ಜಿಲ್ಲೆಯಲ್ಲಿ 99ಕ್ಕೆ ತಲುಪಿದ ಕೋವಿಡ್‌-19


Team Udayavani, May 24, 2020, 6:28 AM IST

ji-99-sonku

ಚಿಕ್ಕಬಳ್ಳಾಪುರ: ಮಹಾರಾಷ್ಟ್ರದಿಂದ ಕರೆ ತಂದಿರುವ ವಲಸೆ ಕಾರ್ಮಿಕರಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೋವಿಡ್‌ 19 ಸೋಂಕು ಸ್ಫೋಟಗೊಳ್ಳುತ್ತಲೇ ಇದ್ದು, ಶುಕ್ರವಾರವಷ್ಟೇ 47 ಮಂದಿಯಲ್ಲಿ ಕಾಣಿಸಿಕೊಂಡಿದ್ದ ಸೋಂಕು, ಶನಿವಾರ ಹೊಸದಾಗಿ 26 ಮಂದಿಯಲ್ಲಿ ದೃಢಪಡುವ ಮೂಲಕ ಜಿಲ್ಲೆಯಲ್ಲಿ ಕೋವಿಡ್‌ -19 ಶತಕದ ಅಂಗಳಕ್ಕೆ ಬಂದು ನಿಂತಿದೆ.

ಸೋಂಕಿತರು 99ಕ್ಕೆ ಏರಿಕೆ: ಸತತ 2 -3 ತಿಂಗಳಿಂದಲೂ ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ 26ಕ್ಕೆ  ಸೀಮಿತವಾಗಿ ಆ ಪೈಕಿ 19 ಮಂದಿ ಆಸ್ಪತ್ರೆಯಿಂದ ಡಿಸಾcರ್ಜ್‌ ಆಗುವ ಮೂಲಕ ಜೀವರು ನೆಮ್ಮದಿಯಿಂದ ಇದ್ದರು. ಆದರೆ ಲಾಕ್‌ಡೌನ್‌ ಸಡಿಲಿಕೆ ಬಳಿಕ ಮಹಾರಾಷ್ಟ್ರಕ್ಕೆ ತೆರಳಿದ್ದ ವಲಸೆ ಕಾರ್ಮಿಕರು ಜಿಲ್ಲೆಗೆ ಆಗಮಿಸಿದ ಎರಡೇ  ದಿನದಲ್ಲಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 99ಕ್ಕೆ ಏರಿದ್ದು, ಎರಡು ದಿನದಲ್ಲಿ ಜಿಲ್ಲೆಯಲ್ಲಿ ಹೊಸದಾಗಿ 73 ಪ್ರಕರಣಗಳು ಕಾಣಿಸಿಕೊಳ್ಳುವ  ಮೂಲಕ ಜಿಲ್ಲೆಯ ಜನರಲ್ಲಿ ಮಹಾಮಾರಿಯ ಆತಂಕ ಆವರಿಸುವಂತೆ ಮಾಡಿದೆ.

ಮೂರಂಕಿ ದಾಟುತ್ತೆ: ಜಿಲ್ಲೆಯ ಪಾಲಿಗೆ ಕರಾಳವಾಗಿದ್ದ ಕಳೆದ ಶುಕ್ರವಾರ ಒಂದೇ ದಿನ 47 ಪ್ರಕರಣಗಳು ಪತ್ತೆಯಾದರೆ, ಶನಿವಾರ ಸಂಜೆ ವೇಳೆಗೆ 26 ಹೊಸ ಪ್ರಕರಣಗಳು ಕಾಣಿಸಿಕೊಳ್ಳುವ ಮೂಲಕ ಶತಕಕ್ಕೆ ಒಂದು ಪ್ರಕರಣವಷ್ಟೇ ಬಾಕಿ  ಇದೆ.

ಬಾಗೇಪಲ್ಲಿಗೂ ವಿಸ್ತರಿಸದ ಸೋಂಕು: ಜಿಲ್ಲೆಯಲ್ಲಿ ಇದುವರೆಗೂ ಗೌರಿಬಿದನೂರು, ಚಿಕ್ಕಬಳ್ಳಾಪುರ ಹಾಗೂ ವಾಣಿಜ್ಯ ನಗರಿ ಚಿಂತಾ ಮಣಿಗೆ ಮಾತ್ರ ಸೀಮಿತವಾಗಿದ್ದ ಕೋವಿಡ್‌ 19 ಸೋಂಕು, ಈಗ ಬಾಗೇಪಲ್ಲಿಗೂ ವಿಸ್ತರಿಸಿ ಕೊಂಡಿದೆ.  ಮಹಾರಾಷ್ಟ್ರದಿಂದ ಆಗಮಿಸಿರುವ ಕೂಲಿ ಕಾರ್ಮಿಕರಲ್ಲಿ ಬಹುತೇಕರು ಬಾಗೇಪಲ್ಲಿ ತಾಲೂಕಿಗೆ ಸೇರಿದವರಾಗಿದ್ದು, ಈ ಪೈಕಿ ಸದ್ದುಪಲ್ಲಿ ತಾಂಡಾಗಳಿಗೆ ಸೇರಿದ ಒಟ್ಟು 13 ಮಂದಿಯಲ್ಲಿ ಸೋಂಕು ಇರುವುದು ದೃಢ ಪಟ್ಟಿದೆ ಎಂದು  ಜಿಲ್ಲಾ ಆರೋಗ್ಯ ಇಲಾಖೆ ಸರ್ವೇಕ್ಷಣಾಧಿಕಾರಿ ಡಾ.ಬಾಬುರೆಡ್ಡಿ “ಉದಯವಾಣಿ’ಗೆ ತಿಳಿಸಿದರು.

ಹೊರ ರಾಜ್ಯಗಳಿಂದ ಜಿಲ್ಲೆಗೆ ವಲಸೆ ಕಾರ್ಮಿಕರು ಆಗಮಿ ಸುತ್ತಿರುವುದರಿಂದ ಕೋವಿಡ್‌ 19 ಸೋಂಕು ಹೆಚ್ಚಾಗಿದೆಯೆ ಹೊರತು ಜಿಲ್ಲೆಯ ನಾಗರಿಕರಲ್ಲಿ ಕೋವಿಡ್‌ 19 ಸೋಂಕು ಕಂಡು ಬಂದಿಲ್ಲ. ಜಿಲ್ಲೆಯಲ್ಲಿ ಬರೀ 5 ಕೋವಿಡ್‌-19  ಸಕ್ರಿಯ  ಪ್ರಕರಣಗಳು ಬಿಟ್ಟರೆ ಉಳಿದೆಲ್ಲಾ ಹೊರ ರಾಜ್ಯಗಳಿಂದ ಬಂದ ವಲಸಿಗರಲ್ಲಿ ಕಾಣಿಸಿಕೊಂಡ ಪ್ರಕರಣಗಳು.
-ಡಾ.ಕೆ.ಸುಧಾಕರ್‌, ಜಿಲ್ಲಾ ಉಸ್ತುವಾರಿ ಸಚಿವ

ಟಾಪ್ ನ್ಯೂಸ್

7-hunasagi

Hunasagi: ಬೈಕ್ ಹಾಯ್ದು ಇಬ್ಬರು ಮಹಿಳೆಯರು ಸಾವು

Kejriwal

Aravind Kejriwal: ಇನ್ನೂ ಕೆಲವು ದಿನ ಕೇಜ್ರಿವಾಲ್‌ ಗೆ ತಿಹಾರ್‌ ಜೈಲೇ ಗತಿ!

5-Kunigal

Kunigal: ಗಮನ ಬೇರೆಡೆಗೆ ಸೆಳೆದು 3.30 ಲಕ್ಷ ರೂ. ಹಣ ದೋಚಿ ಪರಾರಿಯಾದ ದುಷ್ಕರ್ಮಿಗಳು

David Warner retired from all formats of the cricket

David Warner; ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಸ್ಟೈಲಿಶ್ ಬ್ಯಾಟರ್ ವಾರ್ನರ್

3-Sagara

Sagara: ಭಾಗವತ ವೇಣುಗೋಪಾಲ ಕೆಳಮನೆ ಇನ್ನಿಲ್ಲ

2-DKSHI

Subramanya: ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

Lok Sabha Speaker: ಲೋಕಸಭಾ ಸ್ಪೀಕರ್ ಚುನಾವಣೆಗೆ ಓಂ ಬಿರ್ಲಾ, ಕೆ. ಸುರೇಶ್ ನಾಮಪತ್ರ ಸಲ್ಲಿಕೆ

Speaker Election: ಲೋಕಸಭಾ ಸ್ಪೀಕರ್ ಚುನಾವಣೆಗೆ ಓಂ ಬಿರ್ಲಾ, ಕೆ.ಸುರೇಶ್ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pradeep-eshwar

Chikkaballapur: ಶಾಸಕ ಪ್ರದೀಪ್ ಈಶ್ವರ್ ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ

3-chikkaballapura

Chikkaballapur: ಯೋಗಾ ದಿನಾಚರಣೆಯಲ್ಲಿ ರಾಜಕೀಯ ಕಡು ವೈರಿಗಳ ಸಂಗಮ

Cow

Chikkaballapura: ಮುಂಗಾರು ಬೆನ್ನಲ್ಲೇ ಹೈನೋದ್ಯಮಕ್ಕೆ ಜೀವಕಳೆ

Chikkaballapura; ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕ ಸಾವು

Chikkaballapura; ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕ ಸಾವು

Kodi Mutt Seer expressed his opinion regarding actor Darshan’s case

ನಟ ದರ್ಶನ್ ಪ್ರಕರಣಕ್ಕೆ ಸಂಬಂಧಿಸಿ ಅಭಿಪ್ರಾಯ ವ್ಯಕ್ತಪಡಿಸಿದ ಕೋಡಿ ಮಠದ ಶ್ರೀಗಳು

MUST WATCH

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

ಹೊಸ ಸೇರ್ಪಡೆ

Karje

Udayavani Campaign: ಉಡುಪಿ-ನಮ್ಮೂರಿಗೆ ನರ್ಮ್ ಕಳ್ಸಿ ಮಾರ್ರೆ!

7-hunasagi

Hunasagi: ಬೈಕ್ ಹಾಯ್ದು ಇಬ್ಬರು ಮಹಿಳೆಯರು ಸಾವು

6-Chikodi

Chikodi: ತುರ್ತು ಪರಿಸ್ಥಿತಿ ವಿರೋಧಿಸಿ ಬಿಜೆಪಿ ಬೃಹತ್ ಪ್ರತಿಭಟನೆ

Kejriwal

Aravind Kejriwal: ಇನ್ನೂ ಕೆಲವು ದಿನ ಕೇಜ್ರಿವಾಲ್‌ ಗೆ ತಿಹಾರ್‌ ಜೈಲೇ ಗತಿ!

5-Kunigal

Kunigal: ಗಮನ ಬೇರೆಡೆಗೆ ಸೆಳೆದು 3.30 ಲಕ್ಷ ರೂ. ಹಣ ದೋಚಿ ಪರಾರಿಯಾದ ದುಷ್ಕರ್ಮಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.