮಾಡುವುದನ್ನು ನಿಲ್ಲಿಸಿರುವುದರಿಂದ ತಾಲೂಕಿನಲ್ಲಿ ಕ್ಯಾಪ್ಸಿಕಾಂ ಬೆಳೆದ ರೈತರು ಕಣ್ಣೀರು ಹಾಕುತ್ತಿದ್ದಾರೆ.

ತಾಲೂಕಿನ ಅಬ್ಲೂಡು ಗ್ರಾಪಂ ವ್ಯಾಪ್ತಿಯ ಚೀಮನಹಳ್ಳಿಯಲ್ಲಿ ಸುಮಾರು ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕ್ಯಾಪ್ಸಿಕಾಂ ಖರೀದಿಗೆ ಯಾರೊಬ್ಬರು ಮುಂದೆ ಬರದಿದ್ದರಿಂದ ಕಂಗಾಲಾದ ರೈತ ಗೋಪಾಲ್‌ ಸುಮಾರು 2 ಟನ್‌ ಕ್ಯಾಪ್ಸಿಕಾಂ ಬೀದಿಗೆ ಎಸೆದಿದ್ದಾರೆ. ಇದರಿಂದ ರೈತನಿಗೆ ಸುಮಾರು 4 ಲಕ್ಷಕ್ಕೂ ಅಧಿಕ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಕೈಗೆ ಬರದ ಬಂಡವಾಳ: ಜಿಲ್ಲೆಯಲ್ಲಿ ಯಾವುದೇ ನದಿನಾಲೆಗಳಿಲ್ಲ. ಮಳೆನೀರು ಮತ್ತು ಕೊಳವೆಬಾವಿ ನೀರು ಆಶ್ರಯಿಸಿಕೊಂಡು ಬೆಳೆದಿದ್ದ ಕ್ಯಾಪ್ಸಿಕಾಂ ರೈತನ ಕೈಹಿಡಿದಿದೆ. ಆದರೂ ಕೊರೊನಾ ಸೋಂಕಿನಿಂದ ರಫ್ತು ನಿಲ್ಲಿಸಿದ್ದರಿಂದ ಖರೀದಿದಾರರು ಇಲ್ಲದೇ ರೈತ ಹೂಡಿದ್ದ ಬಂಡವಾಳ ಕೈಗೆ ಸಿಗದೆ ಕಂಗಾಲಾಗಿದ್ದು, ಸರ್ಕಾರ ನೆರವಿಗೆ ಧಾವಿಸಬೇಕಾಗಿದೆ. ಸಾಮಾನ್ಯವಾಗಿ ಪಾಲಿಹೌಸ್‌ ನಿರ್ಮಿಸಿಕೊಂಡು 4 ತಿಂಗಳನಲ್ಲಿ ಕ್ಯಾಪ್ಸಿಕಾಂ ಬೆಳೆ ಬೆಳೆ ಯುತ್ತಿದ್ದಾರೆ. ಚೀಮನ ಹಳ್ಳಿಯಲ್ಲಿ ಗೋಪಾಲ್‌ ಸಹ ಈಗಾಗಲೇ ಬೆಳೆ ಬೆಳೆದು ಕಂಪನಿ ಯೊಂದಿಗೆ ಒಪ್ಪಂದ ಮಾಡಿಕೊಂಡು ಕೆ.ಜಿ 20 ರಿಂದ 100 ರೂ.ವರೆಗೆ ಮಾರಾಟ ಮಾಡಿದ್ದಾರೆ. ಆದರೆ ಇದೀಗ ಕ್ಯಾಪ್ಸಿಕಾಂನ್ನು ಕೇಳ್ಳೋರಿಲ್ಲದೇ ತೋಟದಲ್ಲಿ ನಾಶವಾಗುತ್ತಿರುವುದನ್ನು ಕಂಡು ಕಿತ್ತು ಹಾಕಿ ಬೀದಿಯಲ್ಲಿ ಸುರಿದಿದ್ದಾರೆ.

ದೇಶಾದ್ಯಂತ ಲಾಕ್‌ಡೌನ್‌ ಘೋಷಣೆ ಮಾಡಿದ್ದರಿಂದ ಸರಕು ಸಾಗಾಣಿಕೆ ವ್ಯವಸ್ಥೆ ಸ್ಥಗಿತಗೊಂಡಿದ್ದರಿಂದ ಖರೀದಿದಾರರು ಇಲ್ಲದಾಗಿದೆ. ಚೀಮನಹಳ್ಳಿ ರೈತ ಗೋಪಾಲ್‌ ಪ್ರತಿಕ್ರಿ ಯಿಸಿ, ಲಾಭದಾಯಕವಾಗಿದ್ದ ಕ್ಯಾಪ್ಸಿಕಾಂ ಬೆಳೆಯಿಂದ ಆದಾಯಗಳಿಸುತ್ತಿದ್ದೆ. ಆದರೆ ಕೋವಿಡ್ 19  ಸೋಂಕು ಭೀತಿಯಿಂದ ವಿದೇಶಕ್ಕೆ ರಫ್ತು ನಿಲ್ಲಿಸಿದ್ದರಿಂದ ಖರೀದಿ ಮಾಡುವ ಕಂಪನಿಗಳು ಸಹ ಕೈಬಿಟ್ಟಿದ್ದರಿಂದ ಬಂಡವಾಳ ಹೂಡಿ ಬೆಳೆದಿದ್ದ ಕ್ಯಾಪ್ಸಿಕಾಂ ಬೀದಿಯಲ್ಲಿ ಸುರಿಯುವಂತಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಸಮಸ್ಯೆ ಅರಿತು ಪರಿಹಾರ ಕಲ್ಪಿಸುವ ವಿಶ್ವಾಸವಿದೆ ಎಂದರು.

ಕೇಂದ್ರ ಸರ್ಕಾರ ಸರಕು ಸಾಗಾಣಿಕೆ ಮಾಡುವ ವಾಹನಗಳನ್ನು ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಡೆಯಬಾರದು ಎಂದು ಸೂಚನೆ ನೀಡಿರುವುದರಿಂದ ಖರೀದಿದಾರರಿಗೆ ಸರಕು ಸಾಗಾಣಿಕೆಗೆ ಅನುಕೂಲವಾಗಲಿದೆ. ಕ್ಯಾಪ್ಸಿಕಾಂ ಮಾರಾಟವಾಗದಿರುವ ಕುರಿತು ದೂರು ಬಂದಿಲ್ಲ. ಎಸ್‌.ಆರ್‌.ಕುಮಾರಸ್ವಾಮಿ, ಉಪನಿರ್ದೇಶಕರು ತೋಟಗಾರಿಕೆ ಇಲಾಖೆ

ತಮೀಮ್‌ ಪಾಷ ಎಂ.ಎ.

ಟಾಪ್ ನ್ಯೂಸ್

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Monsoon: ಕುರಿ, ಕೋಳಿ ಸಾಕಾಣಿಕೆ ಜೋರು!

chiಅಖಾಡದಲ್ಲಿ ನಾನೇ ಇದ್ದಿದ್ದರೆ ಫ‌ಲಿತಾಂಶ ಬೇರೆಯೇ ರೀತಿಯಲ್ಲಿ ಇರುತ್ತಿತ್ತು: ಪ್ರದೀಪ್‌

ಅಖಾಡದಲ್ಲಿ ನಾನೇ ಇದ್ದಿದ್ದರೆ ಫ‌ಲಿತಾಂಶ ಬೇರೆಯೇ ರೀತಿಯಲ್ಲಿ ಇರುತ್ತಿತ್ತು: ಪ್ರದೀಪ್‌

Chikkaballapura; ಸುಧಾಕರ್ ಗೆ ಜನಾಭಿಪ್ರಾಯ ಸಿಕ್ಕಿದೆ, ಆದರೆ ರಾಜೀನಾಮೆ….:ಪ್ರದೀಪ್ ಈಶ್ವರ್

Chikkaballapura; ಸುಧಾಕರ್ ಗೆ ಜನಾಭಿಪ್ರಾಯ ಸಿಕ್ಕಿದೆ, ಆದರೆ ರಾಜೀನಾಮೆ….:ಪ್ರದೀಪ್ ಈಶ್ವರ್

manchenahalli

Manchenahalli; ವಿದ್ಯುತ್ ಸ್ಪರ್ಶವಾಗಿ ಕಂಬದಲ್ಲಿಯೇ ಮೃತಪಟ್ಟ ಬೆಸ್ಕಾಂ ಸಿಬ್ಬಂದಿ

3-gudibande

Gudibanda: ಕಾರು ಅಪಘಾತ: ಮೂವರು ಬೆಸ್ಕಾಂ ಸಿಬ್ಬಂದಿಗಳು ಸಾವು

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

1-ssdad

ಅನುಚಿತ ವರ್ತನೆ‌ ; ಜೆಸ್ಕಾಂ ಗುತ್ತಿಗೆದಾರನಿಗೆ‌ ಚಪ್ಪಲಿಯಿಂದ ಹೊಡೆದ ಮಹಿಳೆ

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.